ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂಡಿಯಾ ಗೇಟ್ ಬಳಿ ಅಂಕಿತಾ ಭಂಡಾರಿ ಪೋಷಕರು ಪೊಲೀಸ್ ವಶಕ್ಕೆ: ಸಿಕ್ಕಿಂ ರಾಜ್ಯಪಾಲರ ನೇಮಕಾತಿ ರದ್ದಾಗುವವರೆಗೆ ಆಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

PPeepal Media

Peepal Media • ದೇಶ

• 2 ನಿಮಿಷದ ಓದು

ಇಂಡಿಯಾ ಗೇಟ್ ಬಳಿ ಅಂಕಿತಾ ಭಂಡಾರಿ ಪೋಷಕರು ಪೊಲೀಸ್ ವಶಕ್ಕೆ: ಸಿಕ್ಕಿಂ ರಾಜ್ಯಪಾಲರ ನೇಮಕಾತಿ ರದ್ದಾಗುವವರೆಗೆ ಆಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ದೆಹಲಿ: ಉತ್ತರಾಖಂಡದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಇಂಡಿಯಾ ಗೇಟ್ ಬಳಿ ಧರಣಿ ನಡೆಸುತ್ತಿದ್ದ ಆಕೆಯ ಪೋಷಕರು, ಕಾಂಗ್ರೆಸ್ ನಾಯಕರು ಹಾಗೂ ಇತರ ಪ್ರತಿಭಟನಾಕಾರರನ್ನು ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ದೆಹಲಿ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಿರುವ ಆದೇಶವನ್ನು ಹಿಂಪಡೆಯದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಂಕಿತಾ ಪೋಷಕರು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ಪೊಲೀಸರು ವಶಕ್ಕೆ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಕಿತಾ ಪೋಷಕರು, ಗೌತಮ್ ಅವರ ನೇಮಕಾತಿಯನ್ನು ರದ್ದುಗೊಳಿಸುವವರೆಗೂ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು. ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಲು ಅವಕಾಶ ನೀಡದಿದ್ದರೆ, ಉತ್ತರಾಖಂಡದಲ್ಲಿರುವ ತಮ್ಮ ನಿವಾಸದಲ್ಲೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದರು. ತಮ್ಮ ಬೇಡಿಕೆಗಳನ್ನು ಇದೇ ರೀತಿ ನಿರ್ಲಕ್ಷಿಸಿದರೆ ದೇಶಾದ್ಯಂತ ಜನರು ಬೀದಿಗಿಳಿದು ಹೋರಾಟ ನಡೆಸಲಿದ್ದು, ಮುಂದಾಗುವ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಬುಧವಾರವಷ್ಟೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂಡಿಯಾ ಗೇಟ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅಂಕಿತಾ ಪೋಷಕರ ಅಳಲನ್ನು ಆಲಿಸಿದ್ದರು. ಈ ಭೇಟಿ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಿದ್ದಾರೆ.

ವಶಕ್ಕೆ ಪಡೆದವರನ್ನು ನಂತರ ಬಿಡುಗಡೆ ಮಾಡಲಾಯಿತಾದರೂ, ನ್ಯಾಯ ಕೇಳುತ್ತಿದ್ದ ಪ್ರತಿಭಟನಾಕಾರರೊಂದಿಗೆ ದೆಹಲಿ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನೇತ್, ಪವನ್ ಖೇರಾ ಹಾಗೂ ನಾಯಕ ಖಾಜಿ ನಿಜಾಮುದ್ದೀನ್ ಆರೋಪಿಸಿದ್ದಾರೆ. 2022ರ ಹತ್ಯೆ ಪ್ರಕರಣದ ಸಂಪೂರ್ಣ ತನಿಖೆಗೆ ಒತ್ತಾಯಿಸುತ್ತಿರುವ ಕುಟುಂಬವನ್ನು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಖಂಡಿಸಿದ್ದಾರೆ.

ಕಳೆದ ಅಕ್ಟೋಬರ್ 12 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಈ ವಿವಾದ ಮತ್ತೆ ಭುಗಿಲೆದ್ದಿದೆ. ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಗೌತಮ್ ಅವರು ಈ ಹಿಂದೆ ಉತ್ತರಾಖಂಡದ ಪಕ್ಷದ ಉಸ್ತುವಾರಿಯಾಗಿದ್ದರು.

ಅಂಕಿತಾ ಹತ್ಯೆ ಪ್ರಕರಣದಲ್ಲಿ ಕೇಳಿಬಂದಿದ್ದ ಅನಾಮಧೇಯ ‘ವಿಐಪಿ’ (VIP) ಜೊತೆ ಇವರ ಹೆಸರನ್ನು ತಳುಕುಹಾಕಲಾಗಿತ್ತು. 2025ರ ಡಿಸೆಂಬರ್‌ನಲ್ಲಿ ಹರಿದಾಡಿದ್ದ ಕೆಲವು ಆಡಿಯೋ ಮತ್ತು ವಿಡಿಯೋ ತುಣುಕುಗಳಲ್ಲಿ ಗೌತಮ್ ಅವರ ಹೆಸರಿನ ಉಲ್ಲೇಖವಿತ್ತು ಎನ್ನಲಾಗಿದ್ದು, ಈ ಆರೋಪಗಳನ್ನು ತಳ್ಳಿಹಾಕಿರುವ ಗೌತಮ್ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಲ್ಲದೆ, ಈ ಅಪರಾಧದಲ್ಲಿ ಅವರ ಪಾತ್ರವಿದೆ ಎಂದು ಯಾವುದೇ ನ್ಯಾಯಾಲಯವೂ ಇದುವರೆಗೆ ದೃಢಪಡಿಸಿಲ್ಲ.

ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ವನಂತರ ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಅಂಕಿತಾ ಭಂಡಾರಿಯನ್ನು, ವಿಐಪಿ ಅತಿಥಿಯೊಬ್ಬರಿಗೆ ‘ವಿಶೇಷ ಸೇವೆ’ ನೀಡಲು ನಿರಾಕರಿಸಿದ ಕಾರಣಕ್ಕೆ 2022ರ ಸೆಪ್ಟೆಂಬರ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಸೆಪ್ಟೆಂಬರ್ 24, 2022 ರಂದು ಚಿಲ್ಲಾ ಕಾಲುವೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಹಾಗೂ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ಆತನ ಸಹಚರರಾದ ಸೌರಭ್ ಭಾಸ್ಕರ್, ಅಂಕಿತ್ ಗುಪ್ತಾ ದೋಷಿಗಳೆಂದು ಸಾಬೀತಾಗಿ 2025ರ ಮೇ ತಿಂಗಳಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಆದರೆ, ಈ ಮೂವರಿಗೆ ಶಿಕ್ಷೆಯಾದ ಮಾತ್ರಕ್ಕೆ ಆ ‘ವಿಐಪಿ’ ಯಾರು ಮತ್ತು ಹತ್ಯೆಯ ಹಿಂದೆ ಇತರ ಪ್ರಭಾವಿಗಳ ಕೈವಾಡವಿತ್ತೇ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂಬುದು ಪೋಷಕರ ವಾದವಾಗಿದೆ. ಹೊಸ ಆರೋಪಗಳ ತನಿಖೆಗಾಗಿ ಸಿಬಿಐ (CBI) ಫೆಬ್ರವರಿ 2026 ರಲ್ಲಿ ಪ್ರಕರಣ ದಾಖಲಿಸಿಕೊಂಡಿದೆಯಾದರೂ, ತನಿಖೆಯ ವೇಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕುಟುಂಬವು ಫೋನ್ ದಾಖಲೆಗಳ ಪರಿಶೀಲನೆ ಹಾಗೂ ಹತ್ಯೆಯ ನಂತರ ರೆಸಾರ್ಟ್‌ನ ಕೆಲವು ಭಾಗಗಳನ್ನು ಕೆಡವಿದ ಸನ್ನಿವೇಶಗಳ ತನಿಖೆಗೆ ಒತ್ತಾಯಿಸಿದೆ.

ಸಂವಿಧಾನದ 361ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಹುದ್ದೆಯಲ್ಲಿರುವವರಿಗೆ ಅಧಿಕಾರಾವಧಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳಿಂದ ರಕ್ಷಣೆ (Immunity) ಸಿಗುವುದರಿಂದ, ಗೌತಮ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಿರುವುದು ಈಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು