ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಜೆಪಿ ಖಾತೆ ಮುಚ್ಚಿ ಬಿಜೆಪಿ ಸೇರದಿದ್ದರೆ.. ಅಮೆರಿಕದಲ್ಲಿದ್ದರೂ ಕೊಲ್ಲುತ್ತೇವೆ!: ​ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಬೆದರಿಕೆ

PPeepal Media

Peepal Media ದೇಶ

• 1 ನಿಮಿಷದ ಓದು

ಸಿಜೆಪಿ ಖಾತೆ ಮುಚ್ಚಿ ಬಿಜೆಪಿ ಸೇರದಿದ್ದರೆ.. ಅಮೆರಿಕದಲ್ಲಿದ್ದರೂ ಕೊಲ್ಲುತ್ತೇವೆ!: ​ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಬೆದರಿಕೆ

ದೆಹಲಿ, ಮೇ 22: ‘ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ)’ ಹೆಸರಿನಲ್ಲಿ ಆನ್‌ಲೈನ್ ವ್ಯಂಗ್ಯ (Satire) ಚಳವಳಿ ವೇದಿಕೆಯನ್ನು ಪ್ರಾರಂಭಿಸಿರುವ ಅಭಿಜೀತ್ ದೀಪ್ಕೆ, ತಮಗೆ ಈಗ ಕೊಲೆ ಬೆದರಿಕೆಗಳು ಬರುತ್ತಿರುವುದಾಗಿ ತಿಳಿಸಿದ್ದಾರೆ.

​”ಸಿಜೆಪಿ ಖಾತೆಯನ್ನು ಮುಚ್ಚಿ ಬಿಜೆಪಿ ಸೇರಿದರೆ ಹಣ ಬರುತ್ತದೆ. ಇಲ್ಲದಿದ್ದರೆ ನೀನು ಅಮೆರಿಕದಲ್ಲಿದ್ದರೂ ನಿನ್ನನ್ನು ಕೊಲ್ಲುತ್ತೇವೆ” ಎಂದು ವ್ಯಕ್ತಿಯೊಬ್ಬ ತಮಗೆ ಬೆದರಿಕೆ ಹಾಕಿರುವುದಾಗಿ ತಿಳಿಸಿ, ಅದಕ್ಕೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳನ್ನು ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

​ಅಲ್ಲದೆ, ಭಾರತದಲ್ಲಿರುವ ದೀಪ್ಕೆ ಪೋಷಕರ ವಿಳಾಸ ತಮಗೆ ತಿಳಿದಿದೆ ಎಂದು ಮತ್ತೊಬ್ಬ ವ್ಯಕ್ತಿ ಬೆದರಿಕೆ ಹಾಕಿರುವ ವಿಡಿಯೋವನ್ನು ಸಹ ಅವರು ಪೋಸ್ಟ್ ಮಾಡಿದ್ದಾರೆ. ಅಮೆರಿಕದಲ್ಲಿ ತಮ್ಮ ಗ್ರಾಜುಯೇಷನ್ ಮುಗಿದಿದ್ದು, ಮುಂದಿನ ತಿಂಗಳು ಭಾರತಕ್ಕೆ ಬರಲು ಯೋಜಿಸಿರುವುದಾಗಿ ದೀಪ್ಕೆ ತಿಳಿಸಿದ್ದಾರೆ. 

ಆದರೆ, ಹಿಂದೆ ಇದೇ ರೀತಿ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದವರನ್ನು ಭಾರತಕ್ಕೆ ಬಂದ ತಕ್ಷಣ ಬಂಧಿಸಿದ ಘಟನೆಗಳನ್ನು ನೆನಪಿಸಿಕೊಂಡಿರುವ ಅವರು, ತಾವು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದು ನೇರವಾಗಿ ತಿಹಾರ್ ಜೈಲಿಗೆ ಕಳುಹಿಸುತ್ತಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

​’ದಲಿತ ಕಾರ್ಡ್’ ಎಂದು ಟ್ರೋಲ್

​’ಎಕ್ಸ್’ನಲ್ಲಿ ‘ಶಟಪ್ ಕೌನ್ಸೆಲ್’ ಎಂಬ ಯೂಸರ್‌ನೇಮ್ ಹೊಂದಿರುವ ವ್ಯಕ್ತಿಯೊಬ್ಬರು, ಮೀಸಲಾತಿ, ದಲಿತರ ಸಮಸ್ಯೆಗಳು ಮತ್ತು ಸಾಮಾಜಿಕ ನ್ಯಾಯದ ಕುರಿತು ಸಿಜೆಪಿಯ ನಿಲುವು ಏನು ಎಂದು ದೀಪ್ಕೆ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ದೀಪ್ಕೆ, “ನಾನು ಸ್ವತಃ ದಲಿತ ಸಮುದಾಯಕ್ಕೆ ಸೇರಿದವನು. ಇದು ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತದೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

​ದೀಪ್ಕೆ ಈ ಮಾತು ಹೇಳಿದ ಮರುಕ್ಷಣದಿಂದಲೇ ಅವರ ಮೇಲೆ ಭಾರಿ ಟ್ರೋಲಿಂಗ್ ಶುರುವಾಗಿದೆ. “ಹಾಗಾದರೆ, ಸ್ವಯಂ ಘೋಷಿತ ಜೆನ್ ಜಿ (Gen Z) ನಾಯಕ ಪ್ರತಿಭೆಗೆ ವಿರೋಧಿ ಎಂದರ್ಥ” ಎಂದು ಒಬ್ಬರು ಕಮೆಂಟ್ ಮಾಡಿದರೆ, “ಬಂತು ನೋಡಿ ಡಿ ಕಾರ್ಡ್ (ದಲಿತ ಕಾರ್ಡ್)” ಎಂದು ಮತ್ತೊಬ್ಬರು ಟೀಕಿಸಿದ್ದಾರೆ.

​ಇವೆಲ್ಲದರ ನಡುವೆ, ನೀಟ್ (NEET) ಪರೀಕ್ಷೆ ನಡೆಸುವಲ್ಲಿ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೀಪ್ಕೆ ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸಿಜೆಪಿ ಫಾಲೋವರ್ಸ್‌ಗಳ ಸಂಖ್ಯೆ ಶುಕ್ರವಾರ ಸಂಜೆಯ ವೇಳೆಗೆ 2 ಕೋಟಿ ದಾಟಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು