ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 4 ದಿನ – ಬ್ಯಾಂಕ್ ಮುಷ್ಕರಕ್ಕೆ ಕರೆ

ರ

ರಮೇಶ್‌ ಹಾಸನ್‌ • ದೇಶ

• 2 ನಿಮಿಷದ ಓದು

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 4 ದಿನ – ಬ್ಯಾಂಕ್ ಮುಷ್ಕರಕ್ಕೆ ಕರೆ

ನವದೆಹಲಿ : ಸೆಪ್ಟೆಂಬರ್ ತಿಂಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕಿಂಗ್ ಸೇವೆಗಳಲ್ಲಿ (Banking Service)  ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸಂಘಟನೆಯು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್‌ನಲ್ಲಿ (September) ಒಟ್ಟು ನಾಲ್ಕು ದಿನಗಳ ದೇಶವ್ಯಾಪಿ (Big News)  ಬ್ಯಾಂಕ್ ಮುಷ್ಕರಕ್ಕೆ (Bank Strike) ಕರೆ ನೀಡಿದೆ. 5 ದಿನಗಳ ಕೆಲಸದ ವಾರ ವ್ಯವಸ್ಥೆ ಜಾರಿ ಮತ್ತು ಸರ್ಕಾರದ ನೂತನ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ (PLI) ಯೋಜನೆಯನ್ನು ಹಿಂಪಡೆಯುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

4 ದಿನ ಮುಷ್ಕರ ಪ್ಲ್ಯಾನ್‌ ಮಾಡಿರುವ ಸಂಘಟನೆ

ಆಗಸ್ಟ್ 23 ರಂದು ಬಿಡುಗಡೆ ಮಾಡಿದ ಸುತ್ತೋಲೆಯಲ್ಲಿ, ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟವಾದ UFBU ತನ್ನ ಹೋರಾಟದ ರೂಪುರೇಷೆಯನ್ನು ಪ್ರಕಟಿಸಿದೆ. ಇದರ ಪ್ರಕಾರ, ಸೆಪ್ಟೆಂಬರ್ 11 ರಂದು ಮೊದಲ ಹಂತದ ಒಂದು ದಿನದ ದೇಶವ್ಯಾಪಿ ಮುಷ್ಕರ ನಡೆಯಲಿದೆ. ತದನಂತರ ಸೆಪ್ಟೆಂಬರ್ 28, 29 ಮತ್ತು 30 ರಂದು ಸತತ ಮೂರು ದಿನಗಳ ಕಾಲ ಎರಡನೇ ಹಂತದ ಮುಷ್ಕರ ಆಯೋಜಿಸಲಾಗಿದೆ. ಒಂದು ವೇಳೆ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಅಕ್ಟೋಬರ್ 26 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಯೂನಿಯನ್‌ಗಳು ಎಚ್ಚರಿಸಿವೆ.

ಮುಷ್ಕರಕ್ಕೂ ಮುನ್ನವೇ ಆಗಸ್ಟ್ 24 ರಿಂದಲೇ ಬ್ಯಾಂಕ್ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವುದು, ಕಟ್ಟುನಿಟ್ಟಾಗಿ ನಿಗದಿತ ಕೆಲಸದ ವೇಳಾಪಟ್ಟಿಯನ್ನು ಮಾತ್ರ ಪಾಲಿಸುವುದು ಮತ್ತು ಅಧಿಕೃತ ವಾಟ್ಸಾಪ್ ಗ್ರೂಪ್‌ಗಳಿಂದ ಹೊರಬರುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಲಿದ್ದಾರೆ.

ಬ್ಯಾಂಕ್‌ ನೌಕರರ ಬೇಡಿಕೆ ಏನು?

ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆ ಎಂದರೆ ವಾರಕ್ಕೆ 5 ದಿನಗಳ ಕೆಲಸದ ವ್ಯವಸ್ಥೆ. ಈ ಬಗ್ಗೆ ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು ಯೂನಿಯನ್‌ಗಳ ನಡುವೆ ಮಾರ್ಚ್ 2024 ರಲ್ಲೇ ಒಪ್ಪಂದವಾಗಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ದಿನಕ್ಕೆ 40 ನಿಮಿಷ ಹೆಚ್ಚುವರಿ ಕೆಲಸ ಮಾಡಲು ನೌಕರರು ಸಮ್ಮತಿಸಿದ್ದರು. ಆದರೆ, ಈ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆಯಾಗಿ ಎರಡು ವರ್ಷಗಳೇ ಕಳೆದರೂ ಇನ್ನು ಅನುಮೋದನೆ ಸಿಕ್ಕಿಲ್ಲ ಎಂದು ಯೂನಿಯನ್‌ಗಳು ಆರೋಪಿಸಿವೆ.

ಮತ್ತೊಂದೆಡೆ, ಕೇಂದ್ರ ಸರ್ಕಾರದ ಹೊಸ PLI ಯೋಜನೆ ತೀವ್ರ ತಾರತಮ್ಯದಿಂದ ಕೂಡಿದೆ ಎಂಬುದು ನೌಕರರ ಮತ್ತೊಂದು ದೂರು. ಹಿರಿಯ ಅಧಿಕಾರಿಗಳಿಗೆ (Scale IV ಮತ್ತು ಅದಕ್ಕಿಂತ ಮೇಲ್ಪಟ್ಟವರು) ಅವರ ವೈಯಕ್ತಿಕ ಕಾರ್ಯಕ್ಷಮತೆ ಆಧರಿಸಿ 365 ದಿನಗಳ ಮೂಲ ವೇತನದವರೆಗೆ ಪ್ರೋತ್ಸಾಹಧನ ಸಿಗಲಿದ್ದು, ಶೇಕಡಾ 95 ರಷ್ಟಿರುವ ಉಳಿದ ಕೆಳಹಂತದ ಸಿಬ್ಬಂದಿಗೆ ಗರಿಷ್ಠ 15 ದಿನಗಳ ಪ್ರೋತ್ಸಾಹಧನ ಮಾತ್ರ ಸಿಗಲಿದೆ. ಇಡೀ ಬ್ಯಾಂಕಿನ ಒಟ್ಟಾರೆ ಸಾಧನೆ ಆಧರಿಸಿ ಎಲ್ಲರಿಗೂ ಸಮಾನವಾಗಿ ನೀಡುತ್ತಿದ್ದ ಹಳೆಯ ವ್ಯವಸ್ಥೆಯನ್ನು ಕೈಬಿಟ್ಟು, ಏಕಪಕ್ಷೀಯವಾಗಿ ಹೊಸ ನಿಯಮ ಜಾರಿಗೆ ತರುತ್ತಿರುವುದನ್ನು ನೌಕರರು ಖಂಡಿಸಿದ್ದಾರೆ.

ಇವುಗಳ ಜೊತೆಗೆ ಹಳೆಯ ಪಿಂಚಣಿ ಯೋಜನೆಗೆ (OPS) ಮರಳಲು ಅವಕಾಶ ನೀಡುವುದು, ಪಿಂಚಣಿ ಪರಿಷ್ಕರಣೆ ಮತ್ತು ತುಟ್ಟಿಭತ್ಯೆ (DA) ಸೂತ್ರದಲ್ಲಿ ಸಮಾನತೆ ತರುವುದು ಸೇರಿದಂತೆ ಹಲವು ಬಾಕಿ ಬೇಡಿಕೆಗಳನ್ನು ತಕ್ಷಣವೇ ಇತ್ಯರ್ಥಪಡಿಸಬೇಕು ಎಂದು UFBU ಒತ್ತಾಯಿಸಿದೆ. ಸೆಪ್ಟೆಂಬರ್‌ನಲ್ಲಿ ನಾಲ್ಕು ದಿನಗಳ ಮುಷ್ಕರ ಘೋಷಣೆಯಾಗಿರುವುದರಿಂದ ಬ್ಯಾಂಕ್ ಗ್ರಾಹಕರು ತಮ್ಮ ಹಣಕಾಸಿನ ವ್ಯವಹಾರಗಳನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವುದು ಒಳಿತು.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version