ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗ್ಯಾರಂಟಿಗಳ ಬೆನ್ನೇರಿ ಹೊರಟ ತೆಲಂಗಾಣ ಕಾಂಗ್ರೆಸ್‌, ಸಿಗುವುದೇ ಅಧಿಕಾರದ ಹಕ್ಕಿ?

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಗ್ಯಾರಂಟಿಗಳ ಬೆನ್ನೇರಿ ಹೊರಟ ತೆಲಂಗಾಣ ಕಾಂಗ್ರೆಸ್‌, ಸಿಗುವುದೇ ಅಧಿಕಾರದ ಹಕ್ಕಿ?

ಹೈದರಬಾದ್:‌ ಇಂದಿನಿಂದ ಆರಂಭಗೊಂಡಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿರುವ ಬೆನ್ನಲ್ಲೇ ತೆಲಂಗಾಣ ವಿಧಾಸಭಾ ಚುನಾವಣೆಗೂ ಇಲ್ಲಿ ತಂತ್ರಗಳನ್ನು ಹೆಣೆಯಲಾಗುತ್ತದೆ ಎನ್ನಲಾಗುತ್ತಿದೆ.

ಕರ್ನಾಟಕದಲ್ಲಿ ಭರ್ಜರಿ ಗೆಲುವನ್ನು ಪಡೆದ ನಂತರ ಕಾಂಗ್ರೆಸ್‌ ಮಧ್ಯಪ್ರದೇಶದಲ್ಲೂ ಗ್ಯಾರೆಂಟಿ ಅಸ್ತ್ರವನ್ನೇ ಪ್ರಯೋಗಿಸಲು ನಿರ್ಧರಿಸಿದೆ. ಇದರಿಂದ ಕಂಗಾಲಾದ ಬಿಜೆಪಿ ಈಗಾಗಲೇ ಅಲ್ಲಿ ಮಹಿಳೆಯರಿಗೆ ತಿಂಗಳಿಗೆ ಒಂದೂವರೆ ಸಾವಿರ ರೂಪಾಯಿಗಳನ್ನು ನೀಡುವ ಯೋಜನೆಯೊಂದನ್ನು ಜಾರಿಗೆ ತಂದಿದೆ.

ಇತ್ತ ಅಹಿಂದ ಮತಗಳೇ ಹೆಚ್ಚಿರುವ ತೆಲಂಗಾಣದಲ್ಲಿಯೂ ಗ್ಯಾರಂಟಿ ಯೊಜನೆಯನ್ನು ಘೋಷಿಸುವುದರ ಜೊತೆಗೆ, ಗ್ಯಾರಂಟಿ ಹಾಗೂ ಅಹಿಂದ ಎರಡಕ್ಕೂ ರೂವಾರಿಯಾಗಿರುವ ಸಿದ್ಧರಾಮಯ್ಯ ತೆಲಂಗಾಣದಲ್ಲಿ ಸ್ಟಾರ್‌ ಕ್ಯಾಂಪೇನರ್‌ ಆಗುವ ಸಾಧ್ಯತೆಯೂ ಇದೆ.

ಬಿಜೆಪಿ ಮತ್ತು ಬಿಆರ್‌ಎಸ್‌ ನಡುವಿನ ತಿಕ್ಕಾಟದ ಲಾಭವನ್ನು ತಾನು ಪಡೆಯುವ ಕನಸಿನಲ್ಲಿರುವ ಕಾಂಗ್ರೆಸ್‌ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಮುಂತಾದ ಅಸ್ತ್ರಗಳೊಡನೆ ಅಲ್ಲಿ ಕಣಕ್ಕಿಳಿದಿದೆ.

119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಇದೇ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗ ಸಿದ್ಧತೆಯನ್ನು ಕೂಡ ನಡೆಸುತ್ತಿದೆ. ಇಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದ್ದ ಪಕ್ಷವು ಅಲ್ಲಿ ಆರು ಗ್ಯಾರಂಟಿಗಳನ್ನು ಘೋಷಿಸಲಿದೆ ಎನ್ನಲಾಗುತ್ತಿದೆ.

ತೆಲಂಗಾಣ  ಕಾಂಗ್ರೆಸ್‌ನ ಹಿರಿಯ ಕಾರ್ಯಕಾರಿ ಸಮಿತಿ ಸದಸ್ಯರೋರ್ವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಚುನಾವಣೆಗೆ ಮುನ್ನ ರಾಜ್ಯದಲ್ಲಿ ಗ್ಯಾರೆಂಟಿಗಳನ್ನು ಘೋಷಿಸಲಾಗುವುದು. ಸ್ಥಳೀಯ ಜನರ ಪ್ರಾಶಸ್ತ್ಯಕ್ಕೆ ಅನುಸಾರವಾಗಿ ಗ್ಯಾರೆಂಟಿಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ ಘೋಷಿಸಲಿರುವ ಆರು ಗ್ಯಾರೆಂಟಿಗಳಲ್ಲಿ ಬಿಪಿಎಲ್ ವರ್ಗದ ಮಹಿಳೆಯರಿಗೆ 3,000ರೂ.  500ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು 5ಲಕ್ಷ ರೂ. ಮನೆ ನಿರ್ಮಾಣಕ್ಕೆ ನೆರವು ಸೇರಿದೆ ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಮೂಲಗಳು ತಿಳಿಸಿದೆ.

ನಾಳೆ ಹೈದರಾಬಾದಿನಲ್ಲಿ ಬೃಹತ್‌ ಸಭೆ ನಡೆಯಲಿದ್ದು, ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಸಿದ್ಧರಾಮಯ್ಯ ಸೇರಿದಂತೆ ಹಲವರು ಭಾಗಿಯಾಗಲಿದ್ದು, ಈ ಸಭೆ ಮತ್ತು ಯಾತ್ರೆಗೆ ವಿಜಯಭೇರಿ ಎಂದು ಹೆಸರಿಡಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು