ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಾಕ್ಷಿ ಕೊರತೆ: 2024ರ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯ ಆರೋಪಿಗೆ ಕ್ಲೀನ್‌ ಚಿಟ್‌ ನೀಡಿದ ಸಿಬಿಐ

PPeepal Media

Peepal Media ದೇಶ

• 1 ನಿಮಿಷದ ಓದು

ಸಾಕ್ಷಿ ಕೊರತೆ: 2024ರ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯ ಆರೋಪಿಗೆ ಕ್ಲೀನ್‌ ಚಿಟ್‌ ನೀಡಿದ ಸಿಬಿಐ

ನೀಟ್-ಯುಜಿ 2024 ರ ಪ್ರಶ್ನೆಪತ್ರಿಕೆ ಕಳವು ಅಥವಾ ವಿತರಣೆಯಲ್ಲಿ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾ ಭಾಗಿಯಾಗಿರುವುದನ್ನು ದೃಢೀಕರಿಸಲು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಗುರುವಾರ ತಿಳಿಸಿದೆ.

2024 ರ ಮೇ 5 ರಂದು ಬಿಹಾರ ಪೊಲೀಸರು ಪೇಪರ್ ಲೀಕ್ ಪ್ರಕರಣವನ್ನು ಬಯಲಿಗೆಳೆದಿದ್ದರು. ತನಿಖೆಯ ಸಮಯದಲ್ಲಿ, ಪೊಲೀಸರು ಮುಖಿಯಾ ಈ ಪ್ರಕರಣದ ಮುಖ್ಯ ಸೂತ್ರಧಾರ ಇರಬಹುದು ಎಂದು ಶಂಕಿಸಿ ಎಫ್‌ಐಆರ್‌ನಲ್ಲಿ ಅವರ ಹೆಸರು ಸೇರಿಸಿದ್ದರು. ಮುಖಿಯಾ ಅವರು ಪೇಪರ್ ಲೀಕ್‌ನ ಇತರ ಪ್ರಕರಣಗಳಲ್ಲೂ ಭಾಗಿಯಾಗಿದ್ದಾರೆ ಎಂದು ವರದಿಯಾಗಿತ್ತು.

ಅವರು ದೀರ್ಘಕಾಲ ತಲೆಮರೆಸಿಕೊಂಡಿದ್ದು, ನಂತರ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದರು. ಈ ಮಧ್ಯೆ, ಸಿಬಿಐ ನೀಟ್ ಪೇಪರ್ ಲೀಕ್ ಪ್ರಕರಣದ ತನಿಖೆಯನ್ನು ವಹಿಸಿಕೊಂಡು ನಂತರ ಅವರ ವಶಕ್ಕೆ ಪಡೆದುಕೊಂಡಿತ್ತು.

ಹೇಳಿಕೆಯೊಂದರಲ್ಲಿ ತನಿಖಾ ಸಂಸ್ಥೆಯು, “ತನಿಖೆಯ ಸಮಯದಲ್ಲಿ, ಕಳುವಾದ ಪ್ರಶ್ನೆಪತ್ರಿಕೆಯ ಕಳವು ಮತ್ತು ಮುಂದಿನ ವಿತರಣೆಯಲ್ಲಿ ಭಾಗಿಯಾದ ಪ್ರತಿಯೊಬ್ಬ ವ್ಯಕ್ತಿಯನ್ನು, ಹಾಗೆಯೇ ಇದರಿಂದ ಲಾಭ ಪಡೆದ ಪ್ರತಿಯೊಬ್ಬ ಅಭ್ಯರ್ಥಿಯನ್ನು ಸಿಬಿಐ ಗುರುತಿಸಿದೆ. ಪಾಟ್ನಾದ ನ್ಯಾಯ ವ್ಯಾಪ್ತಿಯ ನ್ಯಾಯಾಲಯದಲ್ಲಿ 45 ಜನರ ವಿರುದ್ಧ ಹಲವು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾ ಅವರ ಪಾತ್ರವನ್ನು ದೃಢೀಕರಿಸುವ ಯಾವುದೇ ಆಧಾರಗಳು ಸಿಬಿಐಗೆ ಸಿಕ್ಕಿಲ್ಲ” ಎಂದು ತಿಳಿಸಿದೆ.

ಮುಖಿಯಾ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಸಿಗದ ಕಾರಣ, ಅವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿಲ್ಲ ಎಂದು ಹೇಳಿದೆ. ಪರಿಣಾಮವಾಗಿ ಅವರಿಗೆ ಜಾಮೀನು ಸಿಕ್ಕಿದೆ. “ಸಿಬಿಐ ಪ್ರಕರಣದಲ್ಲಿ ಜಾಮೀನು ಸಿಕ್ಕ ನಂತರವೂ ಬಿಹಾರ ಪೊಲೀಸರು ತನಿಖೆ ನಡೆಸುತ್ತಿರುವ ಕೆಲವು ಇತರ ಪ್ರಕರಣಗಳಲ್ಲಿ ಆರೋಪಿಯಾಗಿರುವುದರಿಂದ ಮುಖಿಯಾ ನ್ಯಾಯಾಂಗ ಬಂಧನದಲ್ಲೇ ಉಳಿದಿದ್ದಾರೆ” ಎಂದು ಸಂಸ್ಥೆ ತಿಳಿಸಿದೆ.

ಮುಖಿಯಾ ಈ ಹಿಂದೆ ನಾಲ್ವಂದದ (ನಾಲಂದ) ನೂರ್‌ಸರಾಯ್ ಶಾಖೆಯ ಕಾಲೇಜಿನಲ್ಲಿ ತಾಂತ್ರಿಕ ಸಹಾಯಕರಾಗಿ ಉದ್ಯೋಗದಲ್ಲಿದ್ದ. 2016 ರ ಬಿಹಾರ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪೇಪರ್ ಲೀಕ್ ಸೇರಿದಂತೆ ಹಲವು ಪೇಪರ್ ಲೀಕ್ ಪ್ರಕರಣಗಳಲ್ಲಿ ಅವನ ಹೆಸರು ಕೇಳಿಬಂದಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳ ಹಲವು ಹಗರಣಗಳ ಆರೋಪಿ ರಂಜೀತ್ ಡಾನ್ ಅಲಿಯಾಸ್ ಕುಮಾರ್ ಸುಖದೇವ್ ಸಿಂಗ್ ಜೊತೆಗೂ ಸಂಪರ್ಕ ಹೊಂದಿದ್ದ. 2003 ರಲ್ಲಿ ಸಿಎಟಿ (ಕ್ಯಾಟ್) ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಸಿಬಿಐನಿಂದ ಬಂಧನಕ್ಕೊಳಗಾದಾಗ ಮುಖಿಯಾ ಮೊದಲ ಬಾರಿಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು