ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಕ್ಕಳ ವಿದ್ಯಾರ್ಥಿವೇತನ ರದ್ದು ಮಾಡಿದ ಕೇಂದ್ರ ಸರ್ಕಾರದ ವಿರುದ್ಧ AIFRTE ಖಂಡನೆ

P

Peepal Media Desk • ದೇಶ

• 1 ನಿಮಿಷದ ಓದು

ಮಕ್ಕಳ ವಿದ್ಯಾರ್ಥಿವೇತನ ರದ್ದು ಮಾಡಿದ ಕೇಂದ್ರ ಸರ್ಕಾರದ ವಿರುದ್ಧ AIFRTE ಖಂಡನೆ

ಹೊಸದಿಲ್ಲಿ: ವಾರ್ಷಿಕ 8 ಲಕ್ಷ ರೂಪಾಯಿಗಳ ಆದಾಯದ ಮಿತಿಯ ಕೆಳಗಿರುವ ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ಕಲ್ಪಿಸಿರುವುದು ಮತ್ತು ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳ ವಿದ್ಯಾರ್ಥಿ ವೇತನಗಳನ್ನು ಸ್ಥಗಿತಗೊಳಿಸಿರುವುದನ್ನು ಅಖಿಲ ಭಾರತ ಶಿಕ್ಷಣ ಹಕ್ಕುಗಳ ಸಂಘಟನೆ (AIFRTE) ತೀವ್ರವಾಗಿ ಖಂಡಿಸಿದ್ದು, ಮಕ್ಕಳ ಶಿಕ್ಷಣದ ಹಕ್ಕಿಗೆ ಕೇಂದ್ರ ಸರ್ಕಾರ ಮಾಡಿರುವ ಬಹುದೊಡ್ಡ ದಾಳಿ ಎಂದು ಸಂಘಟನೆ ತಿಳಿಸಿದೆ.

ದೇಶದ ಅತ್ಯಂತ ಪ್ರಮುಖ ಶಿಕ್ಷಣ ತಜ್ಙರು, ಶಿಕ್ಷಣ ಹಕ್ಕುಗಳ ಕಾರ್ಯಕರ್ತರು ಸೇರಿ ರೂಪಿಸಿಕೊಂಡಿರುವ ಸಂಘಟನೆಯಾದ ಅಖಿಲ ಭಾರತ ಶಿಕ್ಷಣ ಹಕ್ಕುಗಳ ಸಂಘಟನೆ, ಕೇಂದ್ರ ಸರ್ಕಾರ ಈ ಕೂಡಲೇ ತನ್ನ ಈ ಕ್ರೂರ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದೆ.

ಎಸ್‌ ಸಿ, ಎಸ್‌ ಟಿ, ಒಬಿಸಿ ಸಮುದಾಯಗಳಿಗೆ ಸೇರಿದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳಿಗೆ ಈಗ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನದ ಶೇ.75ರಷ್ಟನ್ನು ಕೇಂದ್ರ ಸರ್ಕಾರ ಭರಿಸುತ್ತಿದ್ದು, ಶೇ.25ರಷ್ಟನ್ನು ರಾಜ್ಯ ಸರ್ಕಾರಗಳು ನೀಡುತ್ತಿವೆ. ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನವನ್ನು ನಿಲ್ಲಿಸುತ್ತಿರುವುದರಿಂದ ಅನಿವಾರ್ಯವಾಗಿ ರಾಜ್ಯ ಸರ್ಕಾರಗಳೇ ಈ ಹೊಣೆಯನ್ನು ಹೊತ್ತುಕೊಳ್ಳಬೇಕಾಗಿದೆ ಎಂದು ಸಂಘಟನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದರೆ ಅದರಿಂದ ಆಗುವ ಪರಿಣಾಮ ಭೀಕರವಾಗಿರಲಿದೆ. ಮಕ್ಕಳು ಪಠ್ಯಪುಸ್ತಕ, ಸಮವಸ್ತ್ರ ಮತ್ತು ಇತರೆ ಖರ್ಚುಗಳಿಗೆ ಬಳಸುತ್ತಿದ್ದ ವಿದ್ಯಾರ್ಥಿ ವೇತನ ನಿಲ್ಲಿಸಿದರೆ ಅವರು ಅನಿವಾರ್ಯವಾಗಿ ಶಾಲೆಗಳಿಂದ ಹೊರಗೆ ಉಳಿದು, ಬಾಲಕಾರ್ಮಿಕರಾಗುವ ಅಪಾಯವಿದೆ ಎಂದು ಸಂಘಟನೆ ಹೇಳಿದೆ.

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಮಕ್ಕಳೇ ಬರುತ್ತಿಲ್ಲ ಎಂದು ನಂಬಿಸಿ, ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ,ಮುಚ್ಚುವ ಕಾರ್ಯತಂತ್ರವು ದೇಶದೆಲ್ಲೆಡೆ ಜಾರಿಯಲ್ಲಿದೆ. ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತಿರುವ ಕಾರಣ ಮಕ್ಕಳು ಶಾಲೆಗಳಿಗೆ ಬರಲು ಅಸಾಧ್ಯವಾದಾಗ, ಕನಿಷ್ಠ ದಾಖಲಾತಿಯೂ ಆಗುತ್ತಿಲ್ಲವೆಂದು ನೆಪವೊಡ್ಡಿ ನೆರೆಹೊರೆಯ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಅಥವಾ ಸಂಪೂರ್ಣವಾಗಿ ಮುಚ್ಚಿ, ಸರ್ಕಾರಿ ಶಾಲೆಗಳ ಆಸ್ತಿಗಳನ್ನೂ, ಜಾಗವನ್ನು ಸೇರಿದಂತೆ ಒಟ್ಟಿನಲ್ಲಿ ಇಡೀ ಶಿಕ್ಷಣ ಕ್ಷೇತ್ರವನ್ನೇ ಖಾಸಗಿಯವರ ಮಡಿಲಿಗೆ ಹಾಕುವುದು ಇದರ ಹಿಂದಿನ ಹುನ್ನಾರ ಎಂದು ಸಂಘಟನೆ ತಿಳಿಸಿದೆ.

ಇಷ್ಟೆಲ್ಲಾ ತೊಂದರೆಗಳನ್ನು ತಂದೊಡ್ಡುವ ಈ ಜನವಿರೋಧಿ ಮತ್ತು ದುರುದ್ದೇಶಪೂರಿತ ನಿರ್ಧಾರವನ್ನು ಭಾರತ ಸರ್ಕಾರವು ಈ ಕೂಡಲೆ ಹಿಂಪಡೆಯಬೇಕು ಎಂದು AIFRTE ಒತ್ತಾಯಿಸಿದ್ದು, ವಾಸ್ತವವಾಗಿ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಅತ್ಯಂತ ಅಂಚಿನಲ್ಲಿರುವ ಮತ್ತು ತುಳಿತಕ್ಕೊಳಗಾದ ವರ್ಗಗಳ ಮಕ್ಕಳಿಗೆ ಶಿಕ್ಷಣದ ಮೂಲಭೂತ ಹಕ್ಕನ್ನು ನಿರಾಕರಿಸದಂತೆ ಒಂದರಿಂದ ಎಂಟನೇ ತರಗತಿಗೆ ಪ್ರೋತ್ಸಾಹ ನೀಡುವ ಪೂರ್ವ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಎಂದು ಸಂಘಟನೆ ಆಗ್ರಸಿಹಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version