ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾಲಸೋರ್ ರೈಲು ಅಪಘಾತ: ಸಿಗ್ನಲಿಂಗ್‌ ದೋಷಗಳೇ ಅಪಘಾತಕ್ಕೆ ಕಾರಣವೆಂದ CRS ವರದಿ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಬಾಲಸೋರ್ ರೈಲು ಅಪಘಾತ: ಸಿಗ್ನಲಿಂಗ್‌ ದೋಷಗಳೇ ಅಪಘಾತಕ್ಕೆ ಕಾರಣವೆಂದ CRS ವರದಿ

ನವದೆಹಲಿ: 290 ಜನರ ಸಾವಿಗೆ ಕಾರಣವಾದ ಮತ್ತು 1,000ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ ಬಾಲಸೋರ್ ರೈಲು ದುರಂತದ ಬಗ್ಗೆ ಬಹುನಿರೀಕ್ಷಿತ ರೈಲ್ವೆ ಸುರಕ್ಷತಾ ಆಯೋಗ (CRS) ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ.

ಈ ವರದಿಯು ಸಿಬ್ಬಂದಿ ಸದಸ್ಯರ ಹೇಳಿಕೆಗಳು ಮತ್ತು ರೈಲ್ವೆ ಸ್ವತ್ತುಗಳಿಗೆ ಸಂಬಂಧಿಸಿದ ವಿವಿಧ ಅಂಶಗಳ ತನಿಖಾ ವರದಿಯನ್ನು ಹೊಂದಿದೆ.

ಪ್ರಸ್ತುತ ನಡೆಯುತ್ತಿರುವ ಸಿಬಿಐ ತನಿಖೆಯನ್ನು ಉಲ್ಲೇಖಿಸಿ ವರದಿಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರೈಲ್ವೆ ಅಧಿಕಾರಿಗಳು ನಿರಾಕರಿಸಿದರೂ, ಮೂಲಗಳ ಮೂಲಕ ದಾಖಲೆಯ ಗಮನಾರ್ಹ ಭಾಗಗಳು ಮಾಧ್ಯಮಗಳಿಗೆ ಲಭ್ಯವಾಗಿವೆಯೆಂದು ವಾಹಿನಿಯೊಂದು ವರದಿ ಮಾಡಿದೆ.

ʼಈ ಅಪಘಾತವು ಪರಸ್ಪರ ಢಿಕ್ಕಿಯಿಂದ ಸಂಭವಿಸಿದ್ದು, ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಸ್ಪೀಡೋಮೀಟರ್‌ ರೀಡಿಂಗ್‌ ಇದ್ದಕ್ಕಿದ್ದ ಹಾಗೆ ಸೊನ್ನೆಗೆ ಇಳಿದಿದೆʼ ಎಂದು ವರದಿ ಸ್ಪಷ್ಟವಾಗಿ ಹೇಳುತ್ತದೆ. ಚೆನ್ನೈ-ಕೋಲ್ಕತಾ ಪ್ಯಾಸೆಂಜರ್ ರೈಲು ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ಬಹನಾಗ ಬಜಾರ್ ರೈಲ್ವೆ ನಿಲ್ದಾಣದ ಬಳಿ ಅಪ್-ಲೂಪ್ ಮಾರ್ಗವನ್ನು ಪ್ರವೇಶಿಸಿತ್ತು ಆದರೆ ಆ ಹಳಿಯಲ್ಲಿ ಈಗಾಗಲೇ ಗೂಡ್ಸ್‌ ರೈಲೊಂದು ಬಂದು ನಿಂತಿತ್ತು. ಇದು ರೈಲುಗಳ ಢಿಕ್ಕಿಗೆ ಕಾರಣವಾಯಿತು. ಈ ಘರ್ಷಣೆಯು ರೈಲು ಹಳಿ ತಪ್ಪಲು ಕಾರಣವಾಯಿತು. ಪರಿಣಾಮವಾಗಿ ಇನ್ನೊಂದು ಟ್ರ್ಯಾಕ್‌ನಲ್ಲಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಕೊನೆಯ ಕೆಲವು ಕೋಚ್‌ಗಳು ಉರುಳಿದವು.

“ಎಸ್ & ಟಿ (ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಷನ್) ಇಲಾಖೆಯಲ್ಲಿನ ಅನೇಕ ಹಂತಗಳಲ್ಲಿನ ಲೋಪಗಳು ಈ ಅಪಘಾತಕ್ಕೆ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ಭೀಕರವಾದ ಅಪಘಾತದ ತನಿಖೆಯನ್ನು ಆರಂಭದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಗೆ (CRS) ಮತ್ತು ನಂತರ ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲಾಯಿತು. ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ.ಚೌಧರಿ ಅವರಿಗೆ ಈ ತನಿಖೆಯ ಉಸ್ತುವಾರಿ ವಹಿಸಲಾಗಿತ್ತು.

“ಈ ವಿಷಯದ ಕುರಿತು CBI ಇನ್ನೊಂದು ತನಿಖೆ ನಡೆಸುತ್ತಿರುವ ಕಾರಣ ನಾವು CRS Report ಕುರಿತು ಯಾವುದೇ ಮಾಹಿತಿಯನ್ನಾಗಲೀ, ಪ್ರತಿಕ್ರಿಯೆಯನ್ನಾಗಲೀ ನೀಡಲು ಸಾಧ್ಯವಿಲ್ಲವೆಂದು” ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಾಗ್ಯೂ ಈ ವರದಿಯು ಅಪಘಾತದ ಕುರಿತಾದ ಗೊಂದಲಗಳ ತೆರೆಯನ್ನು ಸರಿಸಿದ್ದು, ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು