ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅರುಂಧತಿ ರಾಯ್, ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಬಂಧನಕ್ಕೆ ಸಿದ್ಧತೆ: ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಅರುಂಧತಿ ರಾಯ್, ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಬಂಧನಕ್ಕೆ ಸಿದ್ಧತೆ: ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ರಾಯ್ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಲಾಗಿದೆ. ಈ ಮೂಲಕ ಅವರನ್ನು ಬಂಧಿಸುವ ಸಿದ್ಧತೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಐಸಿಸಿಟಿಯು, ಎಐಪಿಡಬಲ್ಯೂಎ, ಎಐಎಸ್‌ಎ, ಸಿಪಿಐಎಂಎಲ್‌, ಆರ್‌ಐಎ ಸಂಘಟನೆಗಳ ನೂರಾರು ಮುಖಂಡರು ಭಾಗವಹಿಸಿದ್ದರು. ಕಳೆದ ಹತ್ತು ವರ್ಷಗಳಿಂದ ಮೋದಿ ಸರ್ಕಾರ ಅನೇಕ ಪ್ರಗತಿಪರ ಚಿಂತಕರನ್ನು ಕಠೋರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನಾದ ಯುಎಪಿಎ ಕಾಯ್ದೆ ಅಡಿ ಬಂಧಿಸಿ ಬಾಯಿ ಮುಚ್ಚಿಸುತ್ತಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ವಕೀಲ ಕ್ಲಿಫ್ಟನ್.‌ ಡಿ. ರೊಜಾರಿಯೊ ಮಾತನಾಡಿ, “ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ಕೇವಲ ಪ್ರಕರಣ ದಾಖಲಾದ ತಕ್ಷಣಕ್ಕೆ ವ್ಯಕ್ತಿಗಳನ್ನು ಬಂಧಿಸುವ ಯುಎಪಿಎ ಕಾಯ್ದೆಯು ಅಸಾಂವಿಧಾನಿಕವಾದ್ದದ್ದು. ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿಯುತ್ತದೆ. ದಲಿತರು, ರೈತರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ವಿದಾರ್ಥಿಗಳ ಪರ ನಾವು ಸದಾ ದನಿ ಎತ್ತುತ್ತೇವೆ. ಅದು ನಮ್ಮ ಹಕ್ಕು. ಹತ್ತು ವರ್ಷಗಳಿಂದ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿರುವ ವಿದ್ಯಾರ್ಥಿ ನಾಯಕರು, ಹೋರಾಟಗಾರರು, ಪ್ರಗತಿಪರ ಚಿಂತಕರನ್ನು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಎಐಎಸ್‌ಎ ಸದಸ್ಯ ಶರತ್ ಮಾತನಾಡಿ, ಭೀಮಾ ಕೊರೆಂಗಾವ್‌ನಲ್ಲಿ ಕಾರ್ಮಿಕರು ಗುತ್ತಿಗೆ ಪದ್ಧತಿ ರದ್ದಾಗಬೇಕು ಎಂದು ಪ್ರತಿಭಟಿಸಿದ್ದ ಕಾರಣಕ್ಕಾಗಿ ಮುಖಂಡರ ಮೇಲೆ ಯುಎಪಿಎ ಅಡಿ ಕ್ರಮ ಜರುಗಿಸಿದ್ದರು. ಜನರಿಗೆ ಸಂವಿಧಾನದ ಅಡಿಯಲ್ಲಿ ಸರ್ಕಾರ ಮತ್ತು ಅದು ರೂಪಿಸುವ ನೀತಿಗಳ ವಿರುದ್ಧ ಪ್ರಶ್ನಿಸುವ ಹಕ್ಕಿದೆ. ಆದರೆ, ಎಲ್ಲ ರಾಜಕೀಯ ಪಕ್ಷಗಳು ಈ ಹಕ್ಕನ್ನು ನಾನಾ ರೂಪದಲ್ಲಿ ಕಸಿಯುತ್ತಿವೆ. ದೇವನಹಳ್ಳಿಯಲ್ಲಿ ರೈತನಿಗೆ ಅನ್ಯಾಯವಾದರೆ 25 ಕಿಲೋ ಮೀಟರ್‌ ದೂರದಲ್ಲಿರುವ ಸ್ವಾತಂತ್ರ್ಯ ಉದ್ಯಾವನಕ್ಕೆ ಬಂದು ಪ್ರತಿಭಟಿಸಬೇಕಾಗಿದೆ. ಹೀಗೆ ಪ್ರತಿಭಟಿಸುವ ಹಕ್ಕನ್ನು ಕೂಡ ಜನರಿಂದ ಕಿತ್ತುಕೊಳ್ಳಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಕಾಶ್ಮೀರಿ ಜನರ ಸಮಸ್ಯೆಗಳ ಕುರಿತು 2010ರಲ್ಲಿ ಮಾತನಾಡಿದಕ್ಕಾಗಿ ಇಬ್ಬರ ಮೇಲೆ ಈಗ ಯುಎಪಿಎ ಅಡಿ ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ವಿಕೆ. ಸಕ್ಸೇನಾ ದೆಹಲಿ ಪೊಲೀಸರಿಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಘೋಷಣೆ ಕೂಗಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್ ಜಸ್ಟೀಸ್‌ನ ಸದಸ್ಯೆ ಶಿಲ್ಪಾ, ಬಹುತ್ವ ಕರ್ನಾಟಕದ ತನ್ವೀರ್, ಅರತ್ರಿಕಾ, ನರಸಿಂಹಮೂರ್ತಿ, ವಿನಯ್ ಕುಮಾರ್ ಮತ್ತಿತರು ಹಾಜರಿದ್ದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು