ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿ ಕಚೇರಿ ಕೇಳಿದರೂ ಮಾಹಿತಿ ನೀಡಲು ಸಾಧ್ಯವಿಲ್ಲವೆಂದ ಅಯೋಧ್ಯೆ ರಾಮಮಂದಿರ ಟ್ರಸ್ಟ್

PPeepal Media

Peepal Media ದೇಶ

• 1 ನಿಮಿಷದ ಓದು

ಪ್ರಧಾನಿ ಕಚೇರಿ ಕೇಳಿದರೂ ಮಾಹಿತಿ ನೀಡಲು ಸಾಧ್ಯವಿಲ್ಲವೆಂದ ಅಯೋಧ್ಯೆ ರಾಮಮಂದಿರ ಟ್ರಸ್ಟ್

ಲಕ್ನೋ: ಅಯೋಧ್ಯೆಯ ರಾಮಮಂದಿರಕ್ಕೆ ಬಂದಿರುವ ದೇಣಿಗೆಯಲ್ಲಿ ಕೋಟ್ಯಂತರ ರೂಪಾಯಿ ದುರ್ಬಳಕೆಯಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ಕಾರಣವಾಗಿ ನೀಡಿ ಪ್ರಧಾನಮಂತ್ರಿ ಕಾರ್ಯಾಲಯವು (PMO) ಕೋರಿದ್ದ ಆರ್ಥಿಕ ವಿವರಗಳನ್ನು ಒದಗಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರಾಕರಿಸಿದೆ.

ದೇಣಿಗೆ ನಿಧಿ ದುರ್ಬಳಕೆ ಆರೋಪದ ಕುರಿತು ಕೇಂದ್ರೀಯ ತನಿಖಾ ದಳದಿಂದ (CBI) ಸಮಗ್ರ ತನಿಖೆ ನಡೆಸಬೇಕು ಹಾಗೂ ದೇಣಿಗೆ ಮತ್ತು ಭೂಮಿ ಖರೀದಿಯ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡ ರಜನೀಶ್ ಸಿಂಗ್ ಅವರು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ತಕ್ಷಣವೇ ಸ್ಪಂದಿಸಿದ್ದ ಪಿಎಂಒ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿ ಆ ಪತ್ರವನ್ನು ಅಯೋಧ್ಯೆ ಜಿಲ್ಲಾಡಳಿತಕ್ಕೆ ರವಾನಿಸಿತ್ತು.

ಪಿಎಂಒ ಆದೇಶದ ಬೆನ್ನಲ್ಲೇ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸುವಂತೆ ಜಿಲ್ಲಾಡಳಿತವು ಟ್ರಸ್ಟ್‌ನ ಪದಾಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಸ್ತುತ ನಡೆಯುತ್ತಿರುವ ಸಿಟ್ ತನಿಖೆಯನ್ನು ಮುನ್ನೆಲೆಗೆ ತಂದಿರುವ ಟ್ರಸ್ಟ್ ವಿವರಗಳನ್ನು ನೀಡಲು ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ. ಸಿಟ್ ತನಿಖೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಯಾವುದೇ ರೀತಿಯ ಆರ್ಥಿಕ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ.

ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 8 ಮಂದಿ ಪ್ರಮುಖ ಆರೋಪಿಗಳು ಸೇರಿದಂತೆ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಈ ಪೈಕಿ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರೆ, ಅನುಕಲ್ಪ್ ಮಿಶ್ರಾ ಎಂಬ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಅಧಿಕೃತವಾಗಿ ಬಂಧಿಸಲಾಗಿದೆ.

ಸರ್ಕಾರಿ ನೌಕರ ಅಥವಾ ಸಂಸ್ಥೆಯ ಉದ್ಯೋಗಿಯು ಅಪರಾಧದ ಸಂಚಿನ ಭಾಗವಾಗಿ ಉದ್ದೇಶಪೂರ್ವಕವಾಗಿ ಕಳವು ಮಾಡುವುದು, ವ್ಯವಸ್ಥಿತವಾಗಿ ವಂಚನೆ ಎಸಗುವುದು, ಕಳ್ಳತನಕ್ಕೆ ಪ್ರಚೋದನೆ ನೀಡುವುದು ಹಾಗೂ ನಂಬಿಕೆ ದ್ರೋಹ ಎಸಗಿರುವುದು ಮುಂತಾದ ಗಂಭೀರ ಅಪರಾಧದ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು