ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಬೀರ, ವೆಂಟಿಲೇಟರ್‌ ಆಳವಡಿಕೆ

PPeepal Media

Peepal Media • ದೇಶ

• 1 ನಿಮಿಷದ ಓದು

ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಬೀರ, ವೆಂಟಿಲೇಟರ್‌ ಆಳವಡಿಕೆ

ಸಿಪಿಎಂ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸೀತಾರಾಂ ಯೆಚೂರಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರಿಗೆ ವೆಂಟಿಲೇಟರ್‌ ಆಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಗುರುವಾರ ರಾತ್ರಿಯಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸೀತಾರಾಮ್ ಯೆಚೂರಿ ಅವರನ್ನು ಇತ್ತೀಚೆಗೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ನ್ಯುಮೋನಿಯಾದಂತಹ ಸೋಂಕು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಿದೆ. ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆಯಿಂದ ಕಳೆದ ತಿಂಗಳು 19ರಂದು ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಅಂದಿನಿಂದ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂದಿನಿಂದ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುರುವಾರ ರಾತ್ರಿ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಉಸಿರಾಡಲು ಸಾಧ್ಯವಾಗದ ಕಾರಣ ಅವರನ್ನು ಐಸಿಯುಗೆ ಸೇರಿಸಲಾಯಿತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶ ತಜ್ಞರು ಸೇರಿದಂತೆ ವಿಶೇಷ ವೈದ್ಯರ ತಂಡ ಅವರಿಗೆ ಅತ್ಯಾಧುನಿಕ ಔಷಧ ನೀಡುತ್ತಿದೆ.

ಕಳೆದ ತಿಂಗಳು 31ರಂದು ಸಿಪಿಎಂ ಅವರ ಆರೋಗ್ಯ ಸ್ಥಿತಿ ಕುರಿತು ಹೇಳಿಕೆ ನೀಡಿತ್ತು. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವುದಾಗಿ ಘೋಷಿಸಲಾಗಿತ್ತು. ಆಗಸ್ಟ್ 19ರಂದು ಆಸ್ಪತ್ರೆಗೆ ದಾಖಲಾಗಿರುವುದು ದೃಢಪಟ್ಟಿತ್ತು. ವಿಶೇಷ ವೈದ್ಯರ ಮೇಲ್ವಿಚಾರಣೆಯಲ್ಲಿ ಮುಂದುವರಿದಿದೆ ಎಂದು ಅಂದು ಪಕ್ಷ ಹೇಳಿತ್ತು.

ಸೀತಾರಾಮ್ ಯೆಚೂರಿ ಅವರು 1952ರಲ್ಲಿ ಚೆನ್ನೈನಲ್ಲಿ ಜನಿಸಿದರು. ಓದಿದ್ದು ಹೈದರಾಬಾದ್‌ನಲ್ಲಿ. 1969ರ ತೆಲಂಗಾಣ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಉನ್ನತ ವ್ಯಾಸಂಗಕ್ಕಾಗಿ ದೆಹಲಿಗೆ ತೆರಳಿದ ಅವರು ಎಸ್‌ಎಫ್‌ಐಗೆ ಸೇರ್ಪಡೆಗೊಂಡರು. 1975ರಲ್ಲಿ ಸಿಪಿಎಂನ ಪ್ರಾಥಮಿಕ ಸದಸ್ಯತ್ವವನ್ನು ಪಡೆದರು. ಕ್ರಮೇಣ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಏರಿದರು. ಎಡಪಕ್ಷಗಳಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.

ವಿಷಯಗಳು: #karnataka #peepal #peepalmedia #politics
PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು