ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟೆಲಿಗ್ರಾಮ್ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ನಿರ್ಧಾರ ಸರಿಯಾಗಿದೆ: ಕೇಂದ್ರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

PPeepal Media

Peepal Media ದೇಶ

• 1 ನಿಮಿಷದ ಓದು

ಟೆಲಿಗ್ರಾಮ್ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ನಿರ್ಧಾರ ಸರಿಯಾಗಿದೆ: ಕೇಂದ್ರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

ಹೊಸ ದೆಹಲಿ: ನೀಟ್ (NEET-UG) ಮರುಪರೀಕ್ಷೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಟೆಲಿಗ್ರಾಮ್’ (Telegram) ಮೆಸೇಜಿಂಗ್ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಸಂಪೂರ್ಣವಾಗಿ ಸಮರ್ಥಿಸಿದೆ. ಅತ್ಯಂತ ತುರ್ತು ಹಾಗೂ ಅನಿವಾರ್ಯ ಪರಿಸ್ಥಿತಿಗಳನ್ನು ಪರಿಗಣಿಸಿ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಟೆಲಿಗ್ರಾಮ್ ಸಂಸ್ಥೆಯು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಇಂದು ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಕೇಂದ್ರ ಸರ್ಕಾರವು ಟೆಲಿಗ್ರಾಮ್ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಈ ನಿಷೇಧಕ್ಕೆ ಸರ್ಕಾರ ನೀಡಿರುವ ತಾಂತ್ರಿಕ ವಿವರಣೆಗಳು ಮತ್ತು ಕಾರಣಗಳು ಅತ್ಯಂತ ತೃಪ್ತಿಕರವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಕೈಗೊಂಡಿರುವ ಈ ರಕ್ಷಣಾತ್ಮಕ ಕ್ರಮವು ಯಾವುದೇ ರೀತಿಯಲ್ಲಿ ನಿಯಮಬಾಹಿರ ಅಥವಾ ಅಸಮತೋಲನದಿಂದ ಕೂಡಿದೆ ಎಂದು ಭಾವಿಸಲು ಸಾಧ್ಯವಿಲ್ಲ. ಪ್ರಸ್ತುತ ದೇಶದಲ್ಲಿ ತಲೆದೂರಿರುವ ತುರ್ತು ಸಂದರ್ಭಗಳಲ್ಲಿ ಈ ಆ್ಯಪ್ ಮೇಲಿನ ತಾತ್ಕಾಲಿಕ ನಿರ್ಬಂಧ ಅತ್ಯಗತ್ಯವಾಗಿದ್ದು, ಕೇಂದ್ರ ಸರ್ಕಾರವು ಯಾವುದೇ ಆತುರ ಅಥವಾ ಅನಾಲೋಚಿತವಾಗಿ ಈ ಆದೇಶವನ್ನು ನೀಡಿಲ್ಲ, ಬದಲಿಗೆ ಐಟಿ ಕಾಯ್ದೆಯ ಚೌಕಟ್ಟಿನೊಳಗೇ ಸೂಕ್ತ ಕಾರಣಗಳೊಂದಿಗೆ ಈ ಕ್ರಮ ವಹಿಸಿದೆ ಎಂದು ಜಸ್ಟಿಸ್ ತೇಜಸ್ ಕರಿಯಾ ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೆಲವು ವಂಚಕ ಮುಠ್ಠುಗಳು ದೇಶದ ಪ್ರತಿಷ್ಠಿತ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿ ಭಾರಿ ವಂಚನೆಗೆ ಮುಂದಾಗುತ್ತಿದ್ದು, ಇಂತಹ ರಹಸ್ಯ ದಾಖಲೆಗಳನ್ನು ಅತ್ಯಂತ ವೇಗವಾಗಿ ಹರಡಲು ಟೆಲಿಗ್ರಾಮ್ ಆ್ಯಪ್ ಅನ್ನು ವ್ಯಾಪಕವಾಗಿ ಬಳಸಿಕೊಳ್ಳುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಯನ್ನು ಅತ್ಯಂತ ಬಿಗಿಯಾಗಿ ನಡೆಸುವ ಮುನ್ನೆಚ್ಚರಿಕೆ ದೃಷ್ಟಿಯಿಂದ ಜೂನ್ 22 ರವರೆಗೆ ಟೆಲಿಗ್ರಾಮ್ ಅನ್ನು ಬ್ಲಾಕ್ ಮಾಡಲಾಗಿದೆ. ಅಲ್ಲದೆ, ಜೂನ್ 30 ರವರೆಗೆ ಅದರಲ್ಲಿದ್ದ ಮೆಸೇಜ್ ಎಡಿಟಿಂಗ್ ವೈಶಿಷ್ಟ್ಯವನ್ನು ಸಹ ಸ್ಥಗಿತಗೊಳಿಸಲಾಗಿದೆ.

ದೇಶದಲ್ಲಿ ಇತರ ಸಾಮಾಜಿಕ ಮಾಧ್ಯಮಗಳು ಮುಕ್ತವಾಗಿ ಕಾರ್ಯನಿರ್ವಹಿಸುತ್ತಿರುವಾಗ ಕೇವಲ ತಮ್ಮ ಆ್ಯಪ್ ಅನ್ನು ಮಾತ್ರ ಏಕೆ ಗುರಿಯಾಗಿಸಿ ನಿಷೇಧಿಸಲಾಗಿದೆ ಎಂದು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆಯು ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ಪರೀಕ್ಷಾ ವಂಚನೆ ತಡೆಯುವ ಸರ್ಕಾರದ ಮುನ್ನೆಚ್ಚರಿಕಾ ಕ್ರಮಕ್ಕೆ ನ್ಯಾಯಾಲಯ ಈಗ ಸಂಪೂರ್ಣ ಸಹಮತ ವ್ಯಕ್ತಪಡಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು