ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

131 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತ ನಾಯಕ ಜಗಜಿತ್ ಸಿಂಗ್

PPeepal Media

Peepal Media ದೇಶ

• 1 ನಿಮಿಷದ ಓದು

131 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತ ನಾಯಕ ಜಗಜಿತ್ ಸಿಂಗ್

ಚಂಡೀಗಢ: ಪಂಜಾಬ್ ಮೂಲದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ 131 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಅವರು ರೈತ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಸಾಧಿಸಲು ಚಳುವಳಿಯನ್ನು ಮುಂದಕ್ಕೆ ಕೊಂಡೊಯ್ಯುವಂತೆ ಒತ್ತಾಯಿಸಿದರು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಕಾನೂನುಬದ್ಧ ಭರವಸೆ ಮತ್ತು ಇತರ ರೈತ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದಿಂದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಗಜಿತ್ ಸಿಂಗ್ ದಲ್ವಾಲ್ ಕಳೆದ ವರ್ಷ ನವೆಂಬರ್ 26ರಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಈ ನಡುವೆ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತ್ತು.

ಈ ಸಂದರ್ಭದಲ್ಲಿ, ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್‌ನಲ್ಲಿ ಕಿಸಾನ್ ಮಹಾಪಂಚಾಯತ್ತನ್ನು ಆಯೋಜಿಸಲಾಯಿತು. ರೈತರ ಸಭೆಯಲ್ಲಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸುವಂತೆ ಜಗಜಿತ್ ಸಿಂಗ್ ದಲ್ಲೇವಾಲ್‌ ಅವರನ್ನು ಒತ್ತಾಯಿಸಲಾಯಿತು. ಈ ಹಿನ್ನೆಲೆಯಲ್ಲಿ, ಶನಿವಾರ ಆಸ್ಪತ್ರೆಯಿಂದ ಮನೆಗೆ ಮರಳಿದ ಜಗಜಿತ್ ಸಿಂಗ್ ದಲ್ಲೇವಾಲ್‌, ರೈತರ ಕೋರಿಕೆಯ ಮೇರೆಗೆ ಭಾನುವಾರ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.

ಮತ್ತೊಂದೆಡೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಕೂಡ ಶನಿವಾರ ಉಪವಾಸ ಸತ್ಯಾಗ್ರಹ ಕೊನೆಗೊಳಿಸುವಂತೆ ಜಗಜಿತ್ ಸಿಂಗ್ ದಲ್ಲೇವಾಲ್‌ ಅವರನ್ನು ಕೇಳಿಕೊಂಡರು. ರೈತರ ಬೇಡಿಕೆಗಳ ಕುರಿತು ಮೇ 4 ರಂದು ಕೇಂದ್ರ ಸರ್ಕಾರ ರೈತ ಸಂಘಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದೆ ಎಂದು ಬಿಟ್ಟು ಭರವಸೆ ನೀಡಿದರು.

ನಿಮ್ಮ ಆರೋಗ್ಯ ಬಹಳ ಮುಖ್ಯ. ನಿಮ್ಮ ಜೀವ ಪಂಜಾಬ್ ಜನರಿಗೆ ಅಮೂಲ್ಯ. ರೈತರು ಮತ್ತು ಕೃಷಿ ಕಾರ್ಮಿಕರ ಹೋರಾಟಕ್ಕೆ ನಿಮ್ಮ ನಾಯಕತ್ವ ಯಾವಾಗಲೂ ಅಗತ್ಯವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು