ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2021ರಲ್ಲಿ ಹೆಲ್ಮೆಟ್‌ ಧರಿಸದ ಕಾರಣಕ್ಕೆ ರಸ್ತೆ ಅಪಘಾತದಲ್ಲಿ ತೀರಿಕೊಂಡವರ ಸಂಖ್ಯೆ46,593

P

Peepal Media • ದೇಶ

• 1 ನಿಮಿಷದ ಓದು

2021ರಲ್ಲಿ ಹೆಲ್ಮೆಟ್‌ ಧರಿಸದ ಕಾರಣಕ್ಕೆ ರಸ್ತೆ ಅಪಘಾತದಲ್ಲಿ ತೀರಿಕೊಂಡವರ ಸಂಖ್ಯೆ46,593

ಕಳೆದ ವರ್ಷ (2021) ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದ ಕಾರಣ ರಸ್ತೆ ಅಪಘಾತದಲ್ಲಿ ಮರಣಿಸಿದವರ ಒಟ್ಟು ಸಂಖ್ಯೆ 46,593 ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ವರದಿ ತಿಳಿಸಿದೆ. ಇವರಲ್ಲಿ 32,877 ವಾಹನ ಚಾಲಕರು ಮತ್ತು 13,716 ಹಿಂಭಾಗದ ಪ್ರಯಾಣಿಕರು. ಹಾಗೆಯೇ 2021ರಲ್ಲಿ ಸೀಟ್ ಬೆಲ್ಟ್ ಧರಿಸದ 16,397 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ. ಇವರಲ್ಲಿ 8,438 ಚಾಲಕರು ಮತ್ತು ಉಳಿದ 7,959 ಸಹ ಪ್ರಯಾಣಿಕರು.

2021ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ವರದಿಯಾಗಿದ್ದು, ಈ ಪೈಕಿ 1,28,825 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸಿವೆ. ಈ ದುರ್ಘಟನೆಗಳಲ್ಲಿ 56,007 ಮಂದಿ ಸಾವನ್ನಪ್ಪಿದ್ದು, 1,17,765 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

2020ಕ್ಕೆ ಹೋಲಿಸಿದರೆ 2021ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ 12.6%ರಷ್ಟು ಹೆಚ್ಚಾಗಿದೆ, ಹಾಗೂ ಸತ್ತವರ ಸಂಖ್ಯೆ 16.9%ರಷ್ಟು ಏರಿಕೆಯಾಗಿದೆ ಮತ್ತು ಗಾಯಗೊಂಡವರ ಸಂಖ್ಯೆ 10.4%ರಷ್ಟು ಏರಿಕೆಯಾಗಿದೆ.

ಉತ್ತರ ಪ್ರದೇಶವು ಹೆಚ್ಚು ರಸ್ತೆ ಅಪಘಾತಗಳ ಸಾವಿನ ಸಂಖ್ಯೆ ಹೊಂದಿದ್ದು, ಒಟ್ಟು ಸಾವುನೋವುಗಳಲ್ಲಿ ಈ ರಾಜ್ಯದ ಪಾಲು 15.2%ರಷ್ಟು ಆಗಿದ್ದರೆ, ತಮಿಳುನಾಡು 9.4%, ಮಹಾರಾಷ್ಟ್ರ 7.3% ಮತ್ತು ರಾಜಸ್ಥಾನದ ಪಾಲು 6.8%.


“ಹೆಚ್ಚು ರಸ್ತೆ ಅಪಘಾತಕ್ಕೆ ಈಡಾದವರಲ್ಲಿ 18-45 ವರ್ಷಗ ನಡುವಿನವರಿದ್ದು, ಒಟ್ಟಾರೆ ಸಾವಿನ ಸಂಖ್ಯೆಯಲ್ಲಿ ಈ ವಯಸ್ಸಿನ ಶ್ರೇಣಿಯವರ ಪಾಲು ಸುಮಾರು 67% ರಷ್ಟಿದೆ” ಎಂದು ವರದಿ ಹೇಳಿದೆ.

ಅಪಘಾತಗಳಲ್ಲಿ ದುರ್ಮರಣಗಳನ್ನು ಕಡಿಮೆ ಮಾಡಲು ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಸೂಕ್ಷ್ಮ ವಿಭಾಗಗಳಲ್ಲಿ ಟ್ರಾಫಿಕ್ ಎಚ್ಚರಿಕೆ ಫಲಕಗಳು, ಡೆಲಿನೇಟರ್‌ಗಳು, ರೋಡ್ ಸ್ಟಡ್‌ಗಳು, ಬಾರ್ ಮಾರ್ಕಿಂಗ್‌ಗಳು ಮತ್ತು ಹಂಪ್‌ಗಳನ್ನು ಅಪ್ರೋಚ್ ರಸ್ತೆಗಳಲ್ಲಿ ಅಳವಡಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ವರದಿಯು ಸೂಚಿಸಿದೆ.

ಸೆಪ್ಟೆಂಬರ್ 4ರಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮತ್ತು ಅವರ ಸಹ-ಪ್ರಯಾಣಿಕರಾದ ಜಹಾಂಗೀರ್ ಪಾಂಡೋಲೆ ಅವರು ಸಾವನ್ನಪ್ಪಿದ ನಂತರ, ಎಲ್ಲಾ ಕಾರು ಪ್ರಯಾಣಿಕರು (ಹಿಂದಿನ ಸೀಟಿನ) ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಕೇಂದ್ರ ಹೇಳಿತ್ತು.


ಈ ವರದಿಯು ಪ್ರತಿ ನೂರು ಅಪಘಾತಗಳಿಗೆ ಜನರ ಸಾವಿನ ಸಂಖ್ಯೆ 2000 ಇಸವಿಯಿಂದ ಹೆಚ್ಚಾಗುತ್ತಿದ್ದು, ಇದು ಅಪಘಾತ ಚಿಕಿತ್ಸೆಯ ಸುಧಾರಿಸುವಿಕೆ ಮತ್ತು ಟ್ರಾಫಿಕ್‌ ವ್ಯವಸ್ಥೆಯನ್ನು ಸುಗಮಗೊಳಿಸುವ ಅಗತ್ಯವನ್ನು ಎತ್ತಿ ತೋರಿಸುತ್ತದೆ ಎಂದು ವರದಿ ಹೇಳಿದೆ.

ಹಿಂದಿನ ಸೀಟುಗಳಲ್ಲಿ ಕುಳಿತು ಪ್ರಯಾಣಿಸುವ ಪ್ರಯಾಣಿಕರು ಸೀಟ್‌ ಬೆಲ್ಟ್‌ ಧರಿಸದಿದ್ದಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ ನಿಯಮ 138 (3) ಅಡಿಯಲ್ಲಿ 1,000 ದಂಡ ವಿಧಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದರು.

ಇತ್ತೀಚೆಗೆ ಬೆಂಗಳೂರಿನ ರಸ್ತೆಗಳು ಹದಗೆಟ್ಟ ಕಾರಣ ರಸ್ತೆಗುಂಡಿಗೆ ಹಲವು ಬೈಕ್‌, ಸ್ಕೂಟರ್‌ ಚಾಲಕರು ಬಲಿಯಾಗಿದ್ದನ್ನು ಈ ಹಿನ್ನೆಲೆಯಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ವಿಷಯಗಳು: #india #kannada #news #peepal #peepalmedia
P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version