ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BREAKING: ಅಸ್ಸಾಂ ಮುಖ್ಯಮಂತ್ರಿ ಪತ್ನಿಯಿಂದ ಭಾರೀ ಹಗರಣ, ಇಕ್ಕಟ್ಟಿಗೆ ಸಿಲುಕಿದ ಹಿಮಂತ ಸರ್ಮ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

BREAKING: ಅಸ್ಸಾಂ ಮುಖ್ಯಮಂತ್ರಿ ಪತ್ನಿಯಿಂದ ಭಾರೀ ಹಗರಣ, ಇಕ್ಕಟ್ಟಿಗೆ ಸಿಲುಕಿದ ಹಿಮಂತ ಸರ್ಮ

Himanta Biswa Sarma | ನ್ಯೂಡೆಲ್ಲಿ: ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿಗಳು ಬಿಜೆಪಿ ನಾಯಕರು ಮತ್ತು ಅವರ ಹಿಂಬಾಲಕರಿಗೆ ಹಣದ ಮಳೆ ಸುರಿಸುತ್ತಿವೆ. ಈ ನಿಟ್ಟಿನಲ್ಲಿ ಇತ್ತೀಚಿನ ಘಟನೆಯೊಂದು ಅಸ್ಸಾಂನಲ್ಲಿ ಹೊರಬಿದ್ದಿದೆ.

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಸರ್ಮ ಅವರ ಪತ್ನಿ ರಿನಿಕ್ ಭುಯಾನ್ ಶರ್ಮಾ ಒಡೆತನದ ಕಂಪನಿಯು ‘ಪಿಎಂ ಕಿಸಾನ್ ಸಂಪದಾ ಯೋಜನೆ’ ಯೋಜನೆಯ ಮೂಲಕ 10 ಕೋಟಿ ರೂ.‌ ಸಾಲ ನೀಡಲಾಗಿದೆ.

ಕೇಂದ್ರ ಆಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿಯೇ ಈ ಕುರಿತು ಮಾಹಿತಿ ಬಂದಿದೆ. ರಿನಿಕ್ ಭುಯಾನ್ ಸರ್ಮ ಅವರ ಕಂಪನಿ ‘ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್’ ಸಂಪದಾ ಯೋಜನೆ ಯೋಜನೆಯಡಿಯಲ್ಲಿ 10 ಕೋಟಿ ರೂಪಾಯಿಗಳ ಸಬ್ಸಿಡಿ ಸಾಲವನ್ನು ಪಡೆದಿದೆ ಎಂದು ವೆಬ್‌ಸೈಟ್ ಹೇಳಿದೆ. ಈ ಪ್ರಕರಣ ಅಸ್ಸಾಂನಲ್ಲಿ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

‘ಬಿಜೆಪಿ ನಾಯಕರನ್ನು ಶ್ರೀಮಂತರನ್ನಾಗಿಸಲು ಪಿಎಂ ಕಿಸಾನ್ ಸಂಪದಾ ಯೋಜನೆಯನ್ನು ಆರಂಭಿಸಲಾಗಿದೆಯೇ? ಎಂದು ವಿರೋಧ ಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ಪ್ರಶ್ನಿಸುತ್ತಿವೆ.

ಕೇಂದ್ರ ಸರ್ಕಾರದ ಯೋಜನೆಗಳು ಸಾಮಾನ್ಯ ರೈತರಿಗಾಗಿಯೋ? ಬಿಜೆಪಿ ನಾಯಕರಿಗಾಗಿಯೋ? ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ.

ಇತ್ತೀಚೆಗಷ್ಟೇ ಅಸ್ಸಾಂನ ಸುದ್ದಿ ವೆಬ್ ಪೋರ್ಟಲ್‌ಗಳು ಸಿಎಂ ಕುಟುಂಬದ ಸದಸ್ಯರ ಬಗ್ಗೆ ಮತ್ತೊಂದು ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿವೆ. ಇದರಲ್ಲಿ ಮೊದಲಿಗೆ ನಾಗಾಂವ್ ಜಿಲ್ಲೆಯ ದರಿಗಾಜಿ ಗ್ರಾಮದಲ್ಲಿ ಅಧಿಕಾರಿಗಳು 30 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಭೂಮಿ ಎಂದು ವರ್ಗೀಕರಿಸಿದ್ದಾರೆ. ಇದು ನಡೆದ ಒಂದು ತಿಂಗಳಲ್ಲೇ ಸಿಎಂ ಹಿಮಂತ ಬಿಸ್ವಾ ಸರ್ಮ ಕುಟುಂಬಸ್ಥರು ಭೂಮಿ ಖರೀದಿಸಿ ಅಚ್ಚರಿ ಮೂಡಿಸಿದ್ದಾರೆ.

ಈ ಬಗ್ಗೆ ನ್ಯಾಯಾಂಗ ತನಿಖೆಗಾಗಿ ಗುವಾಹಟಿ ಹೈಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಲಾಗಿದೆ. ಆದರೆ ಈ ಆರೋಪಗಳನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಸರ್ಮ ನಿರಾಕರಿಸಿದ್ದಾರೆ. ‘ಪಿಎಂ ಕಿಸಾನ್ ಸಂಪದಾ ಯೋಜನೆ’ ಮೂಲಕ ತಮ್ಮ ಪತ್ನಿ ಮತ್ತು ಅವರ ಕಂಪನಿಗೆ ಯಾವುದೇ ಹಣವನ್ನು ನೀಡಲಾಗಿಲ್ಲ ಎಂದು ಅವರು ವಿವರಿಸಿದರು.

ಅನುದಾನ ಬಿಡುಗಡೆ ಮಾಡಿದವರು ಯಾರು?

ಕೃಷಿ ಉತ್ಪನ್ನಗಳ ಪೂರೈಕೆ ಸರಪಳಿಯಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ‘ಪಿಎಂ ಕಿಸಾನ್ ಸಂಪದಾ ಯೋಜನೆ’ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಕೇಂದ್ರ ಆಹಾರ ಸಂಸ್ಕರಣಾ ಇಲಾಖೆಯಿಂದ ಫಲಾನುಭವಿಗಳಿಗೆ ಸಬ್ಸಿಡಿ ಸಹಿತ ಸಾಲ ನೀಡಲಾಗುತ್ತದೆ. ಆದರೆ, ಕ್ಷೇತ್ರ ಮಟ್ಟದಲ್ಲಿ ಇದರ ಅನುಷ್ಠಾನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಸಿಎಂ ಪತ್ನಿಗೆ ಸೇರಿದ ಕಂಪನಿಗೆ ರೂ.10 ಕೋಟಿ ನೀಡುವುದು ಹೇಗೆ ಎಂಬ ಆರೋಪ ಕೇಳಿಬಂದಿದೆ. ‘ಇಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿದವರು ಯಾರು? ಬಿಜೆಪಿಯ ಇತರ ನಾಯಕರಿಗೂ ಇದೇ ರೀತಿ ಹಣ ಸಿಗುತ್ತಿದೆಯೇ? ಇದೇ ರೈತರ ಆದಾಯ ದ್ವಿಗುಣ ಮಾಡುವ ರೀತಿಯೇ?’ ಎಂದು ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಪ್ರಶ್ನಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು