ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಸೋಲಿಸಿ, ಸಂವಿಧಾನ ಉಳಿಸಿ-ಸಿಪಿಐ ಕರೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಬಿಜೆಪಿ ಸೋಲಿಸಿ, ಸಂವಿಧಾನ ಉಳಿಸಿ-ಸಿಪಿಐ ಕರೆ

ಲೋಕಸಭಾ ಚುನಾವಣೆ ನಮ್ಮ ಮುಂದಿದೆ. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದನ್ನು ಉಳಿಸಿಕೊಳ್ಳಲು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇ ಬೇಕಿದೆ.

ಹೋದಲ್ಲೆಲ್ಲಾ ಸುಳ್ಳೇ ಹೇಳುವ, ಆಶ್ವಾಸನೆಗಳನ್ನು ಚುನಾವಣಾ ಸ್ಟಂಟ್ ಎಂದು ಪರಿಗಣಿಸಿ ಅವನ್ನು ಚುನಾವಣೆ ನಂತರ ಗಾಳಿಗೆ ತೂರುವ, ‘ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ.’ ಎಂದು ಹೇಳುತ್ತಾ ಚುನಾವಣಾ ಬಾಂಡ್ ಮೂಲಕ ಸಾವಿರಾರು ಕೋಟಿ ಬೃಷ್ಟಾಚಾರ ನಡೆಸಿದ, ಚುನಾವಣೆ ಗೆಲ್ಲಲು ದೇಶಕಾಯುತ್ತಿರುವ ಸೈನಿಕರನ್ನೆ ಬಲಿಕೊಡುವ, ಎಲ್ಲರ ವಿಕಾಸ ಎಂದು ಹೇಳಿ ಬರೀ ಅದಾನಿ ಅಂಬಾನಿಗಳ ವಿಕಾಸ ಮಾಡುತ್ತಿರುವ, ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯುತ್ತಿರುವ, ಯುವಜನರಿಗೆ ಉದ್ಯೋಗ ಒದಗಿಸುವಲ್ಲಿ ವಿಫಲವಾದ, ಮಹಿಳೆಯರ ಮೇಲಿನ ಅತ್ಯಾಚಾರಗಳು ಹೆಚ್ಚುತಿದ್ದರೂ ಅದರ ಬಗ್ಗೆ ಚಕಾರವೆತ್ತದೆ ಅತ್ಯಾಚಾರಿಗಳನ್ನು ರಕ್ಷಿಸುವ, ಕಾರ್ಮಿಕ ಕಾನೂನುಗಳನ್ನು ಬದಲಿಸಿ ಕಾರ್ಮಿಕರನ್ನು ಬೀದಿಗೆ ಎಸೆಯುವ, ರೈತರ ಬೇಡಿಕೆಗಳ ಬಗ್ಗೆ ತಿರಸ್ಕಾರ ತೋರುತ್ತಿರುವ, ಅಲ್ಪಸಂಖ್ಯಾತರನ್ನು ಎರಡನೆ ದರ್ಜೆ ನಾಗರಿಕರು ಎಂದು ಪರಿಗಣಿಸುವ, ಬೆಲೆಯೇರಿಕೆಯನ್ನು ತಡೆಗಟ್ಟದ ಈ ಬಿಜೆಪಿ ಸರಕಾರ ಮುಂದುವರಿಯಲು ಯಾವುದೇ ಉಚಿತ ಕಾರಣಗಳಿಲ್ಲ ಎಂದು ಪಕ್ಷ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಆದುದರಿಂದ ದೇಶ ಮತ್ತು ಸಂವಿಧಾನ ಉಳಿಸಲು, ಈ ಚುನಾವಣೆಗಳಲ್ಲಿ ‘ಇಂಡಿಯಾ’ ಒಕ್ಕೂಟದ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪದ್ಮರಾಜ ಆರ್ ಪೂಜಾರಿ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ ಇವರುಗಳಿಗೆ ತಮ್ಮ ಮತಗಳನ್ನು ಚಲಾಯಿಸಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕೆಂದು, ಭಾರತ ಕಮ್ಯುನಿಷ್ಟ್ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ಎಲ್ಲಾ ಮತದಾರರನ್ನು ವಿನಂತಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು