ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಚುನಾವಣಾ ಪ್ರಚಾರ: ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿ

P

Peepal Media Desk • ದೇಶ

• 2 ನಿಮಿಷದ ಓದು

ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಚುನಾವಣಾ ಪ್ರಚಾರ: ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿಯವರ ಭಾಷಣವನು ದೇಶದ ಮುನ್ನಡೆಯ ದಿಕ್ಸೂಚಿ ಭಾಷಣವಾಗಬೇಕಿದ್ದ ಸ್ವಾತಂತ್ರ್ಯೋತ್ಸವದ ಭಾಷಣ ಚುನಾವಣಾ ರಾಜಕೀಯ ಭಾಷಣದಂತಿತ್ತು ಎಂದು ಅವರು ಕಿಡಿ ಕಾರಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣಕ್ಕೆ ಮುಖ್ಯಮಂತ್ರಿ ಸರಣಿ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿದ್ದು, ಅವರು ಪ್ರಧಾನಿಯವರ ಭಾಷಣ ದಿಕ್ಕುತಪ್ಪಿದ ಕುರಿತು ಪ್ರತಿಕ್ರಿಯಿಸುತ್ತಾ “ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಂಪುಕೋಟೆಯಿಂದ ನೀವು ಮಾಡಿದ ‘ಚುನಾವಣಾ ಭಾಷಣ’ವನ್ನು ಗಮನಿಸಿದೆ. ದೇಶವನ್ನು ಕಾಡುತ್ತಿರುವ ಗಂಭೀರ ವಿದ್ಯಮಾನಗಳಿಗೆ ಮುಖಾಮುಖಿಯಾಗುವ, ಸಂವಿಧಾನದ ಆಶಯಗಳಡಿ ಅಭಿವೃದ್ಧಿ ಪಥವನ್ನು ಅನಾವರಣಗೊಳಿಸುವ ಮಾತುಗಳನ್ನಾಡಬೇಕಾದ ನೀವು ಚುನಾವಣಾ ಸಮಾವೇಶದಲ್ಲಿ ಮಾಡುವಂತಹ ರಾಜಕೀಯ ಭಾಷಣಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದು ವಿಷಾದನೀಯ.” ಎಂದಿದ್ದಾರೆ.

ಮುಂದುವರೆದು ಟ್ವೀಟ್‌ ಮಾಡಿರುವ ಅವರು ಮೋದಿಯವರ ಮಣಿಪುರ ವಿಷಯದ ಕುರಿತಾದ ಮೌನವನ್ನು ಪ್ರಶ್ನಿಸಿ, ನಿಮ್ಮದು ಜಾಣ ಮೌನವೆಂದು ಜರಿದಿದ್ದಾರೆ, ಈ ಕುರಿತು ಅವರು ಟ್ವೀಟ್‌ ಮಾಡಿ, “ಮಣಿಪುರ ಹಿಂಸಾಚಾರದ ಕುರಿತು ಖಚಿತ ನಿಲುವನ್ನು ಪ್ರಕಟಿಸದೆ ಬಾಯುಪಚಾರದ ಮಾತುಗಳ ಮೂಲಕ ಜಾರಿಕೊಂಡದ್ದು ನಿಮ್ಮ ವೈಫಲ್ಯಕ್ಕೆ ಹಿಡಿದ ಕನ್ನಡಿ. ಬೆಲೆ ಏರಿಕೆಯಿಂದ ಜನತೆ ತತ್ತರಿಸಿಹೋಗಿದ್ದಾರೆ. ದೇಶದ ಉತ್ತರ ಭಾಗದಲ್ಲಿ ನೈಸರ್ಗಿಕ ವಿಕೋಪಗಳಾದ ಅತಿವೃಷ್ಟಿ, ಮೇಘಸ್ಫೋಟದಿಂದ ಜನ ಬೀದಿಗೆ ಬಿದ್ದಿದ್ದಾರೆ, ದೇಶದ ರಾಜಧಾನಿಯಲ್ಲಿನ ಪ್ರವಾಹ ಜನರನ್ನು ಭೀತಿಗೀಡುಮಾಡಿದೆ. ಈ ವಿಷಯಗಳ ಬಗೆಗಿನ ನಿಮ್ಮ ಜಾಣಮೌನವನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಿದ್ದಾರೆ.” ಎಂದು ಹೇಳಿದ್ದಾರೆ.

ಸದಾ ಅನ್ಯ ಧರ್ಮಗಳ ವಿರುದ್ಧ ಕಿಡಿ ಕಾರುವ ಪಕ್ಷದ ಅಜೆಂಡಾ, ಹೇಳಿಕೊಳ್ಳಲು ಸಾಧನೆಗಳಿಲ್ಲದಿರುವುದರ ಹತಾಶೆ ನಿಮ್ಮನ್ನು ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು ಹೊರಿಸುವಂತೆ ಮಾಡಿದೆ ಎಂದು ಅವರು ಪ್ರಧಾನಮಂತ್ರಿಗೆ ಕುಟುಕಿದ್ದಾರೆ. ಈ ವಿಷಯದ ಕುರಿತು ಮಾಡಿರುವ ಟ್ವೀಟ್‌ನಲ್ಲಿ, “ಜಾತಿ,ಧರ್ಮಗಳ ಆಧಾರದಲ್ಲಿ ದೇಶವನ್ನು ಒಡೆಯುವ ಬಿಜೆಪಿಯ ಅಜೆಂಡಾ ಈಗ ಗುಪ್ತವಾಗಿ ಉಳಿದಿಲ್ಲ, ಸರ್ಕಾರದ ಸಾಧನೆಗಳ ಆಧಾರದಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಸಾಧ್ಯ ಇಲ್ಲ ಎನ್ನುವುದು ನಿಮಗೆ ಮನದಟ್ಟಾಗಿದೆ. ಈ ಪರಿಸ್ಥಿತಿಯಲ್ಲಿ ಉಳಿದಿರುವ ಮತ್ತು ನಿಮಗೆ ಅತ್ಯಂತ ಪ್ರಿಯವಾದ ಅಸ್ತ್ರ ಅನ್ಯಧರ್ಮಗಳ ದ್ವೇಷದ ರಾಜಕಾರಣ ಮತ್ತು ಕಾಂಗ್ರೆಸ್ ವಿರುದ್ಧ ಓಲೈಕೆ ರಾಜಕಾರಣ ಮಾತ್ರ.” ಎಂದು ಟೀಕಿಸಿದ್ದಾರೆ.

ಮುಂದುವರೆದ ಸರಣಿ ಟ್ವೀಟ್‌ಗಳಲ್ಲಿ ಸದಾ ವಂಶ ರಾಜಕಾರಣವೆಂದು ಕಾಂಗ್ರೆಸ್‌ ವಿರುದ್ಧ ಟೀಕಿಸುವ ಮೋದಿಯವರಿಗೆ ಅವರದ್ದೇ ಪಕ್ಷದಲ್ಲಿನ ಕುಟುಂಬ ರಾಜಕಾರಣವನ್ನು ನೆನಪಿಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಾದ ಟ್ವೀಟ್‌ನಲ್ಲಿ ಅವರು, “

ನಿಮ್ಮ ಸುದೀರ್ಘ ಭಾಷಣದಲ್ಲಿ ಮತ್ತೆ ಮತ್ತೆ ಕುಟುಂಬವಾದವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷವನ್ನು ಚುಚ್ಚುವ ಪ್ರಯತ್ನ ಮಾಡಿದ್ದೀರಿ. ಕುಟುಂಬವಾದದ ಬಗೆಗಿನ ನಿಮ್ಮ ನಿಲುವು ವೈಯಕ್ತಿಕವಾದದ್ದೇ? ಇಲ್ಲವೇ ಪಕ್ಷದ್ದೇ? ಕರ್ನಾಟಕದ ಚುನಾವಣೆಯಲ್ಲಿ ಈ ಬಾರಿ ನಿಮ್ಮ ಪಕ್ಷ ‘ಕುಟುಂಬ ರಾಜಕಾರಣ’ಕ್ಕೆ ಸೇರುವ 34 ಅಭ್ಯರ್ಥಿಗಳಿಗೆ ಚುನಾವಣಾ ಟಿಕೆಟ್‌ ನೀಡಿತ್ತು. ಬಿ.ಎಸ್‌ ಯಡಿಯೂರಪ್ಪನವರ ಕುಟುಂಬ, ಜಾರಕಿಹೊಳಿ ಕುಟುಂಬ, ಕತ್ತಿ ಕುಟುಂಬ, ಜೊಲ್ಲೆ, ನಿರಾಣಿ, ಗಣಿ ರೆಡ್ಡಿಗಳು, ಗುತ್ತೇದಾರ್‌ಗಳು ಇವರೆಲ್ಲಾ ನಿಮ್ಮ ಪಕ್ಷದ ಟಿಕೆಟ್‌ ಪಡೆದು ಚುನಾವಣೆ ಎದುರಿಸಲಿಲ್ಲವೇ?

ಅಡ್ಡ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಾಗ ನಿಮಗೆ ಕುಟುಂಬವಾದದ ನೆನಪಾಗುವುದಿಲ್ಲವೇ ಮೋದಿ ಅವರೇ? ಕರ್ನಾಟದಲ್ಲಿ ದೇವೇಗೌಡರ ಕುಟುಂಬ, ಮಹಾರಾಷ್ಟ್ರದಲ್ಲಿ ಠಾಕ್ರೆ ಕುಟುಂಬ, ಹರಿಯಾಣದಲ್ಲಿ ಚೌತಾಲಾ ಕುಟುಂಬ, ಕಾಶ್ಮೀರದಲ್ಲಿ ಮುಫ್ತಿ ಕುಟುಂಬ, ಪಂಜಾಬ್‌ನಲ್ಲಿ ಬಾದಲ್‌ ಪರಿವಾರ ಇವರೊಂದಿಗೆ ನಿಮ್ಮ ಪಕ್ಷ ಅಧಿಕಾರ ಸವಿದಿಲ್ಲವೇ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version