ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಗೆ ಇನ್ನೊಂದು ಆಘಾತ: BJP, NDA ಜೊತೆಗಿನ ದೋಸ್ತಿ ಕಟ್‌ ಮಾಡಿದ AIADMK

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಗೆ ಇನ್ನೊಂದು ಆಘಾತ: BJP, NDA ಜೊತೆಗಿನ ದೋಸ್ತಿ ಕಟ್‌ ಮಾಡಿದ AIADMK

ಕರ್ನಾಟಕದಲ್ಲಿ ಸೋಲಿಗೆ ಕಾರಣವಾಗಿ ಈಗ ತಮಿಳುನಾಡಿನಲ್ಲಿ ಬಿಜೆಪಿಗೆ ಬಿಸಿತುಪ್ಪವಾಗುತ್ತಿರುವ ಮಾಜಿ ಪೋಲಿಸಪ್ಪ ಅಣ್ಣಾಮಲೈ

AIADMK: ತಮಿಳುನಾಡಿನ AIADMK ಪಕ್ಷವು ಆಘಾತಕಾರಿ ನಿರ್ಧಾರ ಕೈಗೊಂಡಿದೆ. ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಳ್ಳುತ್ತಿರುವುದಾಗಿ ಘೋಷಿಸಿದ್ದಲ್ಲದೆ, ಎನ್‌ಡಿಎಯಿಂದ ಹಿಂದೆ ಸರಿಯುತ್ತಿರುವುದಾಗಿಯೂ ಘೋಷಿಸಿದ್ದಾರೆ.

ದಕ್ಷಿಣದಲ್ಲಿ ಬಿಜೆಪಿಯ ಮಿತ್ರಪಕ್ಷ ಹಾಗೂ NDA ಪಾಲುದಾರ ಪಕ್ಷವಾಗಿರುವ AIADMK ಮಹತ್ವದ ನಿರ್ಧಾರ ಕೈಗೊಂಡಿದೆ. ಇಷ್ಟು ವರ್ಷ ಬಿಜೆಪಿ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುತ್ತಿರುವುದಾಗಿ ಘೋಷಿಸಿದೆ. ತಮಿಳುನಾಡು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ದ್ರಾವಿಡ ಉದ್ಯಮಿ ಸಿಎನ್ ಅಣ್ಣಾದೊರೈ ವಿರುದ್ಧ ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆಗಳು ಎರಡು ಪಕ್ಷಗಳ ನಡುವಿನ ಮೈತ್ರಿ ಮುರಿದು ಬೀಳಲು ಕಾರಣವಾಗಿದೆ.

1956ರಲ್ಲಿ ಮಧುರೈಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಣ್ಣಾದೊರೈ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂಬ ಆರೋಪ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಅಣ್ಣಾಮಲೈ ಪಕ್ಷವು ಅಣ್ಣಾದೊರೈ ಅವರನ್ನು ಮರೆಮಾಚಿ, ಕ್ಷಮೆ ಕೇಳಿ ಪರಾರಿಯಾಗಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ದಿವಂಗತ ಮುಖ್ಯಮಂತ್ರಿಗೆ ಅವಮಾನ ಮಾಡಿದರೆ ನಾವು ಸುಮ್ಮನಿರುವುದಿಲ್ಲ ಎಂದು AIADMK ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ನಾಯಕರ ಟೀಕೆಗಳನ್ನು ನಾವೇಕೆ ಸಹಿಸಿಕೊಳ್ಳಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ BJP ಸ್ಥಾನ ಎಲ್ಲಿದೆಯೆನ್ನುವುದು ನಮಗೆ ಗೊತ್ತಿದೆ, ಅವರಿಂದ ನಮಗೆ ಆಗಬೇಕಿರುವುದು ಏನೂ ಇಲ್ಲ ಎಂದು ಅಲ್ಲಿನ ನಾಯಕರು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿನ ನಷ್ಟವನ್ನು ತಮಿಳುನಾಡಿಲ್ಲಿ AIADMK ಜೊತೆ ಚುನಾವಣೆ ಎದುರಿಸಿ ಒಂದಷ್ಟು ಸೀಟು ಗೆಲ್ಲುವ ಕನಸು ಕಾಣುತ್ತಿದ್ದ ಬಿಜೆಪಿಗೆ ಈಗ ದೊಡ್ಡ ಆಘಾತವೇ ಎದುರಾಗಿದೆ. ಅದಿನ್ನೂ ಕರ್ನಾಟಕದ ಸೋಲಿನ ಗಾಯವನ್ನು ನೆಕ್ಕಿ ವಾಸಿ ಮಾಡಿಕೊ‍ಳ್ಳುತ್ತಿರುವಾಗಲೇ ತಮಿಳುನಾಡಿನ ಪಕ್ಷ ಅದಕ್ಕೆ ಮರ್ಮಾಘಾತವನ್ನೇ ನೀಡಿದೆ.

ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಕಾರಣರಾದವರಲ್ಲಿ ಒಬ್ಬರಾದ ಮಾಜಿ ಪೊಲೀಸ್‌ ಅಣ್ಣಾಮಲೈ ತಮಿಳುನಾಡಿಲ್ಲೂ ಅದಕ್ಕೆ ಗುಂಡಿ ತೋಡಿರುವುದು ರಾಜಕೀಯ ಅಸಕ್ತರ ಹುಬ್ಬೇರಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು