ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ಗಲಭೆ: ಅಂಗಡಿಯನ್ನು ಲೂಟಿ ಮಾಡಿ ಬೆಂಕಿ ಹಚ್ಚಿದ ಏಳು ಆರೋಪಿಗಳು ಖುಲಾಸೆ

CCharan Aivarnad

Charan Aivarnad • ದೇಶ

• 1 ನಿಮಿಷದ ಓದು

ದೆಹಲಿ ಗಲಭೆ: ಅಂಗಡಿಯನ್ನು ಲೂಟಿ ಮಾಡಿ ಬೆಂಕಿ ಹಚ್ಚಿದ ಏಳು ಆರೋಪಿಗಳು ಖುಲಾಸೆ

ದೆಹಲಿ: 2020 ರ ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆಗಳಲ್ಲಿ ಅಂಗಡಿಯನ್ನು ಲೂಟಿ ಮಾಡಿ ಧ್ವಂಸಗೊಳಿಸಿದ ಏಳು ಜನ ಆರೋಪಿಗಳನ್ನು ದೆಹಲಿ ನ್ಯಾಯಾಲಯವು ಸೋಮವಾರ ಖುಲಾಸೆಗೊಳಿಸಿದೆ. ಬಾಬು, ದಿನೇಶ್ ಯಾದವ್, ಟಿಂಕು, ಸಂದೀಪ್, ಗೋಲು ಕಶ್ಯಪ್, ವಿಕಾಸ್ ಕಶ್ಯಪ್ ಮತ್ತು ಅಶೋಕ್ –  ಖುಲಾಸೆಗೊಂಡವರು.

2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ಪರ ಹಾಗೂ ವಿರೋಧಿಗಳ ನಡುವೆ ನಡೆದ ಸಂಘರ್ಷದಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು. ಹಿಂಸಾಚಾರದಲ್ಲಿ ಸತ್ತವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು.

2020 ರ ಮಾರ್ಚ್‌ನಲ್ಲಿ ಗೋಕಲ್ಪುರಿ ಪೊಲೀಸ್ ಠಾಣೆಯಲ್ಲಿ ಸಲ್ಮಾನ್ ಮಲಿಕ್ ಎಂಬವರು ನೀಡಿದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಗಲಭೆಯ ಸಂದರ್ಭದಲ್ಲಿ ಗುಂಪೊಂದು ಸಲ್ಮಾನ್ ಮಲಿಕ್ ಅವರ ಅಂಗಡಿಯನ್ನು ಲೂಟಿ ಮಾಡಿ ಬೆಂಕಿ ಹಚ್ಚಿತ್ತು, ಇದರಿಂದಾಗಿ  5 ಲಕ್ಷ ರುಪಾಯಿ ವರೆಗೆ ನಷ್ಟವಾಗಿತ್ತು.

ಸೋಮವಾರ ನಡೆದ ವಿಚಾರಣೆಯಲಲ್ಲಿ ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ದೂರುದಾರರ ಅಂಗಡಿಗೆ ಗಲಭೆಕೋರರ ಗುಂಪು ಬೆಂಕಿ ಹಚ್ಚುವ ಮೊಬೈಲ್ ವೀಡಿಯೊವೊಂದನ್ನು ಪರಿಶೀಲಿಸಿದರು.

ಆದರೆ, ಫೋರೆನ್ಸಿಕ್ ವರದಿಯ ಆಧಾರದ ಮೇಲೆ ನ್ಯಾಯಾಲಯವು ಇದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ. “ಅಂಗಡಿಗೆ ಬೆಂಕಿ ಇಟ್ಟ ದಿನಾಂಕವನ್ನು ಒಬ್ಬನೇ ಸಾಕ್ಷಿ ಬೇರೆ ಬೇರೆ ರೀತಿಯಲ್ಲಿ ನೀಡಿದ್ದಾನೆ. ಫೆಬ್ರವರಿ 24, 2020 ರಂದು ಅಂಗಡಿಗೆ ಬೆಂಕಿ ಹಚ್ಚಲಾಗಿದೆ ಎಂದು ತನಿಖಾಧಿಕಾರಿಗೆ ತಿಳಿಸಿದ ಸಾಕ್ಷಿ, ನ್ಯಾಯಾಲಯದಲ್ಲಿ ಫೆಬ್ರವರಿ 25 ಎಂದಿದ್ದಾರೆ,” ಎಂದು ನ್ಯಾಯಾಧೀಶ ಪ್ರಮಾಚಲ ಹೇಳಿದ್ದಾರೆ.

“ಘಟನೆಯ ಸಮಯಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಮತ್ತು ದಾಖಲೆಯ ಮೇಲೆ ತಂದ ಸಾಕ್ಷ್ಯದಲ್ಲಿ ತಪ್ಪುಗಳಾಗಿವೆ.  ಪ್ರಾಸಿಕ್ಯೂಷನ್‌ನ ಇಂತಹ ವಿರೋಧಾಭಾಸಗಳಿಂದಾಗಿ ಆರೋಪಿಗಳ ಪರವಾಗಿ ನಾವು ಹೋಗಬೇಕು,” ಎಂದು ನ್ಯಾಯಾದೀಶರು ತಿಳಿಸಿದ್ದಾರೆ.

ಪೊಲೀಸರಿಗೆ ಛೀಮಾರಿ ಹಾಕಿದ ಕೋರ್ಟ್

ಶುಕ್ರವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಗಲಭೆ ಮತ್ತು ಕಾನೂನುಬಾಹಿರವಾಗಿ ಸೇರುವ ಸಭೆಗೆ ಸಂಬಂಧಿಸಿದ ಎರಡು ಗಲಭೆ ಸಂಬಂಧಿತ ಪ್ರಕರಣಗಳಲ್ಲಿ 39 ದೂರುಗಳನ್ನು ಒಟ್ಟಿಗೆ ಸೇರಿಸಿದ್ದಕ್ಕಾಗಿ ನ್ಯಾಯಾಧೀಶರಾದ ಪ್ರಮಾಚಲ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದ್ದನ್ನು ಎಂದು ಲೈವ್ ಲಾ ವರದಿ ಮಾಡಿದೆ.

ಈ ಘಟನೆಗಳ ದಿನಾಂಕ ಮತ್ತು ಸಮಯವನ್ನು ದೃಢೀಕರಿಸಲು ದಾಖಲೆಗಳಲ್ಲಿ ಯಾವುದೇ ಪುರಾವೆಗಳಿಲ್ಲದಿರುವುದನ್ನು ಗಮನಿಸಿದ ನ್ಯಾಯಾಲಯವು ದೂರುಗಳ ಕುರಿತು ಹೆಚ್ಚಿನ ತನಿಖೆಗಳನ್ನು ಕೈಗೊಳ್ಳಲು ಪ್ರತ್ಯೇಕವಾಗಿ ಆದೇಶಿಸಿದೆ.

ಅಫ್ತಾಬ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ 2020 ರಲ್ಲಿ ದಯಾಲ್‌ಪುರ ಪೊಲೀಸರು ಜಾವೇದ್, ಗುಲ್ಫಾಮ್ ಮತ್ತು ಪಪ್ಪು ಅಲಿಯಾಸ್ ಮುಸ್ತಕೀಮ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಗಲಭೆಕೋರರ ಗುಂಪೊಂದು ಅವರ ಅಂಗಡಿಯನ್ನು ಲೂಟಿ ಮಾಡಿ ಬೆಂಕಿ ಹಚ್ಚಿದೆ ಎಂದು ಆರೋಪಿಸಿದ್ದರು.

ಇನ್ನೊಂದು ಎಫ್‌ಐಆರ್‌ ದಯಾಲ್‌ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಜಮೀರ್ ಅಹ್ಮದ್ ಅವರು ತಮ್ಮ ಅಂಗಡಿಯನ್ನು ಗುಂಪೊಂದು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

CCharan Aivarnad

Charan Aivarnad

Peepal Media · ದೇಶ ವಿಭಾಗ

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರು. ಜಾನಪದ, ಇತಿಹಾಸ, ರಾಜಕೀಯ, ಸಾಂಸ್ಕೃತಿಕ ಅಧ್ಯಯನ, ಸಬಾಲ್ಟರ್ನ್‌ ಸ್ಟಡೀಸ್, ಭಾಷೆ, ಸಾಂಸ್ಕೃತಿಕ ರಾಜಕಾರಣ ಇವರ‌ ಆಸಕ್ತಿಯ ಕ್ಷೇತ್ರಗಳು.

ಸಂಬಂಧಿತ ಸುದ್ದಿಗಳು