ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾ ಕುಂಭಮೇಳದ ದಾರಿಯಲ್ಲಿ ಮತ್ತೊಂದು ದುರಂತ; ಬಸ್-ಟ್ರಕ್ ಡಿಕ್ಕಿ, ಏಳು ಭಕ್ತರ ಸಾವು

P

Peepal Media • ದೇಶ

• 1 ನಿಮಿಷದ ಓದು

ಮಹಾ ಕುಂಭಮೇಳದ ದಾರಿಯಲ್ಲಿ ಮತ್ತೊಂದು ದುರಂತ; ಬಸ್-ಟ್ರಕ್ ಡಿಕ್ಕಿ, ಏಳು ಭಕ್ತರ ಸಾವು

ಮಹಾ ಕುಂಭಮೇಳದ ದಾರಿಯಲ್ಲಿ ಮತ್ತೊಂದು ದುರಂತ; ಬಸ್-ಟ್ರಕ್ ಡಿಕ್ಕಿ, ಏಳು ಭಕ್ತರ ಸಾವು

ಮಹಾ ಕುಂಭಮೇಳದ ಹಾದಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪವಿತ್ರ ಸ್ನಾನ ಮಾಡಿ ಮಿನಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಭಕ್ತರನ್ನು ಟ್ರಕ್ ರೂಪದಲ್ಲಿ ಸಾವು ಬೆನ್ನಟ್ಟಿದೆ.

ಮಧ್ಯಪ್ರದೇಶದ ಜಬಲ್ಪುರ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸೊಂದು ತುಂಡಾಗಿದೆ. ಈ ಅಪಘಾತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡರು. ಅನೇಕ ಜನರು ಗಾಯಗೊಂಡಿರುವುದಾಗಿ ಸುದ್ದಿ ಬರುತ್ತಿದೆ. ಮಾಹಿತಿ ತಿಳಿದ ತಕ್ಷಣ ಜಬಲ್ಪುರ ಕಲೆಕ್ಟರ್ ಮತ್ತು ಎಸ್‌ಸಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ಮಂಗಳವಾರ ಬೆಳಿಗ್ಗೆ 9:15 ಕ್ಕೆ ಮೊಹ್ಲಾ-ಬರ್ಗಿ ಬಳಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಬಸ್ ಆಂಧ್ರಪ್ರದೇಶಕ್ಕೆ ಸೇರಿದ್ದೆಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪ್ರಯಾಗ್‌ರಾಜ್‌ಗೆ ಹೊರಟ ಭಕ್ತರಿಂದ ಎಲ್ಲಾ ರಸ್ತೆಗಳು ಈಗಾಗಲೇ ತುಂಬಿವೆ. ಇತ್ತೀಚಿನ ಅಪಘಾತದಿಂದಾಗಿ NH-30 ರಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. ಜಾಗೃತರಾದ ಪೊಲೀಸರು ಪ್ರದೇಶವನ್ನು ತೆರವುಗೊಳಿಸುತ್ತಿದ್ದಾರೆ.

ಏತನ್ಮಧ್ಯೆ, ಉತ್ತರ ಪ್ರದೇಶದ ಆಗ್ರಾದ ಚಿತ್ರಹತ್ ಪ್ರದೇಶದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಕುಂಭಮೇಳದಿಂದ ಹಿಂತಿರುಗುತ್ತಿದ್ದ ಕಾರು ಸಹಾಯಪುರ ಗ್ರಾಮದ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದು ದಂಪತಿಗಳು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ. ಮೃತರನ್ನು ಮಹೇಂದ್ರ ಪ್ರತಾಪ್ (50) ಮತ್ತು ಅವರ ಪತ್ನಿ ಭೂರಿ ದೇವಿ (48) ಎಂದು ಗುರುತಿಸಲಾಗಿದೆ. ಸೋಮವಾರ, ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳಕ್ಕೆ ಹೋಗುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಡಿಶಾದ ರೂರ್ಕೆಲಾದ 34 ವರ್ಷದ ಶಕ್ತಿಂ ಪೂಜಾರಿ ಸಾವನ್ನಪ್ಪಿದರು ಮತ್ತು ಇತರ ಆರು ಮಂದಿ ಗಾಯಗೊಂಡರು.
https://x.com/ians_india/status/1889179543262355852

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version