ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಸದನ ಸಮಿತಿ ರಚನೆ: ಸಮಿತಿಯಲ್ಲಿ ಓವೈಸಿ, ತೇಜಸ್ವಿ ಸೂರ್ಯ

P

Peepal Media Desk • ದೇಶ

• 1 ನಿಮಿಷದ ಓದು

ವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಸದನ ಸಮಿತಿ ರಚನೆ: ಸಮಿತಿಯಲ್ಲಿ ಓವೈಸಿ, ತೇಜಸ್ವಿ ಸೂರ್ಯ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಪರಿಶೀಲನೆಗೆ ಶುಕ್ರವಾರ ಕೇಂದ್ರ ಸರ್ಕಾರ 31 ಸದಸ್ಯರ ಜಂಟಿ ಸದನ ಸಮಿತಿ (ಜೆಪಿಸಿ) ರಚಿಸಿದೆ. ಸಮಿತಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಪ್ರಸ್ತಾವನೆಯನ್ನು ಉಭಯ ಸದನಗಳು ಅಂಗೀಕರಿಸಿವೆ.

ಅಸ್ತಿತ್ವದಲ್ಲಿರುವ 1995ರ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ತಿದ್ದುಪಡಿ ಮಸೂದೆ ಪ್ರಸ್ತಾಪಿಸಿದೆ. ಅವುಗಳ ಬಗ್ಗೆ ಸದನ ಸಮಿತಿ ಪರಿಶೀಲನೆ ನಡೆಸಲಿದೆ.

ಸಂಸತ್ತಿನ ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಜಂಟಿ ಸದನ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ. ಸಮಿತಿಯ 21 ಸದಸ್ಯರನ್ನು ಲೋಕಸಭೆಯಿಂದ ಮತ್ತು ಉಳಿದವರು ರಾಜ್ಯಸಭೆಯಿಂದ ಆಯ್ಕೆ ಮಾಡಲಾಗಿದೆ.

ಲೋಕಸಭೆಯ ಸಂಸದರಾದ ಜಗದಾಂಬಿಕಾ ಪಾಲ್, ಡಾ ನಿಶಿಕಾಂತ್ ದುಬೆ, ತೇಜಸ್ವಿ ಸೂರ್ಯ, ಅಪರಾಜಿತಾ ಸಾರಂಗಿ, ಡಾ ಸಂಜಯ್ ಜೈಸ್ವಾಲ್, ದಿಲೀಪ್ ಸೈಕಿಯಾ, ಅಭಿಜಿತ್ ಗಂಗೋಪಾದಾಯ, ಡಿ ಕೆ ಅರುಣಾ, ಗೌರವ್ ಗೊಗೊಯ್, ಇಮ್ರಾನ್ ಮಸೂದ್, ಡಾ ಮೊಹಮ್ಮದ್ ಜಾವೇದ್, ಮೊಹಿಬ್ಬುಲ್ಲಾ, ಕಲ್ಯಾಣ್ ಬ್ಯಾನರ್ಜಿ, ಎ ರಾಜಾ, ಲಾವು ಶ್ರೀಕೃಷ್ಣ ದೇವರಾಯಲು, ದಿಲೇಶ್ವರ ಕಮೈತ್, ಅರವಿಂದ್ ಸಾವಂತ್, ಮಹ್ತ್ರೆ ಬಲ್ಯ ಮಾಮ ಸುರೇಶ್ ಗೋಪಿನಾಥ್, ನರೇಶ್ ಗಣಪತ್ ಮ್ಹಾಸ್ಕೆ, ಅರುಣ್ ಭಾರತಿ ಮತ್ತು ಅಸಾದುದ್ದೀನ್ ಓವೈಸಿ ಸಮಿಯಲ್ಲಿ ಇದ್ದಾರೆ.

ರಾಜ್ಯಸಭೆಯಿಂದ ಬ್ರಿಜ್ ಲಾಲ್, ಮೇಧಾ ವಿಶ್ರಮ್ ಕುಲಕರ್ಣಿ, ಗುಲಾಮ್ ಅಲಿ, ರಾಧಾ ಮೋಹನ್ ದಾಸ್ ಅಗರವಾಲ್ (ಎಲ್ಲರೂ ಬಿಜೆಪಿ) ಸೈಯದ್ ನಾಸೀರ್ ಹುಸೇನ್ (ಕಾಂಗ್ರೆಸ್), ಮೊಹಮ್ಮದ್ ನದಿಮುಲ್ ಹಕ್ (ಟಿಎಂಸಿ), ವಿ ವಿಜಯಸಾಯಿ ರೆಡ್ಡಿ (ವೈಎಸ್‌ಆರ್‌ಸಿಪಿ) , ಎಂ ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ), ಸಂಜಯ್ ಸಿಂಗ್ (ಎಎಪಿ) ಮತ್ತು ನಾಮನಿರ್ದೇಶಿತ ಸದಸ್ಯರಾದ ಧರ್ಮಸ್ಥಳದ ಡಾ. ವಿರೇಂದ್ರ ಹೆಗ್ಗಡೆ ಸಮಿತಿಯ ಸದ್ಯಸರಾಗಿದ್ದಾರೆ.

ಮುಸ್ಲಿಮರನ್ನು ಗುರಿಯಾಗಿಸಿ ಮಸೂದೆಯನ್ನು ರೂಪಿಸಲಾಗಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಗಿದ್ದು, ತೀವ್ರ ಚರ್ಚೆಯ ನಂತರ ಜಂಟಿ ಸದನ ಸಮಿತಿಗೆ ಕಳುಹಿಸಲಾಗಿದೆ. ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version