ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಮೃತಪಾಲ್ ಸಿಂಗ್ ಕುರಿತು ಚನ್ನಿ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್

P

Peepal Media • ದೇಶ

• 1 ನಿಮಿಷದ ಓದು

ಅಮೃತಪಾಲ್ ಸಿಂಗ್ ಕುರಿತು ಚನ್ನಿ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್
Congress President Mallikarjun Kharge with party leader Rahul Gandhi during the extended Congress Working Committee meeting, in New Delhi on June 8, 2024 | PTI

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯ ವೇಳೆ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಸ್ವತಂತ್ರ ಸಂಸದ ಅಮೃತಪಾಲ್ ಸಿಂಗ್ ಕುರಿತು ಕಾಂಗ್ರೆಸ್ ಸಂಸದ ಚರಣ್‌ಜಿತ್ ಸಿಂಗ್ ಚನ್ನಿ ಹೇಳಿಕೆಯಿಂದ ಪಕ್ಷವು ದೂರ ಉಳಿದಿದೆ.

ಚನ್ನಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಆದರೆ, ಚನ್ನಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿಲ್ಲ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಅಮೃತಪಾಲ್ ಕುರಿತು ಚನ್ನಿ ನೀಡಿದ ಹೇಳಿಕೆಗೆ ಹಲವು ಕಾಂಗ್ರೆಸ್ ಸಂಸದರು ಕೋಪಗೊಂಡಿದ್ದಾರೆ. ಹೀಗಾಗಿ ಚನ್ನಿ ಹೇಳಿಕೆಯಿಂದ ಪಕ್ಷ ಅಂತರ ಕಾಯ್ದುಕೊಂಡಿದೆ.

ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯ ವೇಳೆ, ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರು ಖಲಿಸ್ತಾನ್ ಪರ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಸ್ವತಂತ್ರ ಸಂಸದ ಅಮೃತಪಾಲ್ ಸಿಂಗ್ ಅವರನ್ನು ಬೆಂಬಲಿಸಿ ಸದನದಲ್ಲಿ ಹೇಳಿಕೆ ನೀಡಿದ್ದರು. ಇದರಲ್ಲಿ ಚರಣ್ಜಿತ್ ಸಿಂಗ್ ಚನ್ನಿ, ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದ ಅಮೃತಪಾಲ್ ಸಿಂಗ್ ಅವರನ್ನು ಉಲ್ಲೇಖಿಸಿ, ‘ನಾವು ಪ್ರತಿದಿನ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತೇವೆ, ಆದರೆ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯ ಬಗ್ಗೆ ಯಾರು ಮಾತನಾಡುತ್ತಾರೆ?” ಎಂದು ಕೇಳಿದ್ದರು.

ಈ ಸಂದರ್ಭದಲ್ಲಿ ಸಂಸದ ಚನ್ನಿ ಅಮೃತಪಾಲ್ ಸಿಂಗ್ ಅವರನ್ನು ಪ್ರಸ್ತಾಪಿಸಿದ್ದರು

ಪಂಜಾಬ್‌ನಲ್ಲಿ 20 ಲಕ್ಷ ಜನರಿಂದ ಸಂಸದರಾಗಿ ಆಯ್ಕೆಯಾದ ವ್ಯಕ್ತಿಯನ್ನು (ಅಮೃತಪಾಲ್ ಸಿಂಗ್) ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿಗೆ ಹಾಕಿರುವುದು ಕೂಡ ಒಂದು ರೀತಿಯ ತುರ್ತು ಪರಿಸ್ಥಿತಿ ಎಂದು ಕಾಂಗ್ರೆಸ್ ಸಂಸದ ಚರಂಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಇದರಿಂದಾಗಿ ಅವರು ತಮ್ಮ ಕ್ಷೇತ್ರದ ಜನರ ಅಭಿಪ್ರಾಯಗಳನ್ನು ಸದನದಲ್ಲಿ ಮಂಡಿಸಲು ಸಾಧ್ಯವಾಗುತ್ತಿಲ್ಲ. ಇದೂ ಕೂಡ ತುರ್ತು ಪರಿಸ್ಥಿತಿಯಲ್ಲವೆ ಎಂದು ಅವರು ಪ್ರಶ್ನಿಸಿದ್ದಾರೆ.

ರವನೀತ್ ಸಿಂಗ್ ಬಿಟ್ಟು ಮಾಜಿ ಸಿಎಂ ಚನ್ನಿ ವಾಗ್ವಾದ

ಗುರುವಾರ (ಜುಲೈ 25) ಲೋಕಸಭೆಯಲ್ಲಿ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯ ವೇಳೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಮತ್ತು ಕಾಂಗ್ರೆಸ್ ಸಂಸದ ಚರಣ್‌ಜಿತ್ ಸಿಂಗ್ ಚನ್ನಿ ನಡುವೆ ಸದನದಲ್ಲಿ ತೀವ್ರ ವಾಗ್ವಾದ ನಡೆಯಿತು. ನಂತರ ಗದ್ದಲ ಹೆಚ್ಚಾದ ಕಾರಣ ಸದನದ ಕಲಾಪವನ್ನು ಸುಮಾರು 35 ನಿಮಿಷಗಳ ಕಾಲ ಮುಂದೂಡಲಾಯಿತು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version