ಬಳ್ಳಾರಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಆರಂಭವಾದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದ ಬಳ್ಳಾರಿ ಜಿಲ್ಲೆಗೆ ಕಾಲಿಟ್ಟಿದ್ದು,ಇಂದಿಗೆ ಒಟ್ಟು 1000 ಕಿ.ಮೀ ನಡಿಗೆಯನ್ನು ಯಶಸ್ವಿಯಾಗಿ ಪೂರೈಸಿದೆ.

ಸ್ವತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧಿಯವರು 1000 ಕಿಲೋಮೀಟರ್ ಪಾದಯಾತ್ರೆಯನ್ನು ನಡೆಸಿದ್ದರು. ಅಂದು ಬ್ರಿಟಿಷರಿಂದ ಸ್ವತಂತ್ರಕ್ಕೆ ಯಾತ್ರೆ, ಇಂದು ದ್ವೇಷ, ಸರ್ವಾಧಿಕಾರ, ಜನವಿರೋಧಿಗಳಿಂದ ಭಾರತವನ್ನು ಮುಕ್ತಗೊಳಿಸಲು ಯಾತ್ರೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ.