ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ರಮ ವಲಸೆ ಮತ್ತು ಜನಸಂಖ್ಯಾ ಏರುಪೇರನ್ನು ಪರಿಶೀಲನೆ ನಡೆಸಲು ಜಸ್ಟಿಸ್ ಪ್ರಕಾಶ್ ಪ್ರಭಾಕರ್ ನಾವ್ಲೇಕರ್ ಸಮಿತಿ ರಚಿಸಿದ ಕೇಂದ್ರ

PPeepal Media

Peepal Media ದೇಶ

• 1 ನಿಮಿಷದ ಓದು

ಅಕ್ರಮ ವಲಸೆ ಮತ್ತು ಜನಸಂಖ್ಯಾ ಏರುಪೇರನ್ನು ಪರಿಶೀಲನೆ ನಡೆಸಲು ಜಸ್ಟಿಸ್ ಪ್ರಕಾಶ್ ಪ್ರಭಾಕರ್ ನಾವ್ಲೇಕರ್ ಸಮಿತಿ ರಚಿಸಿದ ಕೇಂದ್ರ

ಹೊಸದೆಹಲಿ: ಅಕ್ರಮ ವಲಸೆ ಹಾಗೂ ಇತರೆ ಕಾರಣಗಳಿಂದ ದೇಶದಲ್ಲಿ ಉಂಟಾಗುತ್ತಿರುವ ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರದಂದು ಪ್ರಕಟಿಸಿದ್ದಾರೆ.

ಈ ಗಂಭೀರ ಸಮಸ್ಯೆಯು ಭಾರತದ ಸಾರ್ವಭೌಮತ್ವ, ರಾಷ್ಟ್ರೀಯ ಭದ್ರತೆ, ಸಾಮಾಜಿಕ ಸಮತೋಲನ ಹಾಗೂ ಮುಖ್ಯವಾಗಿ ದೇಶದ ಬುಡಕಟ್ಟು (ಗಿರಿಜನ) ಸಮುದಾಯಗಳ ರಕ್ಷಣೆಗೆ ಎದುರಾಗಿರುವ ಅತಿ ದೊಡ್ಡ ಸವಾಲಾಗಿದೆ ಎಂದು ಗೃಹ ಸಚಿವರು ಬಣ್ಣಿಸಿದ್ದಾರೆ. ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂತಹದೊಂದು ಸಮಿತಿ ರಚನೆಯ ಕುರಿತು ದೇಶದ ಜನತೆಗೆ ಭರವಸೆ ನೀಡಿದ್ದರು ಎಂಬುದನ್ನು ಅಮಿತ್ ಶಾ ತಮ್ಮ ‘ಎಕ್ಸ್’ (X) ಖಾತೆಯ ಪೋಸ್ಟ್‌ನಲ್ಲಿ ನೆನಪಿಸಿಕೊಂಡಿದ್ದಾರೆ.

ಅಕ್ರಮ ನುಸುಳುವಿಕೆ ಮತ್ತು ಜನಸಂಖ್ಯಾ ಅನುಪಾತದ ಏರುಪೇರು ಯಾವುದೇ ದೇಶದ ವರ್ತಮಾನ ಹಾಗೂ ಭವಿಷ್ಯತ್ತಿಗೆ ದೊಡ್ಡ ಕಂಟಕ ಪ್ರಾಯವಾಗಲಿದ್ದು, ಈ ಸವಾಲನ್ನು ಎದುರಿಸಲು ಸರ್ಕಾರ ಈಗ ಸಮಿತಿಯನ್ನು ಅಧಿಕೃತವಾಗಿ ಅಸ್ತಿತ್ವಕ್ಕೆ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಜಸ್ಟಿಸ್ ಪ್ರಕಾಶ್ ಪ್ರಭಾಕರ್ ನಾವ್ಲೇಕರ್ ಸಮಿತಿಯ ಅಧ್ಯಕ್ಷರು:

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪ್ರಕಾಶ್ ಪ್ರಭಾಕರ್ ನಾವ್ಲೇಕರ್ ಅವರು ಈ ಉನ್ನತ ಮಟ್ಟದ ಸಮಿತಿಯ ಸಾರಥ್ಯವನ್ನು ವಹಿಸಲಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ದುರ್ಗಾ ಶಂಕರ್ ಮಿಶ್ರಾ, ನಿವೃತ್ತ ಐಪಿಎಸ್ ಅಧಿಕಾರಿ ಬಾಲಾಜಿ ಶ್ರೀವಾಸ್ತವ, ಪ್ರಖ್ಯಾತ ಅರ್ಥಶಾಸ್ತ್ರಜ್ಞೆ ಡಾ. ಶರ್ಮಿಕಾ ರವಿ ಹಾಗೂ ದೇಶದ ಜನಗಣತಿ ಆಯುಕ್ತರು (Census Commissioner) ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಗೃಹ ಸಚಿವರು ವಿವರ ನೀಡಿದ್ದಾರೆ.

ಮತ್ತೊಂದೆಡೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಈ ಕುರಿತು ಅಕ್ರಮ ವಲಸಿಗರಿಗೆ ಕಡಕ್ ಎಚ್ಚರಿಕೆ ನೀಡಿದ್ದಾರೆ. ತಾವು ಕಾನೂನಾತ್ಮಕವಾಗಿ ದೇಶದಿಂದ ಹೊರಹಾಕುವ ಮುನ್ನವೇ ಬಂಗಾಳದಲ್ಲಿರುವ ಅಕ್ರಮ ವಲಸಿಗರು ತಾವಾಗಿಯೇ ಇಲ್ಲಿಂದ ಓಡಿಹೋಗಬೇಕು, ಬಾಂಗ್ಲಾದೇಶದ ನುಸುಳುಕೋರರು ಸ್ವಯಂಪ್ರೇರಿತರಾಗಿ ಹೊರಡದಿದ್ದರೆ ಮುಂಬರುವ ದಿನಗಳಲ್ಲಿ ಸರ್ಕಾರ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಗುಡುಗಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು