ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಧಾನಿಯಲ್ಲಿ ಮತಾಂಧರ ಅಟ್ಟಹಾಸ: ಚರ್ಚ್ ಧ್ವಂಸ… ಕ್ರೈಸ್ತರ ಮೇಲೆ ದಾಳಿ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ರಾಜಧಾನಿಯಲ್ಲಿ ಮತಾಂಧರ ಅಟ್ಟಹಾಸ: ಚರ್ಚ್ ಧ್ವಂಸ… ಕ್ರೈಸ್ತರ ಮೇಲೆ ದಾಳಿ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಮತಾಂಧರು ಮತ್ತೆ ರೊಚ್ಚಿಗೆದ್ದಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ದುಷ್ಕರ್ಮಿಗಳು ಭಾನುವಾರ ತಾಹಿರ್‌ಪುರ ಪ್ರದೇಶದಲ್ಲಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ಚರ್ಚ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ.

ಅನೇಕ ಕ್ರಿಶ್ಚಿಯನ್ನರ ಮೇಲೆಯೂ ದಾಳಿ ಮಾಡಲಾಗಿದೆ. ಬೆಳಗ್ಗೆ 10.40ಕ್ಕೆ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಪಾದ್ರಿ ಸತ್ಪಾಲ್ ಭಾಟಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ದಾಖಲಿಸಿದ ಎಫ್‌ಐಆರ್ ಪ್ರಕಾರ, ಮತಾಂಧರು ಘೋಷಣೆಗಳನ್ನು ಕೂಗುತ್ತಾ ಚರ್ಚ್‌ಗೆ ಪ್ರವೇಶಿಸಿದ್ದಾರೆ. ಮಹಿಳೆಯರು ಸೇರಿದಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಕ್ರೈಸ್ತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ.

ಯೇಸುವಿನ ಚಿತ್ರಗಳನ್ನೂ ನಾಶಪಡಿಸಲಾಗಿದೆ. ಬೈಬಲ್ ನ ಪ್ರತಿಗಳನ್ನು ಹರಿದು ಹಾಕಲು ಪ್ರಯತ್ನಿಸಿ. ಕೆಲವರನ್ನು ಹೊರಗೆಳೆದು ತುಳಿದಿದ್ದಾರೆ. ‘ಡೆಮಾಕ್ರಸಿ ನ್ಯೂಸ್ ಇಂಡಿಯಾ’ ಬಿಡುಗಡೆ ಮಾಡಿರುವ ವೀಡಿಯೋ ಪ್ರಕಾರ, ಪುಂಡರ ದಾಳಿಯಲ್ಲಿ ಸಂಗೀತ ಉಪಕರಣಗಳೂ ನಾಶವಾಗಿವೆ.

ಡ್ರಮ್ಸ್ ಉಪಕರಣವನ್ನು ಚಾಕುವಿನಿಂದ ಕತ್ತರಿಸಲಾಗಿದೆ. ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗದಿದ್ದರೆ ಇನ್ಯಾರಾದರೂ ಬಂದು ಹಲ್ಲೆ ನಡೆಸುವ ಸಾಧ್ಯತೆ ಇದೆ ಎಂದು ಪಾದ್ರಿ ಭಾಟಿ ಹೇಳಿದರು.

ತಮ್ಮ ಮೇಲೆ ಬಜರಂಗದಳ ಮತ್ತು ಆರ್‌ಎಸ್‌ಎಸ್ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ. ಇನ್ನು ಕೆಲವರೊಂದಿಗೆ ಜಿಟಿಬಿ ಎನ್‌ಕ್ಲೇವ್ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಬಜರಂಗದಳ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಸೇರಿದ ಸುಮಾರು ನೂರು ಮಂದಿ ಅಲ್ಲಿ ಸೇರಿಕೊಂಡು ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದರು ಎಂದು ಅವರು ವಿವರಿಸಿದರು.

ಕಳೆದೊಂದು ದಶಕದಲ್ಲಿ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ನಾಡಿನ ಜನತೆಗೆ ಅವರ ತಾಯ್ನಾಡಿನಲ್ಲಿ ರಕ್ಷಣೆಯ ಕೊರತೆ ಇದ್ದು, ಬದುಕಲು ಸಾಧ್ಯವೇ ಇಲ್ಲದ ಪರಿಸ್ಥಿತಿ ಎದುರಾಗಿದೆ ಎಂದು ಅವರು ನೋವಿನಿಂದ ನುಡಿದರು. ಅಪರಿಚಿತ ವ್ಯಕ್ತಿಗಳು ಚರ್ಚ್ ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಷಯಗಳು: #kannada #karnataka #peepal #peepalmedia
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು