ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿರೋಧ ಪಕ್ಷದಲ್ಲಿದ್ದಾಗ ಭ್ರಷ್ಟರು, ಬಿಜೆಪಿ ಸೇರಿದರೆ ಪವಿತ್ರರು: ಕೇಸರಿ ಪಡೆಯಲ್ಲಿ ಹಗರಣದ ಆರೋಪಿಗಳದ್ದೇ ಹವಾ

PPeepal Media

Peepal Media ದೇಶ

• 1 ನಿಮಿಷದ ಓದು

ವಿರೋಧ ಪಕ್ಷದಲ್ಲಿದ್ದಾಗ ಭ್ರಷ್ಟರು, ಬಿಜೆಪಿ ಸೇರಿದರೆ ಪವಿತ್ರರು: ಕೇಸರಿ ಪಡೆಯಲ್ಲಿ ಹಗರಣದ ಆರೋಪಿಗಳದ್ದೇ ಹವಾ

“ನಾನು ಭ್ರಷ್ಟಾಚಾರ ಮಾಡುವುದಿಲ್ಲ, ಇತರರಿಗೂ ಮಾಡಲು ಬಿಡುವುದಿಲ್ಲ” ಎಂಬುದು ಪ್ರಧಾನಿ ಮೋದಿ ಅವರು ಪದೇ ಪದೇ ಹೇಳುವ ಮಾತು. ಆದರೆ, ಅವರ ಈ ಮಾತುಗಳಿಗೂ ಕೃತ್ಯಗಳಿಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ‘ದಿ ವೈರ್’ ವೆಬ್‌ಸೈಟ್ ಲೇಖನವೊಂದನ್ನು ಪ್ರಕಟಿಸಿದೆ.

ಈ ಹಿಂದೆ ತಾವು ಯಾರನ್ನು ಭ್ರಷ್ಟಾಚಾರದ ಆರೋಪ ಹೊತ್ತ ನಾಯಕರು ಎಂದು ಕರೆದಿದ್ದರೋ, ಅಂತಹವರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುವುದು ಮಾತ್ರವಲ್ಲದೆ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿರುವುದು ಬಿಜೆಪಿಯ ರಾಜಕಾರಣದ ಬಣ್ಣವನ್ನು ಬಯಲು ಮಾಡುತ್ತಿದೆ. ನಾರದ ಟೇಪ್ಸ್ ಮತ್ತು ಲೂಯಿಸ್ ಬರ್ಗರ್ ಹಗರಣದ ಆರೋಪಿಗಳು ಇಂದು ಬಿಜೆಪಿಯಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ.

ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ಮತ್ತು ಬಂಗಾಳದಲ್ಲಿ ಸುವೇಂದು ಅಧಿಕಾರಿ ಅವರನ್ನು ಪ್ರಧಾನಿ ಮೋದಿ ಸಿಎಂ ಆಗಿ ಮಾಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸುವ ಕೆಲವೇ ನಿಮಿಷಗಳ ಮೊದಲು, ಅವರ ಮೇಲಿದ್ದ ನಾರದ ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣದ ಖಾತೆಗಳಿಂದ ಡಿಲೀಟ್ ಮಾಡಿತ್ತು.

ಬಿಜೆಪಿಯಲ್ಲಿ ಇದು ಒಂದು ನಿರ್ದಿಷ್ಟ ಹಂತಗಳಲ್ಲಿ ನಡೆಯುವ ಪ್ರಕ್ರಿಯೆಯಂತಿದೆ. ಮೊದಲು ವಿರೋಧ ಪಕ್ಷದ ನಾಯಕನ ಮೇಲೆ ಹಗರಣದ ಮುದ್ರೆ ಒತ್ತುವುದು, ನಂತರ ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹೇರುವುದು, ಬಳಿಕ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಕೊನೆಯದಾಗಿ ಉನ್ನತ ಹುದ್ದೆಯ ಉಡುಗೊರೆ ನೀಡುವುದು ಇಲ್ಲಿನ ಪದ್ಧತಿಯಾಗಿದೆ.

ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ 190 ಪ್ರಕರಣಗಳಲ್ಲಿ ಶೇಕಡಾ 90 ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ಇವೆ. ಆದರೆ ಇವುಗಳಲ್ಲಿ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗಿದೆ ಎಂಬುದು ಗಮನಾರ್ಹ.

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಬಿಜೆಪಿ ಸೇರಿದ ತಕ್ಷಣ ಅವರ ಮೇಲಿದ್ದ ಭ್ರಷ್ಟಾಚಾರದ ಆರೋಪಗಳೆಲ್ಲವೂ ಮಾಯವಾದವು. ಈ ಕಾರಣಕ್ಕಾಗಿಯೇ ಬಿಜೆಪಿಗೆ ‘ವಾಷಿಂಗ್ ಮೆಷಿನ್’ ಎಂಬ ಹೆಸರು ಬಂದಿದೆ. ಬಿಹಾರದಲ್ಲಿ ಕೊಲೆ ಪ್ರಕರಣದ ಆರೋಪ ಹೊತ್ತಿದ್ದ ಸಾಮ್ರಾಟ್ ಚೌಧರಿ ಕೂಡ ಬಿಜೆಪಿ ಸೇರಿ ಮುಖ್ಯಮಂತ್ರಿಯಾಗಿದ್ದಾರೆ.

ಹಿಂದೆ ಮೋದಿ ಅವರು “ದೋಚಿದ ಹಣವನ್ನು ಮರಳಿ ನೀಡಲೇಬೇಕು” ಎಂದು ಹೇಳಿದ್ದರು. ಆದರೆ ಇಂದು ಆ ‘ದೋಚಿದ ಹಣ’ ಹೊಸ ಮುಖ್ಯಮಂತ್ರಿಗಳ ಮೂಲಕ ಬಿಜೆಪಿಯ ರಾಜಕೀಯ ಖಜಾನೆ ಸೇರುತ್ತಿರುವಂತೆ ಕಾಣುತ್ತಿದೆ. ಭ್ರಷ್ಟಾಚಾರ ಎಂಬುದು ಕೇವಲ ವಿರೋಧ ಪಕ್ಷದಲ್ಲಿ ಇದ್ದಾಗ ಮಾತ್ರ ಅಪರಾಧ ಎಂಬ ಸಂದೇಶವನ್ನು ಬಿಜೆಪಿ ನೀಡಿದಂತಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು