ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರಿಂದ 21 ದಿನಗಳ ‘ಮೇಮಂತ ಸಿದ್ದಂ’ ಯಾತ್ರೆಗೆ ಸಿದ್ಧತೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರಿಂದ 21 ದಿನಗಳ ‘ಮೇಮಂತ ಸಿದ್ದಂ’ ಯಾತ್ರೆಗೆ ಸಿದ್ಧತೆ

ಅಮರಾವತಿ: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಇದೇ ಮಾರ್ಚ್ 27ರಂದು ಕಡಪ ಜಿಲ್ಲೆಯಿಂದ 21 ದಿನಗಳ ‘ಮೇಮಂತ ಸಿದ್ದಂ’ (ನಾವೆಲ್ಲರೂ ಸಿದ್ಧರಿದ್ದೇವೆ) ಯಾತ್ರೆಯನ್ನು ಪ್ರಾರಂಭಿಸುವ ಮೂಲಕ ಲೋಕಸಭಾ ಹಾಗೂ ವಿಧಾನಸಭಾ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಕಡಪ ಜಿಲ್ಲೆಯ ಇಡುಪುಲುಪಾಯದಿಂದ ಪ್ರಚಾರ ಆರಂಭವಾಗಲಿದ್ದು, ಅಂದೇ ಪ್ರದ್ದತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎರಡನೇ ದಿನ ನಂದ್ಯಾಲ ಲೋಕಸಭಾ ಕ್ಷೇತ್ರಕ್ಕೆ ಬಸ್‌ ಯಾತ್ರೆಯು ಪ್ರವೇಶಿಸಲಿದೆ. ಈ ವೇಳೆ ಅನೇಕ ಸಮುದಾಯಗಳ ಜನರ ಜತೆ ಜಗನ್‌ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

‘ಮೇಮಂತ ಸಿದ್ದಂ’ ಯಾತ್ರೆಯು ಮೂರನೇ ದಿನ ಕರ್ನೂಲ್ ಲೋಕಸಭಾ ಕ್ಷೇತ್ರವನ್ನು ಪ್ರವೇಶಿಸಲಿದೆ. ವಿವಿಧ ಸಮುದಾಯಗಳ ಜನರೊಂದಿಗೆ ಸಂವಾದ ನಡೆಸಲಿದ್ದು, ಈ ವೇಳೆ ರಾಜ್ಯ ಸರ್ಕಾರದ ಕಾರ್ಯಕ್ಷಮತೆಯನ್ನು ಇನ್ನಷ್ಟು ಸುಧಾರಿಸಲು ಜನರಿಂದ ಸಲಹೆಗಳನ್ನು ಪಡೆಯಲಾಗುವುದು. ಯಾತ್ರೆ ಸಾಗುವ ಹಾದಿಯಲ್ಲಿ ರಾತ್ರಿ ವೇಳೆ ಜನರೊಂದಿಗೆ ಜಗನ್ ತಂಗಲಿದ್ದಾರೆ.

ಇತ್ತೀಚೆಗೆ ಕೈಗೊಂಡಿದ್ದ ಬೃಹತ್ ‘ಸಿದ್ದಂ’ ಚುನಾವಣಾ ಪ್ರಚಾರ ರ‍್ಯಾಲಿ ನಡೆದಿದ್ದ ಸ್ಥಳಗಳನ್ನು ಹೊರತು‍ಪಡಿಸಿ ಉಳಿದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿಯೂ ‘ಮೇಮಂತ ಸಿದ್ದಂ’ಯಾತ್ರೆಯು ಸಾಗಲಿದೆ. ಈಗಾಗಲೇ ಯಾತ್ರೆಯ ವಿನ್ಯಾಸ ಸಿದ್ದಗೊಂಡಿದೆ ಎಂದು ಜಗನಮೋಹನರೆಡ್ಡಿಯವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು