ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆನಡಾ ಸ್ಟಡಿ ಪರ್ಮಿಟ್ ಪಡೆಯುವುದು ಇನ್ಮುಂದೆ ಕಷ್ಟ!: ಹಣಕಾಸಿನ ಮೂಲಗಳ ಸಾಕ್ಷ್ಯಾಧಾರ ಕಡ್ಡಾಯ

PPeepal Media

Peepal Media ದೇಶ

• 1 ನಿಮಿಷದ ಓದು

ಕೆನಡಾ ಸ್ಟಡಿ ಪರ್ಮಿಟ್ ಪಡೆಯುವುದು ಇನ್ಮುಂದೆ ಕಷ್ಟ!: ಹಣಕಾಸಿನ ಮೂಲಗಳ ಸಾಕ್ಷ್ಯಾಧಾರ ಕಡ್ಡಾಯ

ಕೆನಡಾದಲ್ಲಿ ಶಿಕ್ಷಣ ಪಡೆಯಲು ಬಯಸುವ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಅಲ್ಲಿನ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇನ್ಮುಂದೆ ಸ್ಟಡಿ ಪರ್ಮಿಟ್ (ಅಧ್ಯಯನ ಅನುಮತಿ) ಅರ್ಜಿದಾರರ ಆರ್ಥಿಕ ಸ್ಥಿತಿಗತಿಯ ಕುರಿತು ಮತ್ತಷ್ಟು ಆಳವಾದ ತಪಾಸಣೆ ನಡೆಸಲಾಗುವುದು ಎಂದು ವಲಸೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳ ಬಳಿ ಎಷ್ಟು ಮೊತ್ತದ ಹಣವಿದೆ ಎಂಬ ವಿಷಯದ ಜೊತೆಗೆ, ಆ ಹಣ ಎಲ್ಲಿಂದ ಬಂದಿದೆ (ಆದಾಯದ ಮೂಲ) ಎಂಬುದನ್ನು ಸಹ ಕೂಲಂಕಷವಾಗಿ ಪರಿಶೀಲಿಸಲಾಗುತ್ತದೆ.

ಹೊಸ ನಿಯಮಗಳ ಪ್ರಕಾರ, ಕನಿಷ್ಠ ಕಾಯ್ದಿರಿಸಬೇಕಾದ ಹಣದ ಮೊತ್ತದ ನಿಯಮದಲ್ಲೇನೂ ಬದಲಾವಣೆಯಾಗಿಲ್ಲ. ಆದರೆ, ನಮೂದಿಸಲಾದ ಹಣಕ್ಕೆ ಸಂಬಂಧಿಸಿದ ಸ್ಪಷ್ಟವಾದ ಸಾಕ್ಷ್ಯಾಧಾರಗಳನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅರ್ಜಿದಾರರು ತಮ್ಮ ಆದಾಯದ ಮೂಲಗಳು, ಉದ್ಯೋಗದ ವಿವರಗಳು ಮತ್ತು ಬ್ಯಾಂಕ್ ಖಾತೆಗಳ ಕನಿಷ್ಠ ಆರು ತಿಂಗಳ ವಹಿವಾಟಿನ ಇತಿಹಾಸವನ್ನು (ಸ್ಟೇಟ್‌ಮೆಂಟ್) ಸಲ್ಲಿಸಬೇಕಾಗುತ್ತದೆ.

ಆ ಹಣವು ಕಾನೂನುಬದ್ಧ ಮಾರ್ಗಗಳ ಮೂಲಕ ಸಂಗ್ರಹವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪ್ರತ್ಯೇಕವಾಗಿ ಪರಿಶೀಲಿಸಲಿದ್ದಾರೆ. ಕೊನೆಯ ಕ್ಷಣದಲ್ಲಿ ಹಣವನ್ನು ಹೊಂದಿಸುವುದಕ್ಕಿಂತ ಹೆಚ್ಚಾಗಿ, ಮುಂಚಿತವಾಗಿಯೇ ಸೂಕ್ತ ಆರ್ಥಿಕ ಯೋಜನೆಯನ್ನು ಸಿದ್ಧಪಡಿಸಿಕೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು