ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ಟೋಬರ್ 23ರಿಂದ ದೇಶವ್ಯಾಪಿ ಪ್ರತಿಭಟನೆ: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಕರೆ

PPeepal Media

Peepal Media ದೇಶ

• 1 ನಿಮಿಷದ ಓದು

ಅಕ್ಟೋಬರ್ 23ರಿಂದ ದೇಶವ್ಯಾಪಿ ಪ್ರತಿಭಟನೆ: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಕರೆ

ದೆಹಲಿ: ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್ – SIR) ಪ್ರಕ್ರಿಯೆಯನ್ನು ವಿರೋಧಿಸಿ ಅಕ್ಟೋಬರ್ ೨೩ ರಿಂದ ದೇಶಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿದೆ. ಮುಂಬರುವ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ತಮ್ಮ ಪ್ರಚಾರವನ್ನು ತೀವ್ರಗೊಳಿಸುವುದರ ಜತೆಗೆ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಸಾಕ್ಷ್ಯಗಳನ್ನು ಸಂಗ್ರಹಿಸುವುದಾಗಿ ಪಕ್ಷ ತಿಳಿಸಿದೆ.

ಇದರೊಂದಿಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೂ ಒತ್ತಾಯಿಸಲಾಗಿದ್ದು, ಈ ಹೋರಾಟದಲ್ಲಿ ರೈತರು, ದಲಿತರು, ವಿದ್ಯಾರ್ಥಿಗಳು ಹಾಗೂ ಯುವಜನರು ಕೈಜೋಡಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗಿದೆ. ಎಸ್‌ಐಆರ್ ಪ್ರಕರಣದ ತನಿಖೆ ನಡೆಸುತ್ತಿರುವ ತಂಡಕ್ಕೆ ಈಗಾಗಲೇ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದ್ದು, ಇನ್ನುಮುಂದೆ ಚಳವಳಿಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವುದಾಗಿ ನಾಯಕರು ತಿಳಿಸಿದ್ದಾರೆ.

ಸ್ವಂತ ನಾಗರಿಕರ ವಿರುದ್ಧವೇ ಸರ್ಕಾರದ ದಮನಕಾರಿ ನೀತಿ: ಮುಖಂಡರ ಆರೋಪ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಪ್ರಧಾನಿ ಮೋದಿ ಸರ್ಕಾರಿ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ. ಐಸಾ (AISA) ಅಧ್ಯಕ್ಷೆ ನೇಹಾ ಬೋರಾ ಹಾಗೂ ಖ್ಯಾತ ನಟ ಪ್ರಕಾಶ್ ರಾಜ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಾಂತಿಯುತವಾಗಿ ಧ್ವನಿ ಎತ್ತುತ್ತಿರುವ ದೆಹಲಿಯ ಯುವಜನತೆಯನ್ನು ಪೊಲೀಸರು ಬೀದಿಬೀದಿಗಳಲ್ಲಿ ಎಳೆದಾಡಿದ್ದಾರೆ. ಒಬ್ಬ ಅಧಿಕಾರಿಯನ್ನು ರಕ್ಷಿಸಲು ಸರ್ಕಾರ ತನ್ನದೇ ನಾಗರಿಕರ ವಿರುದ್ಧ ಸಮರ ಸಾರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ಶುಕ್ರವಾರ (ಅ. 16) ಸಂಜೆ 5 ಗಂಟೆಗೆ ದೆಹಲಿಯ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ‘ತಿರಂಗಾ ಮಾರ್ಚ್’ ನಡೆಸಲು ಸಾರ್ವಜನಿಕರಿಗೆ ಕರೆ ನೀಡಲಾಗಿದೆ. ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ರಾಷ್ಟ್ರಧ್ವಜವನ್ನು ಹಿಡಿಯುವುದು ಅಪರಾಧವಾಗಲು ಸಾಧ್ಯ ಎಂದು ಮುಖಂಡರು ಕಿಡಿಕಾರಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು