ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬೆಂಗಳೂರು ನಗರ ವಾಸಕ್ಕೆ ಯೋಗ್ಯವಿಲ್ಲ ಆರೋಗ್ಯಕ್ಕೆ ಹಾನಿಕರ – ವರದಿಯಲ್ಲಿ ಬಹಿರಂಗ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ

• 1 ನಿಮಿಷದ ಓದು

ಬೆಂಗಳೂರು ನಗರ ವಾಸಕ್ಕೆ ಯೋಗ್ಯವಿಲ್ಲ ಆರೋಗ್ಯಕ್ಕೆ ಹಾನಿಕರ – ವರದಿಯಲ್ಲಿ ಬಹಿರಂಗ

ದೆಹಲಿ : ದೆಹಲಿಯ ವಾಯು ಗುಣಮಟ್ಟ (Delhi AQI) ಸಂಪೂರ್ಣವಾಗಿ ಕುಸಿದಿದ್ದು, ಇದೀಗ ಇದರ ಪಟ್ಟಿಗೆ ರಾಜ್ಯ ರಾಜದಾನಿ ಬೆಂಗಳೂರು (Bengaluru) ಕೂಡ ಸೇರಿಕೊಳ್ಳುತ್ತಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ವಾತಾವರಣ ಬದಲಾಗುತ್ತಲೇ ಇದ್ದು, ಸದ್ಯ 170–200 ರ ಮಟ್ಟದಲ್ಲಿ ಮಾಲಿನ್ಯ ದಟ್ಟವಾಗಿದೆ. ಇದು ದಿನಕ್ಕೆ ಸುಮಾರು 3.2 ಸಿಗರೇಟು ಸೇವನೆಯಷ್ಟು  ಹಾನಿಯನ್ನುಂಟುಮಾಡುತ್ತಿದೆ ಎಂದು ವಾಯು ಗುಣಮಟ್ಟ ಸೂಚಕ (AQI) ತಿಳಿಸಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಯಾವುದೇ ಸುಧಾರಣೆ ಕಾಣುತ್ತಿಲ್ಲ. ಈ ಅವಧಿಯಲ್ಲಿ ನಗರದಲ್ಲಿ ಕನಿಷ್ಠ AQI 78 ಆಗಿದ್ದರೆ, ಗರಿಷ್ಠ 200 ರ ಮಟ್ಟವನ್ನು ತಲುಪಿತ್ತು, ಇದು ಬೆಂಗಳೂರಿನ ಇತಿಹಾಸದಲ್ಲಿ ಮೊದಲು ಕಂಡ ಪ್ರಕರಣವಾಗಿದೆ. ಇಂದಿನ ದಿನಕ್ಕೆ ಗುಣಮಟ್ಟ 173 ಆಗಿದ್ದರೂ ಸ್ವಲ್ಪ ಸುಧಾರಣೆ ಕಂಡುಬಂದರೂ, ತಜ್ಞರು ಎಚ್ಚರಿಸಿರುವಂತೆ, ಹೀಗೆ ಮುಂದುವರೆದರೆ ಬೆಂಗಳೂರು ದೆಹಲಿಯಂತಹ ತೀವ್ರ ವಾಯು ಮಾಲಿನ್ಯವನ್ನು ಎದುರಿಸಬಹುದು. ಜೊತೆಗೆ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿ ಜನರ ಜೀವಕ್ಕೇ ಕುತ್ತು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಂಗಳೂರು ಮಾತ್ರವಲ್ಲ, ಇತರ ನಗರಗಳೂ ಕಳಪೆ ಗುಣಮಟ್ಟದ ಗಾಳಿಯ ಸಮಸ್ಯೆ ಎದುರಿಸುತ್ತಿವೆ. ಉದಾಹರಣೆಗೆ, ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ 224 ರ ಮಟ್ಟಕ್ಕೆ ಏರಿತು, ಮತ್ತು ಇಂದೂ 197 ರಂತೆ ಇದ್ದು ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಉಂಟಾಗುತ್ತಿರುವ ಶೀತದಲೆಯಿಂದ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟ ಸಂಬಂಧಿ ಸಮಸ್ಯೆಗಳು ಎದುರಾಗುತ್ತಿವೆ. ತಜ್ಞರು ಎಚ್ಚರಿಸುತ್ತಾರೆ, ಗಾಳಿಯ ಮಾಲಿನ್ಯ ಮತ್ತು ದುರ್ಬಲ ಗುಣಮಟ್ಟ ಇನ್ನಷ್ಟು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. 

ಇಂದಿಗೂ ಬೆಂಗಳೂರಿನಲ್ಲಿ PM2.5 ಪ್ರಮಾಣ 87ಕ್ಕೆ ಮತ್ತು PM10 ಪ್ರಮಾಣ 113ಕ್ಕೆ ದಾಖಲಾಗಿದೆ. ಈ ಮಟ್ಟಗಳು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಿಸುತ್ತಿದ್ದು, ಜನರಿಗೆ WHO ಮಾರ್ಗಸೂಚಿಯನ್ನು ಅನುಸರಿಸುವಂತೆ ತಜ್ಞರು ಸಲಹೆ ನೀಡುತ್ತಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು