ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಜೆಪಿ ಸಂಸ್ಥಾಪಕ ಅಭಿಸಿತ್ ದಿಪ್ಕೆಗೆ ಟೈಫಾಯ್ಡ್ ಧೃಡ: ಹೋರಾಟ ಮುಂದುವರಿಯಲಿದೆ ಎಂದ ನಾಯಕ

PPeepal Media

Peepal Media ದೇಶ

• 1 ನಿಮಿಷದ ಓದು

ಸಿಜೆಪಿ ಸಂಸ್ಥಾಪಕ ಅಭಿಸಿತ್ ದಿಪ್ಕೆಗೆ ಟೈಫಾಯ್ಡ್ ಧೃಡ: ಹೋರಾಟ ಮುಂದುವರಿಯಲಿದೆ ಎಂದ ನಾಯಕ

ದೆಹಲಿ: ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಚಳವಳಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಸಿತ್ ದಿಪ್ಕೆ ಅವರಿಗೆ ಟೈಫಾಯ್ಡ್ ಇರುವುದು ದೃಢಪಟ್ಟಿದೆ. ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ದೇಶವ್ಯಾಪಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ವೀಡಿಯೊ ಸಂದೇಶವೊಂದನ್ನು ಹಂಚಿಕೊಂಡಿರುವ ಅಭಿಸಿತ್ ದಿಪ್ಕೆ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ರಕ್ತ ತಪಾಸಣೆ ವರದಿಯಲ್ಲಿ ಟೈಫಾಯ್ಡ್ ಇರುವುದು ತಿಳಿದುಬಂದಿದೆ ಎಂದಿದ್ದಾರೆ. ಪ್ರಸ್ತುತ ತಮಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಐವಿ ಡ್ರೈಪ್ಸ್ (IV Drips) ನೀಡಲಾಗುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ತಮ್ಮ ಅನಾರೋಗ್ಯದ ನಡುವೆಯೂ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿರುವ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ಅವರು, “ಕಳೆದ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ. ಈಗ ವರದಿ ಬಂದಿದ್ದು ಟೈಫಾಯ್ಡ್ ಇರುವುದು ದೃಢಪಟ್ಟಿದೆ. ನನಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರತಿದಿನ ಐವಿ ಡ್ರೈಪ್ಸ್ ಹಾಕಲಾಗುತ್ತಿದೆ. ಆದರೆ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಎಲ್ಲಾ ಬೆಂಬಲಿಗರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನೀವೆಲ್ಲರೂ ಈ ಚಳವಳಿಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಿದ್ದೀರಿ. ಪ್ರತಿಯೊಬ್ಬರೂ ಇದೇ ರೀತಿ ಹೋರಾಟ ಮುಂದುವರಿಸಿದರೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸಿಗುವುದು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದ ಪ್ರತಿಭಟನೆ

ನೀಟ್ ಪೇಪರ್ ಲೀಕ್ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಸಿಜೆಪಿ ನೇತೃತ್ವದಲ್ಲಿ ಕಳೆದ ತಿಂಗಳಿನಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಸಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ನೇರ ಹೊಣೆಗಾರರಾಗಿದ್ದು, ಅವರನ್ನು ಸಂಪುಟದಿಂದ ತಕ್ಷಣವೇ ವಜಾಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಮುಖ್ಯ ಬೇಡಿಕೆಯಾಗಿದೆ.

ದೆಹಲಿಯಲ್ಲಿ ಬಿಗಿಗೊಳಿಸಲಾದ ಭದ್ರತೆ

ವಾರಾಂತ್ಯದಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ದೆಹಲಿ ಪೊಲೀಸರು ಭದ್ರತೆಯನ್ನು ತೀವ್ರಗೊಳಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಅವುಗಳನ್ನು ದಪ್ಪಗಿನ ಕಬ್ಬಿಣದ ಸರಪಳಿಗಳಿಂದ ಬಂಧಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಇದರ ಜೊತೆಗೆ, ಪ್ರತಿಭಟನಾ ಸ್ಥಳದ ಸುತ್ತಮುತ್ತ ಅಳವಡಿಸಲಾಗಿರುವ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ (ಮುಖ ಗುರುತಿಸುವಿಕೆ ತಂತ್ರಜ್ಞಾನ) ಮೂಲಕ ಕಳೆದ ಕೆಲವು ದಿನಗಳಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ 2,500 ಕ್ಕೂ ಹೆಚ್ಚು ಜನರನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಂತಹ ವ್ಯಕ್ತಿಗಳು ಕಂಡುಬಂದ ತಕ್ಷಣ ಈ ತಂತ್ರಜ್ಞಾನವು ಸ್ಥಳದಲ್ಲಿದ್ದ ಪೊಲೀಸರಿಗೆ ಎಚ್ಚರಿಕೆ ರವಾನಿಸುತ್ತಿದ್ದು, ಅವರ ಮೇಲೆ ನಿಗಾ ವಹಿಸಲು ನೆರವಾಗುತ್ತಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು