ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಎಪಿ ಸರ್ಕಾರ ಉರುಳಿಸಲು ಕೇಂದ್ರದ ಸಂಚು. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ?

PPeepal Media

Peepal Media • ದೇಶ

• 1 ನಿಮಿಷದ ಓದು

ಎಎಪಿ ಸರ್ಕಾರ ಉರುಳಿಸಲು ಕೇಂದ್ರದ ಸಂಚು. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ?

ಹೊಸದಿಲ್ಲಿ, ಸೆಪ್ಟೆಂಬರ್ 10: ದಿಲ್ಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಊಹಾಪೋಹಗಳು ಕಾವು ಪಡೆದುಕೊಳ್ಳುತ್ತಿವೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಜೈಲುವಾಸ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದಾಗ ಈ ಊಹಾಪೋಹಗಳು ಹೆಚ್ಚಾದವು ಮತ್ತು ಅದನ್ನು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದೆ.

‘ಕಳೆದ ಕೆಲ ತಿಂಗಳಿಂದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಜೈಲಿನಲ್ಲಿದ್ದು, ಅಭಿವೃದ್ಧಿ ಕುಂಠಿತವಾಗಿದೆ.

ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವವರು ಜೈಲಿನಲ್ಲಿದ್ದು, ಸಿಎಂ ಜವಾಬ್ದಾರಿಯನ್ನು ಯಾರಿಗೂ ವಹಿಸಿಲ್ಲ ಹೀಗಾಗಿ ಇಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದುʼ ಆಗ್ರಹಿಸಲಾಗಿದೆ.

ಬಿಜೆಪಿ ಆರೋಪಕ್ಕೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಎಎಪಿ ಸರ್ಕಾರವನ್ನು ಬೀಳಿಸಲು ಕೇಂದ್ರದ ಸಂಚು

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಮೂಲಕ ಕೇಂದ್ರದ ಬಿಜೆಪಿ ಮತ್ತು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವ ಸಂಚು ನಡೆಯುತ್ತಿದೆ ಎಂದು ದೆಹಲಿ ಸಚಿವ ಮತ್ತು ಹಿರಿಯ ಎಎಪಿ ನಾಯಕ ಅತಿಶಿ ಮಂಗಳವಾರ ಆರೋಪಿಸಿದ್ದಾರೆ. ಮೋದಿ ಸರಕಾರದಿಂದ ಕೇಜ್ರಿವಾಲ್ ಸರಕಾರವನ್ನು ಕಿತ್ತೊಗೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಒಟ್ಟು 70 ಸ್ಥಾನಗಳನ್ನು ಗೆಲ್ಲಲಿದೆ ಎಂದ ಅವರು, ದಿಲ್ಲಿಯ ಜನತೆ ಬಿಜೆಪಿಗೆ ಶೂನ್ಯ ಸ್ಥಾನವನ್ನು ನೀಡಲಿದ್ದಾರೆ ಎಂದರು.

ಮಹಾರಾಷ್ಟ್ರ, ಕರ್ನಾಟಕ ಮತ್ತು ಮಣಿಪುರ ರಾಜ್ಯಗಳಲ್ಲಿ ಮಾಡಿದಂತೆ ಆಪರೇಷನ್ ಕಮಲದ ಮೂಲಕ ವಿರೋಧ ರಾಜ್ಯಗಳನ್ನು ಅಧಿಕಾರದಿಂದ ದೂರವಿಡುವುದೇ ಬಿಜೆಪಿಯ ಕೆಲಸ ಎಂದು ಅತಿಶಿ ಟೀಕಿಸಿದರು. ಇದೇ ಮಂತ್ರವನ್ನು ದೆಹಲಿಯಲ್ಲಿ ಎಎಪಿ ಶಾಸಕರನ್ನು ಸೆಳೆಯಲು ಬಿಜೆಪಿ ಬಳಸಿ ವಿಫಲವಾಗಿದೆ ಎಂದು ಅವರು ಹೇಳಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು