ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೌಕರರಿಗೆ ತೀವ್ರ ನಿರಾಶೆ: ಇಪಿಎಫ್ ಬಡ್ಡಿ ದರ ಯಥಾಸ್ಥಿತಿ

PPeepal Media

Peepal Media ದೇಶ

• 1 ನಿಮಿಷದ ಓದು

ನೌಕರರಿಗೆ ತೀವ್ರ ನಿರಾಶೆ: ಇಪಿಎಫ್ ಬಡ್ಡಿ ದರ ಯಥಾಸ್ಥಿತಿ

ದೆಹಲಿ: ದೇಶಾದ್ಯಂತ ಇರುವ ಸುಮಾರು 7 ಕೋಟಿ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಚಂದಾದಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ.

ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ತಮ್ಮ ನಿವೃತ್ತಿ ಉಳಿತಾಯದ ಮೇಲಿನ ಬಡ್ಡಿ ದರ ಹೆಚ್ಚಾಗಬಹುದು ಎಂದು ಕಳೆದ ಮೂರು ವರ್ಷಗಳಿಂದ ಆಶಿಸುತ್ತಿದ್ದ ಉದ್ಯೋಗಿಗಳಿಗೆ ಮತ್ತೊಮ್ಮೆ ನಿರಾಶೆಯಾಗಿದೆ. ಸೋಮವಾರ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರ ನೇತೃತ್ವದಲ್ಲಿ ನಡೆದ 239ನೇ ಕೇಂದ್ರೀಯ ಟ್ರಸ್ಟಿಗಳ ಮಂಡಳಿ (ಸಿಬಿಟಿ) ಸಭೆಯಲ್ಲಿ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ.

ಪ್ರಸಕ್ತ ಹಣಕಾಸು ವರ್ಷ 2025-26ಕ್ಕೆ ಅನ್ವಯವಾಗುವಂತೆ ಕಳೆದ ವರ್ಷದ ಶೇ. 8.25ರಷ್ಟು ಬಡ್ಡಿ ದರವನ್ನೇ ಘೋಷಿಸಲಾಗಿದೆ. 2022-23ರಲ್ಲಿ ಬಡ್ಡಿ ದರವು ಶೇ. 8.15ರಷ್ಟಿದ್ದು, 2023-24ರಲ್ಲಿ ಅದನ್ನು ಶೇ. 8.25ಕ್ಕೆ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿತ್ತು. ಅಂದಿನಿಂದ ಸತತ ಮೂರನೇ ವರ್ಷವೂ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಗಮನಾರ್ಹ. ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು 2013-14ರಲ್ಲಿ ಶೇ. 8.75ರಷ್ಟಿದ್ದ ಇಪಿಎಫ್ ದರವನ್ನು ಹಂತಹಂತವಾಗಿ ಕಡಿತಗೊಳಿಸುತ್ತಾ ಬಂದು, 2021-22ರಲ್ಲಿ ಅತ್ಯಂತ ಕನಿಷ್ಠ ಮಟ್ಟವಾದ ಶೇ. 8.10ಕ್ಕೆ ಇಳಿಸಲಾಗಿತ್ತು. ಆನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಲ್ಪ ಏರಿಕೆ ಮಾಡಲಾಗಿತ್ತು.

ಮತ್ತೊಂದೆಡೆ, ಸ್ಥಗಿತಗೊಂಡಿರುವ ಖಾತೆಗಳಲ್ಲಿರುವ ಕ್ಲೈಮ್ ಮಾಡದ ಠೇವಣಿಗಳಿಗೆ (Unclaimed Deposits) ಸಂಬಂಧಿಸಿದಂತೆ ಸಿಬಿಟಿ ಮಹತ್ವದ ನಿರ್ಧಾರ ಕೈಗೊಂಡಿದೆ. ಮೊದಲ ಹಂತದಲ್ಲಿ 1,000 ರೂಪಾಯಿಗಿಂತ ಕಡಿಮೆ ಹಣವಿರುವ 1.33 ಲಕ್ಷ ಖಾತೆಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿರುವ ಒಟ್ಟು 5.68 ಕೋಟಿ ರೂಪಾಯಿ ಮೊತ್ತವನ್ನು ಸೆಟಲ್ ಮಾಡಲು ಮಂಡಳಿ ನಿರ್ಧರಿಸಿದೆ. ಪ್ರಮುಖವಾಗಿ ಬಡ್ಡಿ ದರ ಹೆಚ್ಚಳವಾಗದ ಬಗ್ಗೆ ಕಾರ್ಮಿಕ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸುತ್ತಿವೆ.

ಮಾರುಕಟ್ಟೆಯ ಅನಿಶ್ಚಿತತೆಯನ್ನು ನೆಪವಾಗಿಟ್ಟುಕೊಂಡು ಸರ್ಕಾರವು ಕೋಟ್ಯಂತರ ಮಧ್ಯಮ ವರ್ಗದ ಉದ್ಯೋಗಿಗಳ ಆಶಯಗಳ ಮೇಲೆ ತಣ್ಣೀರು ಸುರಿಸಿದೆ ಎಂದು ಅವರು ಟೀಕಿಸುತ್ತಿದ್ದಾರೆ. ಈ ಪ್ರಸ್ತಾವನೆಯನ್ನು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕಳುಹಿಸಿದ ನಂತರ, ಸರ್ಕಾರವು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ ತಕ್ಷಣ ಚಂದಾದಾರರ ಖಾತೆಗಳಿಗೆ ಬಡ್ಡಿ ಜಮೆಯಾಗಲಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು