ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಸ್ಸಾಂ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ; ನೀರು ಪಾಲಾದ ಮೂವರು ಕಾರ್ಮಿಕರು

PPeepal Media

Peepal Media ದೇಶ

• 1 ನಿಮಿಷದ ಓದು

ಅಸ್ಸಾಂ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ; ನೀರು ಪಾಲಾದ ಮೂವರು ಕಾರ್ಮಿಕರು

ಗುವಾಹಟಿ: ಈಶಾನ್ಯ ರಾಜ್ಯ ಅಸ್ಸಾಂನ ಗಣಿಯಲ್ಲಿ (ಕಲ್ಲಿದ್ದಲು ಗಣಿ) ಮಾರಣಾಂತಿಕ ಅಪಘಾತ ಸಂಭವಿಸಿದೆ. ಗಣಿಯಲ್ಲಿ ನೀರು ತುಂಬಿದ್ದರಿಂದ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು ಕೆಲವರು ಒಳಗೆ ಸಿಕ್ಕಿಹಾಕಿಕೊಂಡಿದ್ದರು. ಅವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ದಿಮಾ ಹಸಾವ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ಒಂಬತ್ತು ಮಂದಿ ಕಲ್ಲಿದ್ದಲು ಗಣಿಗಾರಿಕೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಗಣಿಯ ಒಳಗೆ ನೀರು ತುಂಬಿಕೊಂಡಿತು. ನೀರಿನ ಹರಿವು ಹೆಚ್ಚಾದಂತೆ ಪ್ರವಾಹದ ನೀರು ಗಣಿಯಿಂದ ಹೊರಬಂದಿತು. ಇದರಿಂದಾಗಿ ಸೋಮವಾರದಿಂದ ರಕ್ಷಣಾ ತಂಡಗಳು ಅವಿರತವಾಗಿ ಕಾರ್ಯಾಚರಣೆ ನಡೆಸಿ ಸಿಕ್ಕಿಬಿದ್ದ ಜನರನ್ನು ಸುರಕ್ಷಿತವಾಗಿ ಹೊರತರಲು ಮುಂದಾಗಿವೆ. ಆದರೆ ಅದರಲ್ಲಿ ಈಗಾಗಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮೃತ ದೇಹಗಳು ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಿದರು.

ಉಳಿದವರನ್ನು ರಕ್ಷಿಸಲು ಹೆಲಿಕಾಪ್ಟರ್‌ಗಳು ಮತ್ತು ಎಂಜಿನಿಯರ್‌ಗಳ ಸಹಾಯದಿಂದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. “ಕಳೆದ ರಾತ್ರಿ ಗಣಿಯಿಂದ ಹಠಾತ್ ಪ್ರವಾಹ ಉಂಟಾಗಿದೆ. ಒಳಗೆ ಸಿಲುಕಿರುವವರನ್ನು ರಕ್ಷಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ಪಡೆಗಳು ಮತ್ತು ಸೇನೆಯ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸುತ್ತಿವೆ ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ಮಯಾಂಕ್ ಕುಮಾರ್ ತಿಳಿಸಿದ್ದಾರೆ. ಏತನ್ಮಧ್ಯೆ, 2019ರಲ್ಲಿ, ನೆರೆಯ ರಾಜ್ಯವಾದ ಮೇಘಾಲಯದಲ್ಲಿ ಇದೇ ರೀತಿಯ ದುರಂತ ಸಂಭವಿಸಿದೆ. ಕೆಲವರು ಗಣಿಗಾರಿಕೆಯಲ್ಲಿ ಅಕ್ರಮವಾಗಿ ಕೆಲಸ ಮಾಡುತ್ತಿದ್ದಾಗ ಪಕ್ಕದ ನದಿಯಿಂದ ಭಾರಿ ನೀರು ಬಂದು ಸೇರಿದೆ. ಈ ಅವಘಡದಲ್ಲಿ ಕನಿಷ್ಠ 15 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು