ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ಜಲ ಮಂಡಳಿ ಹಗರಣ: ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು ಮಂಜೂರು

PPeepal Media

Peepal Media ದೇಶ

• 1 ನಿಮಿಷದ ಓದು

ದೆಹಲಿ ಜಲ ಮಂಡಳಿ ಹಗರಣ: ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು ಮಂಜೂರು

ದೆಹಲಿ: ದೆಹಲಿ ಜಲ ಮಂಡಳಿ (ಡಿಜೆಬಿ) ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆಮ್ ಆದ್ಮಿ ಪಾರ್ಟಿ (ಆಪ್) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ದೆಹಲಿಯ ರೌಸ್ ಅವೆನ್ಯೂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದ್ದು, ಅವರಿಗೆ ದೊಡ್ಡ ಮಟ್ಟದ ನಿರಾಳತೆ ದೊರೆತಿದೆ.

₹೨ ಲಕ್ಷ ಮೊತ್ತದ ಶ್ಯೂರಿಟಿ ಬಾಂಡ್ ಹಾಗೂ ಇಬ್ಬರ ಸಾಕ್ಷಿ ಸಹಿಗಳನ್ನು ಷರತ್ತಾಗಿ ವಿಧಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ (ಪಿಸಿ ಆಕ್ಟ್) ವಿಶೇಷ ನ್ಯಾಯಾಧೀಶರು ಈ ಜಾಮೀನು ಆದೇಶ ಹೊರಡಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ, ಜಲ ಮಂಡಳಿಯ ಕೊಳಚೆ ನೀರು ಸಂಸ್ಕರಣಾ ಘಟಕದ (ಎಸ್‌ಟಿಪಿ) ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪದಡಿ ಆಗಸ್ಟ್ ೧೮ರಂದು ದೆಹಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಜೈನ್ ಅವರೊಂದಿಗೆ ಡಿಜೆಬಿ ಮಾಜಿ ಸಿಇಒ ಉದಿತ್ ಪ್ರಕಾಶ್ ರಾಯ್, ಮಾಜಿ ಕನ್ಸಲ್ಟೆಂಟ್ ಅಂಕಿತ್ ಶ್ರೀವಾಸ್ತವ ಸೇರಿದಂತೆ ಇಬ್ಬರನ್ನು ಎಸಿಬಿ ವಶಕ್ಕೆ ಪಡೆದಿತ್ತು.

ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಜೈನ್ ರೌಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಈ ಬಂಧನ ರಾಜಕೀಯ ಪ್ರೇರಿತ ಪಿತೂರಿಯ ಭಾಗ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಈ ಹಿಂದೆ ವಾಗ್ದಾಳಿ ನಡೆಸಿದ್ದು, ಪ್ರಕರಣವು ಆಪ್ ಮತ್ತು ಬಿಜೆಪಿ ನಡುವೆ ತೀವ್ರ ರಾಜಕೀಯ ಸಮರಕ್ಕೆ ಎಡೆಮಾಡಿಕೊಟ್ಟಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು