ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬಿಲ್ಕಿಸ್ ಬಾನೋ ಪ್ರಕರಣ: ಗೋಧ್ರಾ ಜೈಲಿನಲ್ಲಿ ಶರಣಾದ ಎಲ್ಲಾ 11 ಅಪರಾಧಿಗಳು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಬಿಲ್ಕಿಸ್ ಬಾನೋ ಪ್ರಕರಣ: ಗೋಧ್ರಾ ಜೈಲಿನಲ್ಲಿ ಶರಣಾದ ಎಲ್ಲಾ 11 ಅಪರಾಧಿಗಳು

ಗೋಧ್ರಾ, ಜ.22: ಬಿಲ್ಕಿಸ್ ಬಾನೊ ಪ್ರಕರಣದ ಎಲ್ಲಾ 11 ಅಪರಾಧಿಗಳು ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಕಾರಾಗೃಹದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಗಡುವಿಗೆ ಅನುಗುಣವಾಗಿ ಶರಣಾಗಿದ್ದಾರೆ.

11 ಅಪರಾಧಿಗಳು ಭಾನುವಾರ ತಡರಾತ್ರಿ ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಸ್ಥಳೀಯ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ತಿಳಿಸಿದ್ದಾರೆ.

ಶರಣಾಗಲು ನಿಗದಿಪಡಿಸಿದ್ದ 21ರ ತಡ ರಾತ್ರಿ ಹನ್ನೆರಡು ಗಂಟೆಗೆ ಒಂದಷ್ಟು ಹೊತ್ತಿರುವಾಗ ಅಪರಾಧಿಗಳೆಲ್ಲರೂ ಶರಣಾದರು ಎಂದು ದೇಸಾಯಿ ತಿಳಿಸಿದರು.

ಜನವರಿ 8ರಂದು ಉನ್ನತ ನ್ಯಾಯಾಲಯವು ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ನೀಡಿದ್ದ ವಿನಾಯತಿಯನ್ನು ರದ್ದುಗೊಳಿಸಿತು. ಜೊತೆಗೆ ರಾಜ್ಯ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅಪರಾಧಿಗಳಿಗೆ ಸಹಕರಿಸಿದೆ ಎಂದು ಕೋರ್ಟ್‌ ಛೀಮಾರಿ ಹಾಕಿತ್ತು.

2022ರ ಸ್ವಾತಂತ್ರ್ಯ ದಿನದಂದು ಅಕಾಲಿಕವಾಗಿ ಬಿಡುಗಡೆಯಾದ ಅಪರಾಧಿಗಳನ್ನು ಎರಡು ವಾರಗಳಲ್ಲಿ ಶರಣಾಗುವಂತೆ ಆದೇಶಿಸಿತ್ತು.

ಶರಣಾಗತಿಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಅಪರಾಧಿಗಳ ಮನವಿಯನ್ನು ಶುಕ್ರವಾರ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಭಾನುವಾರದೊಳಗೆ ಶರಣಾಗುವಂತೆ ತಿಳಿಸಿತ್ತು.

ಆ 11 ಅಪರಾಧಿಗಳೆಂದರೆ ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್, ಜಸ್ವಂತ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್.

ಫೆಬ್ರವರಿ 2002ರಲ್ಲಿ ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮು ಗಲಭೆಗಳ ಭಯಾನಕತೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಬಿಲ್ಕಿಸ್ ಬಾನೋ 21 ಅವರಿಗೆ ವರ್ಷ ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಆಕೆಯ ಮೂರು ವರ್ಷದ ಮಗಳು ಏಳು ಅಂದು ಕೊಲೆಯಾದ ಏಳು ಮಂದಿಯಲ್ಲಿ ಸೇರಿದ್ದಳು. ಕುಟುಂಬ ಸದಸ್ಯರು ಸಹ ಅಂದು ಕೊಲ್ಲಲ್ಪಟ್ಟರು.

ಆಗಸ್ಟ್ 15, 2022ರಂದು, ಜೀವಾವಧಿ ಶಿಕ್ಷೆಯ ಭಾಗವಾಗಿ 14 ವರ್ಷಗಳನ್ನು ಜೈಲಿನಲ್ಲಿ ಕಳೆದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ತನ್ನ 1992ರ ನೀತಿಗೆ ಅನುಗುಣವಾಗಿ ಅವರ ಕ್ಷಮಾದಾನ ಅರ್ಜಿಗಳನ್ನು ಸ್ವೀಕರಿಸಿದ ನಂತರ ಅಕಾಲಿಕವಾಗಿ ಬಿಡುಗಡೆ ಮಾಡಲಾಯಿತು. .

11 ಅಪರಾಧಿಗಳು ಪಂಚಮಹಲ್ ಬಳಿಯ ದಾಹೋದ್ ಜಿಲ್ಲೆಯ ಸಿಂಗ್ವಾಡ್ ತಾಲೂಕಿನ ಸಿಂಗ್ವಾಡ್ ಮತ್ತು ರಂಧಿಕ್ಪುರ್ ಗ್ರಾಮದ ನಿವಾಸಿಗಳು.

ಕ್ಷಮಾದಾನ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವುದರಿಂದ ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆ ನೀಡಲು ಗುಜರಾತ್ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತೀರ್ಪು ನೀಡಿತ್ತು.

ಸುಪ್ರೀಂ ಆದೇಶದ ಕೆಲವು ದಿನಗಳ ನಂತರ, ದೋಷಿಗಳು ಆರೋಗ್ಯ ವೈಫಲ್ಯ, ಮುಂಬರುವ ಶಸ್ತ್ರಚಿಕಿತ್ಸೆ, ಮಗನ ಮದುವೆ ಮತ್ತು ಮಾಗಿದ ಬೆಳೆಗಳನ್ನು ಕೊಯ್ಲು ಮಾಡುವಂತಹ ವಿವಿಧ ಆಧಾರದ ಮೇಲೆ ಶರಣಾಗಲು ಹೆಚ್ಚಿನ ಸಮಯವನ್ನು ಕೋರಿ ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಉಲ್ಲೇಖಿಸಿದ ಕಾರಣಗಳು ಯಾವುದೇ ಅರ್ಹತೆಯನ್ನು ಹೊಂದಿಲ್ಲ ಎಂದು ತಿಳಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು