ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಲ್ಫ್ ರಾಷ್ಟ್ರಗಳಲ್ಲಿ ಪ್ರತಿದಿನ 20ಕ್ಕೂ ಹೆಚ್ಚು ಭಾರತೀಯ ವಲಸೆ ಕಾರ್ಮಿಕರ ಸಾವು: ವಿದೇಶಾಂಗ ಸಚಿವಾಲಯ

PPeepal Media

Peepal Media ದೇಶ

• 1 ನಿಮಿಷದ ಓದು

ಗಲ್ಫ್ ರಾಷ್ಟ್ರಗಳಲ್ಲಿ ಪ್ರತಿದಿನ 20ಕ್ಕೂ ಹೆಚ್ಚು ಭಾರತೀಯ ವಲಸೆ ಕಾರ್ಮಿಕರ ಸಾವು: ವಿದೇಶಾಂಗ ಸಚಿವಾಲಯ

ದೆಹಲಿ: ಉತ್ತಮ ಬದುಕು ಅರಸಿ ಗಲ್ಫ್ ರಾಷ್ಟ್ರಗಳಿಗೆ ವಲಸೆ ಹೋಗುವ ಭಾರತೀಯ ಕಾರ್ಮಿಕರ ಜೀವನ ದುಸ್ತರವಾಗುತ್ತಿದ್ದು, ಪ್ರತಿದಿನ ಸರಾಸರಿ 20ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ದೇಶದಲ್ಲಿ ಉದ್ಯೋಗಾವಕಾಶಗಳ ಕೊರತೆ ಮತ್ತು ಕಡಿಮೆ ವೇತನದಿಂದಾಗಿ ಗಲ್ಫ್ ದೇಶಗಳಿಗೆ ತೆರಳುವ ಲಕ್ಷಾಂತರ ಮಂದಿಯ ಜೀವನ ಅರ್ಧಕ್ಕೇ ಕೊನೆಯಾಗುತ್ತಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ವಿದೇಶಗಳಲ್ಲಿ ಮರಣ ಹೊಂದಿದ ಭಾರತೀಯ ಕಾರ್ಮಿಕರ ಒಟ್ಟು ಸಂಖ್ಯೆ 37,740 ಎಂದು ದಾಖಲಾಗಿದೆ. ಜನವರಿ 29 ರಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

2021 ರಿಂದ 2025 ರ ನಡುವಿನ ಅವಧಿಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ಸಚಿವಾಲಯ ತಿಳಿಸಿದೆ. ಆದರೆ, ಈ ಮರಣಗಳಿಗೆ ನಿಖರವಾದ ಕಾರಣಗಳನ್ನು ಮಾತ್ರ ವರದಿಯಲ್ಲಿ ಉಲ್ಲೇಖಿಸಿಲ್ಲ. ಇಂದಿಗೂ ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಿಂದ ಬೃಹತ್ ಸಂಖ್ಯೆಯಲ್ಲಿ ಜನರು ಉದ್ಯೋಗಕ್ಕಾಗಿ ಗಲ್ಫ್ ರಾಷ್ಟ್ರಗಳತ್ತ ಮುಖ ಮಾಡುತ್ತಿದ್ದಾರೆ. ವರ್ಷಗಟ್ಟಲೆ ಅಲ್ಲಿಯೇ ಕೆಲಸ ಮಾಡುತ್ತಿದ್ದರೂ, ಅವರ ಪ್ರಾಣಕ್ಕೆ ಮಾತ್ರ ಯಾವುದೇ ಭರವಸೆ ಇಲ್ಲದಿರುವುದು ಕಹಿ ಸತ್ಯವಾಗಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು