ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪತ್ರಿಕೆಗಳಿಗೆ ಬಿಜೆಪಿ ನೀಡಿದ ಸುಳ್ಳು ಜಾಹಿರಾತು ಪ್ರಕರಣ, ಬಿಜೆಪಿ ವಿರುದ್ಧ ಕೇಸು ದಾಖಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ: ಸಿಎಂ ಘೋಷಣೆ

PPeepal Media

Peepal Media ದೇಶ

• 2 ನಿಮಿಷದ ಓದು

ಪತ್ರಿಕೆಗಳಿಗೆ ಬಿಜೆಪಿ ನೀಡಿದ ಸುಳ್ಳು ಜಾಹಿರಾತು ಪ್ರಕರಣ, ಬಿಜೆಪಿ ವಿರುದ್ಧ ಕೇಸು ದಾಖಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ: ಸಿಎಂ ಘೋಷಣೆ

ಮಂಗಳ್ ವೇಡ (ಮಹಾರಾಷ್ಟ್ರ)ನ16: ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.

ಪಂಡರಪುರ ಮಂಗಲ್ ವೇಡ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ ಎಂದರು.

ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಪಂಡರಪುರ ಮಂಗಳ್ ವೇಡಾ.
ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂಥಾ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದರು.

ಜವಾಹರಲಾಲ್ ಅವರಿಂದ ಮನ‌ಮೋಹನ್ ಸಿಂಗ್ ಅವರ ವರೆಗೂ ಕಾಂಗ್ರೆಸ್ಸಿನ ಎಲ್ಲಾ ಪ್ರಧಾನಿಗಳು ಅಂಬೇಡ್ಕರ್ ಅವರ ಆಶಯಕ್ಕೆ ತಕ್ಕಂತೆ ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ ಬಹುತ್ವದ ಚರಿತ್ರೆ ಹೊಂದಿದ್ದಾರೆ ಎಂದರು.‌

ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಮವನ್ನೂ ರೂಪಿಸಲಿಲ್ಲ. ನಿಮ್ಮ ಮನೆ ಬಾಗಿಲಿಗೆ ತರಲಿಲ್ಲ. ಬದಲಿಗೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಕಾಳು, ಬೇಳೆ ಎಲ್ಲದರ ಬೆಲೆ ಏರಿಸಿದರು.

ಅಚ್ಛೇ ದಿನ್ ಆಯೆಗಾ ಎಂದರು. ಕಹಾಂ ಹೈ ಅಚ್ಛೆ ದಿನ್ ? ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು. ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದರು.

ಭಾರತದ ರೈತರು ಸಾಲ ಮನ್ನಾ ಮಾಡಿ ಎಂದು ಮೋದಿಯವರಿಗೆ ಕೇಳಿದರೆ, ಈ ಮೋದಿ ಅವರು ರೈತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. ಬದಲಿಗೆ ಕಾರ್ಪೋರೇಟ್ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ನಾನು ಮೊದಲ ಬಾರಿ ಕರ್ನಾಟಕದ ಮುಖ್ಯಮಂತ್ರಿ ಆದಾಗ ರೈತರ ಸಾಲ ಮನ್ನಾ ಮಾಡಿದೆ. ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್ ಹಾಕುವ ಯಂತ್ರ ಇಲ್ಲ ಅಂದರು. ಹೌದು ಬಿಜೆಪಿಯವರ ಮನೆಯಲ್ಲಿ ಇರುವುದು ನೋಟು ಎಣಿಸುವ ಯಂತ್ರ ಮಾತ್ರ ಎಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರದಲ್ಲಿ ಮೋದಿಗೆ ಮತ್ತೊಮ್ಮೆ ಸವಾಲೆಸೆದ ಸಿದ್ದರಾಮಯ್ಯ

ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರೋದಿಲ್ಲ.

ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸವಾಲು ಹಾಕಿದರು.

ನಿಮಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಎಂದು ಮೋದಿಯವರಿಗೆ ಕರೆ ನೀಡಿದರು.

ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಶಾಸಕರನ್ನು ಖರೀಧಿಸಿದರಲ್ಲಾ ಅದಕ್ಕೆಲ್ಲಾ ಅಷ್ಟು ಕೋಟಿ ಕೋಟಿ ಹಣ ಎಲ್ಲಿಂದ ಬಂತು ನಿಮಗೆ? ಮಹಾರಾಷ್ಟ್ರ ಜನತೆಗೆ ಉತ್ತರಿಸಿ ಎಂದು ಮತ್ತೊಂದು ಸವಾಲು ಎಸೆದರು.

ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದು? ಭ್ರಷ್ಟಾಚಾರದ್ದು ಅಲ್ವಾ? ಆ ಹಣ ಎಲ್ಲಿಂದ ಬಂತು ಎಂದು ಮಹಾರಾಷ್ಟ್ರ ಜನರಿಗೆ ಹೇಳಬಲ್ಲಿರಾ ಎಂದು ಪ್ರಶ್ನಿಸಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು