ಉತ್ತರಾಖಂಡ: ಬಿಜೆಪಿ ನಾಯಕನಿಂದ ಅಪ್ರಾಪ್ತೆಯ ಅತ್ಯಾಚಾರ
ಲಿಂಕ್ ನಕಲಿಸಲಾಗಿದೆ ✓

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಂಪಾವತ್ ಜಿಲ್ಲೆಯ ಬಿಜೆಪಿ ನಾಯಕನ ಮೇಲೆ ಉತ್ತರಾಖಂಡ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಕಮಲ್ ರಾವತ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.
ಪೀಪಲ್ ಮೀಡಿಯಾ ವಾಟ್ಸಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ: ಪೀಪಲ್ ಮೀಡಿಯಾ
ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಅಡಿಯಲ್ಲಿ (ಪೋಕ್ಸೋ) ಪ್ರಕರಣ ದಾಖಲಿಸಲಾಗಿದೆ ಎಂದು ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ.
ಶನಿವಾರ ವೈದ್ಯಕೀಯ ಪರೀಕ್ಷೆಯ ನಂತರ ಅಪ್ರಾಪ್ತ ಬಾಲಕಿಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗುವುದು ಎಂದು ಪಿಂಚಾ ತಿಳಿಸಿದ್ದಾರೆ. (PTI)
Peepal Media Desk
Peepal Media · ದೇಶ ವಿಭಾಗ
