ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು | ಸಾಹಿತಿಗಳ ಆಗ್ರಹ

PPeepal Media

Peepal Media ದೇಶ

• 1 ನಿಮಿಷದ ಓದು

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು | ಸಾಹಿತಿಗಳ ಆಗ್ರಹ

ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ನಡ್ಡಾ ಸಂಕುಚಿತಗೊಳಿಸಿದ್ದಾರೆ.

ಕರ್ನಾಟಕ ರಾಜ್ಯವು ನರೇಂದ್ರ ಮೋದಿಯವರ ಆಶೀರ್ವಾದದಿಂದ ದೂರವಿರಬಾರದು, ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಒಡ್ಡಿದ  ಬಿಜೆಪಿ ಅಧ್ಯಕ್ಷ  ಜೆಪಿ  ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಎಂದು ರಾಜ್ಯದ ಸಾಹಿತಿಗಳು,  ಕಲಾವಿದರು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ನಿವೃತ್ತ ಪ್ರಾಧ್ಯಾಪಕರು, ಬೆಂಗಳೂರು, ಡಾ. ವಿಜಯಾ, ಲೇಖಕಿ, ಬೆಂಗಳೂರು ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪೂರ್ವಾಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಪ್ರೊ. ಕಾಶೀನಾಥ ಅಂಬಲಗಿ, ಕವಿಗಳು, ಲೇಖಕರು, ಕಲಬುರ್ಗಿ, ದಿನೇಶ್‌ ಅಮೀನ್‌ ಮಟ್ಟು, ಪತ್ರಕರ್ತರು, ಬೆಂಗಳೂರು, ಗಿರಿಧರ ಕಾರ್ಕಳ, ಕಲಾವಿದರು, ಬೆಂಗಳೂರು, ಪುರುಷೋತ್ತಮ ಬಿಳಿಮಲೆ, ನಿವೃತ್ತ ಪ್ರಾಧ್ಯಾಪಕರು, ದೆಹಲಿ, ಶ್ರೀನಿವಾಸ ಕಾರ್ಕಳ, ಅಂಕಣಕಾರರು, ಮಂಗಳೂರು ಇವರೆಲ್ಲರು ಜಂಟಿಹೇಳಿಕೆ ನೀಡಿ ತಮ್ಮ  ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟಕದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ  ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ʼ ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದೂ ಹೇಳಿಕೆಯಲ್ಲಿ  ವಿವರಿಸಲಾಗಿದೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಅವರು ಆಗ್ರಹಿಸಿದ್ದಾರೆ.

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು