ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಿನಕ್ಕೆ 40 ವಿದ್ಯಾರ್ಥಿಗಳ ಬಲಿ: ಕಳೆದ 10 ವರ್ಷಗಳಲ್ಲಿ 1.24 ಲಕ್ಷ ವಿದ್ಯಾರ್ಥಿಗಳ ಆತ್ಮಹತ್ಯೆ

PPeepal Media

Peepal Media • ದೇಶ

• 1 ನಿಮಿಷದ ಓದು

ದಿನಕ್ಕೆ 40 ವಿದ್ಯಾರ್ಥಿಗಳ ಬಲಿ: ಕಳೆದ 10 ವರ್ಷಗಳಲ್ಲಿ 1.24 ಲಕ್ಷ ವಿದ್ಯಾರ್ಥಿಗಳ ಆತ್ಮಹತ್ಯೆ

ಪ್ರತಿದಿನ ದೇಶದಲ್ಲಿ ಸರಾಸರಿ 40 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂಬ ಘೋರ ಸತ್ಯ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯಿಂದ ಹೊರಬಿದ್ದಿದೆ. ಇತ್ತೀಚೆಗೆ ನಡೆದ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯ ಆಘಾತಕ್ಕೆ ಒಳಗಾಗಿ ದೇಶಾದ್ಯಂತ ಸುಮಾರು 22 ವಿದ್ಯಾರ್ಥಿಗಳು ಜೀವ ಕಳೆದುಕೊಂಡ ಬೆನ್ನಲ್ಲೇ ಈ ಅಂಕಿಅಂಶಗಳು ತೀವ್ರ ಆತಂಕಕ್ಕೆ ಕಾರಣವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ 2014 ರಿಂದ 2024 ರವರೆಗಿನ ದಶಕದ ಅವಧಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಶೇಕಡಾ 80 ರಷ್ಟು ಏರಿಕೆಯಾಗಿದೆ.

2014 ರಲ್ಲಿ 8,068 ರಷ್ಟಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆಯು 2024 ರ ವೇಳೆಗೆ 14,488 ಕ್ಕೆ ಏರಿಕೆಯಾಗಿದೆ. 2014 ರಿಂದ 2024 ರವರೆಗಿನ 10 ವರ್ಷಗಳಲ್ಲಿ ವಿವಿಧ ಕಾರಣಗಳಿಂದ ಒಟ್ಟು 1,23,914 ವಿದ್ಯಾರ್ಥಿಗಳು ತಮ್ಮ ಜೀವನ ಅಂತ್ಯಗೊಳಿಸಿದ್ದಾರೆ. ಇದರಲ್ಲಿ ಪರೀಕ್ಷಾ ಭಯ ಹಾಗೂ ಶೈಕ್ಷಣಿಕ ಒತ್ತಡದಿಂದಲೇ 25,000 ಕ್ಕೂ ಹೆಚ್ಚು (ಶೇ. 21) ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳೇ ಮುಂಚೂಣಿಯಲ್ಲಿ

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳಲ್ಲಿ ಶೇಕಡಾ 55 ರಷ್ಟು ಮಂದಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾದರೆ, ಶೇಕಡಾ 42 ರಷ್ಟು ಮಂದಿ 18 ರಿಂದ 30 ವರ್ಷದೊಳಗಿನ ಯುವಜನರಾಗಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳು ಮೊದಲ ಮೂರು ಸ್ಥಾನಗಳಲ್ಲಿವೆ.

2024 ರ ವರದಿಯಂತೆ ಮಹಾರಾಷ್ಟ್ರದಲ್ಲಿ ಗರಿಷ್ಠ 1,917 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರೆ, ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ (1,585), ಮಧ್ಯಪ್ರದೇಶ (1,447) ಹಾಗೂ ತಮಿಳುನಾಡು (1,287) ರಾಜ್ಯಗಳಿವೆ. 2024 ರಲ್ಲಿ ಜೀವ ಕಳೆದುಕೊಂಡ 14,488 ವಿದ್ಯಾರ್ಥಿಗಳಲ್ಲಿ 7,669 ಬಾಲಕರು ಹಾಗೂ 6,819 ಬಾಲಕಿಯರಿದ್ದಾರೆ.

ತೆಲಂಗಾಣದಲ್ಲೂ ಹೆಚ್ಚುತ್ತಿರುವ ಪ್ರಕರಣಗಳು

ತೆಲಂಗಾಣ ರಾಜ್ಯದಲ್ಲೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿದ್ದು, ದೇಶದಲ್ಲೇ 6 ನೇ ಸ್ಥಾನದಲ್ಲಿದೆ. 2024 ರಲ್ಲಿ ತೆಲಂಗಾಣದಲ್ಲಿ 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ ನಿವಾರಣೆಗೆ ಕೇಂದ್ರ ಶಿಕ್ಷಣ ಸಚಿವಾಲಯವು ಜುಲೈ 2020 ರಲ್ಲಿ ಆರಂಭಿಸಿದ ಮಾನಸಿಕ ಆರೋಗ್ಯ ಸಹಾಯವಾಣಿಗೆ (Help Line) ಇದುವರೆಗೆ 3.32 ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿರುವುದು ಸಮಸ್ಯೆಯ ತೀವ್ರತೆಗೆ ಕನ್ನಡಿ ಹಿಡಿದಿದೆ.

ದಶಕದ ಅಂಕಿಅಂಶಗಳ ವಿವರ

  • ಒಟ್ಟು ಆತ್ಮಹತ್ಯೆಗಳು (2014-2024): 1,23,914
  • 2014 ರಲ್ಲಿ ಸಂಭವಿಸಿದ ಸಾವುಗಳು: 8,068
  • 2024 ರಲ್ಲಿ ಸಂಭವಿಸಿದ ಸಾವುಗಳು: 14,488
  • 10 ವರ್ಷಗಳಲ್ಲಿ ಕಂಡುಬಂದ ಏರಿಕೆ: ಶೇಕಡಾ 80
  • ಪರೀಕ್ಷಾ ಭಯದಿಂದಾದ ಆತ್ಮಹತ್ಯೆಗಳು: 25,000

ಪ್ರಮುಖ ಕಾರಣಗಳು

  • ಕುಟುಂಬದ ತೊಂದರೆಗಳು ಮತ್ತು ಪರೀಕ್ಷಾ ಭಯ: ಶೇ. 33.5
  • ಅನಾರೋಗ್ಯ ಮತ್ತು ದೈಹಿಕ/ಮಾನಸಿಕ ತೊಂದರೆ: ಶೇ. 17.9
  • ಮಾದಕ ವ್ಯಸನ: ಶೇ. 7.6
  • ನಿರುದ್ಯೋಗ ಮತ್ತು ಭವಿಷ್ಯದ ಆತಂಕ: ಶೇ. 1.5

ವರ್ಷವಾರು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ

ವರ್ಷವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ
20148,068
20158,934
20169,474
20179,905
201810,159
201910,335
202012,526
202113,089
202213,044
202313,892
202414,488
PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು