ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾಜಿ IAS ಅಧಿಕಾರಿ, ರಾಜಕಾರಣಿ, ‘ನಟ ಕೆ. ಶಿವರಾಮ್’ ನಿಧನ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಾಜಿ IAS ಅಧಿಕಾರಿ, ರಾಜಕಾರಣಿ, ‘ನಟ ಕೆ. ಶಿವರಾಮ್’ ನಿಧನ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ.

Actor K Sivaram No More: “ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಅವರು ತಮ್‌ಮ ಪೋಸ್ಟಿನಲ್ಲಿ ಬರೆದಿದ್ದಾರೆ.

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಬೆಳಗ್ಗೆ ಅಸುನೀಗಿದ್ದಾರೆ.

ನಟ ಕೆ.ಶಿವರಾಮ್ ಪರಿಚಯ

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1993ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

ರಾಜಕೀಯಕ್ಕೂ ಧುಮುಕ್ಕಿದ್ದ ಶಿವರಾಮ್

2013ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು. ಇಂತಹ ಅವರು ಇಂದು ನಿಧರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

ಸಮಾಜದ ಹಲವು ಗಣ್ಯರು ಅಗಲಿದ ಚೇತನಕ್ಕೆ ಶೃದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು