ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಛತ್ತೀಸ್‌ಗಢ: ಆಡಳಿತದೆದುರು ಶರಣಾದ 22 ಮಾವೋವಾದಿಗಳು

PPeepal Media

Peepal Media • ದೇಶ

• 1 ನಿಮಿಷದ ಓದು

ಛತ್ತೀಸ್‌ಗಢ: ಆಡಳಿತದೆದುರು ಶರಣಾದ 22 ಮಾವೋವಾದಿಗಳು

ಛತ್ತೀಸ್‌ಗಢ ರಾಜ್ಯವು ಇಂದು ಒಂದು ಪ್ರಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಇಂದು ಸುಮಾರು 22 ಮಾವೋವಾದಿಗಳು ಭದ್ರತಾ ಪಡೆಗಳಿಗೆ ಶರಣಾಗಿದ್ದಾರೆ.

ಶರಣಾದವರಲ್ಲಿ ಒಂಬತ್ತು ಮಹಿಳೆಯರು ಸೇರಿದ್ದಾರೆ. 22 ಮಾವೋವಾದಿಗಳಲ್ಲಿ 12 ಜನರ ಮೇಲೆ 40 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶರಣಾದವರಿಗೆ ತಲಾ 50,000 ಸಹಾಯಧನ ನೀಡಲಾಗಿದೆ. ಸರ್ಕಾರದಿಂದ ಪುನರ್ವಸತಿ ಯೋಜನೆಯನ್ನು ಜಾರಿಗೆ ತರಲಾಗುವುದು ಎನ್ನಲಾಗಿದೆ.

ಕಳೆದ ಒಂದು ವರ್ಷದಲ್ಲಿ ಸುಕ್ಮಾ ಸೇರಿದಂತೆ ಬಸ್ತಾರ್ ಪ್ರದೇಶದಲ್ಲಿ ಸುಮಾರು 792 ಮಾವೋವಾದಿಗಳು ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವರ್ಷವೂ ಏಪ್ರಿಲ್ 7 ರಂದು 26 ನಕ್ಸಲರು ಶರಣಾಗಿದ್ದಾರು. ಕೆಲವು ದಿನಗಳ ಹಿಂದೆ, 70 ಮಾವೋವಾದಿಗಳು ಸಾಮೂಹಿಕವಾಗಿ ಶರಣಾಗಿದ್ದರು.

ಮುಂದಿನ ಮಾರ್ಚ್ ವೇಳೆಗೆ ನಕ್ಸಲರನ್ನು ನಿರ್ಮೂಲನೆ ಮಾಡಲಾಗುತ್ತದೆ

ಗುರುವಾರ ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದ ಕೇಂದ್ರ ಮೀಸಲು ಪೊಲೀಸ್ ಪಡೆಯ 86ನೇ ಸ್ಥಾಪನಾ ದಿನಾಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾ, ನಕ್ಸಲರು ಕೇವಲ ನಾಲ್ಕು ಜಿಲ್ಲೆಗಳಿಗೆ ಸೀಮಿತರಾಗಿದ್ದಾರೆ ಎಂದು ಹೇಳಿದರು.

ಮುಂದಿನ ವರ್ಷ ಮಾರ್ಚ್ 31 ರೊಳಗೆ ನಕ್ಸಲರನ್ನು ನಿರ್ಮೂಲನೆ ಮಾಡಲಾಗುವುದು ಎಂದು ಅವರು ಹೇಳಿದರು. ನಕ್ಸಲರನ್ನು ನಿರ್ಮೂಲನೆ ಮಾಡುವಲ್ಲಿ ಸಿಆರ್‌ಪಿಎಫ್ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಅವರು ಹೇಳಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು