ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಂತರ್‌ ಮಂತರ್‌ 2.0 | ರೈಲುಗಳಿಂದ ಬಲವಂತವಾಗಿ ಕೆಳಕ್ಕಿಳಿಸಿದ ಪೊಲೀಸರು, ಮನೆಗಳಿಗೆ ನುಗ್ಗಿ ಯುವಕರ ಬಂಧನ!

P

Peepal Media • ದೇಶ

• 1 ನಿಮಿಷದ ಓದು

ಜಂತರ್‌ ಮಂತರ್‌ 2.0 | ರೈಲುಗಳಿಂದ ಬಲವಂತವಾಗಿ ಕೆಳಕ್ಕಿಳಿಸಿದ ಪೊಲೀಸರು, ಮನೆಗಳಿಗೆ ನುಗ್ಗಿ ಯುವಕರ ಬಂಧನ!

ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಶನಿವಾರ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಆತಂಕ ಮತ್ತು ನಡುಕ ದೇಶಾದ್ಯಂತ ಇರುವ ರೈಲ್ವೆ ನಿಲ್ದಾಣಗಳಲ್ಲೇ ಎದ್ದು ಕಾಣತೊಡಗಿದೆ. ‘ಜಂತರ್ ಮಂತರ್ 2.0’ ಧರಣಿಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದ ಲಕ್ಷಾಂತರ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಮಾರ್ಗಮಧ್ಯದಲ್ಲೇ ಅಡ್ಡಗಟ್ಟಿ, ರೈಲುಗಳಿಂದ ಕೆಳಕ್ಕಿಳಿಸಿ ವಶಕ್ಕೆ ಪಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಎಡಪಕ್ಷಗಳು ಗಂಭೀರವಾಗಿ ಆರೋಪಿಸಿವೆ. ದೇಶಾದ್ಯಂತ ಕನಿಷ್ಠ 10,000ಕ್ಕೂ ಹೆಚ್ಚು ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸಿಜೆಪಿ ಸಹ-ಸಂಚಾಲಕ ಅಶುತೋಷ್ ರಾಂಕಾ ತಿಳಿಸಿದ್ದಾರೆ.

ರೈಲುಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಪೊಲೀಸರು ಯುವಕರನ್ನು ಬಲವಂತವಾಗಿ ಎಳೆದೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಮಧ್ಯಪ್ರದೇಶದ ಇಟಾರ್ಸಿ ನಿಲ್ದಾಣದಲ್ಲಿ ದೆಹಲಿಗೆ ತೆರಳುತ್ತಿದ್ದ ಗೋವಾ ಎಕ್ಸ್‌ಪ್ರೆಸ್ ರೈಲಿನಿಂದ ಸುಮಾರು 15 ವಿದ್ಯಾರ್ಥಿಗಳನ್ನು ಪೊಲೀಸರು ಬಲವಂತವಾಗಿ ಕೆಳಕ್ಕಿಳಿಸಿದ್ದಾರೆ.

ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆಯೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಆದರೆ, ವಿದ್ಯಾರ್ಥಿಗಳನ್ನು ಬಂಧಿಸಿಲ್ಲ; ಅವರು ತಮ್ಮ ಸ್ವಂತ ಇಷ್ಟದ ಮೇರೆಗೆ ಸ್ಥಳೀಯ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಇಟಾರ್ಸಿ ಜಿಆರ್‌ಪಿ ಇನ್‌ಸ್ಪೆಕ್ಟರ್ ಸಂಜಯ್ ಚೌಕ್ಸೆ ಸಮರ್ಥಿಸಿಕೊಂಡಿದ್ದಾರೆ.

ಈ ಬೆಳವಣಿಗೆಯ ಕುರಿತು ತೀವ್ರ ಆಕ್ರೋಶ ಹೊರಹಾಕಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, “ಇನ್ನೂ ಶುರುವೇ ಆಗದ ಪ್ರತಿಭಟನೆಗಾಗಿ ಜನರನ್ನು ಹೀಗೆ ವಶಕ್ಕೆ ಪಡೆಯುವುದು, ಹೊಡೆಯುವುದು ಮತ್ತು ಬಂಧಿಸುವುದಾದರೆ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನೇ (Emergency) ಏಕೆ ಘೋಷಿಸಬಾರದು? ಈ ಸರ್ಕಾರ ಸೃಷ್ಟಿಸುತ್ತಿರುವ ಅರಾಜಕತೆ ಅವರ ಊಹೆಗೂ ಮುನ್ನವೇ ಅವರ ಅಧಿಕಾರದ ಕುರ್ಚಿಯನ್ನು ಅಲುಗಾಡಿಸಲಿದೆ,” ಎಂದು ಎಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲೂ ಸಿಜೆಪಿ ಕಾರ್ಯಕರ್ತರನ್ನು ದೊಡ್ಡ ಮಟ್ಟದಲ್ಲಿ ಬಂಧಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಕೋಲ್ಕತ್ತಾದಲ್ಲಿ ಸಿಜೆಪಿ ನಿಯೋಗವನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ರಾಂಕಾ ಹೇಳಿದ್ದಾರೆ. ಅಲ್ಲದೆ, ಕಾಲಿನ ಮೂಳೆ ಮುರಿತದಿಂದ ಚೇತರಿಸಿಕೊಳ್ಳುತ್ತಿದ್ದ ಸಂಘಟನೆಯ ರಾಜಸ್ಥಾನ ಸಹ-ಉಸ್ತುವಾರಿ ದೀಪಕ್ ಬಲಿಯಾನ್ ಅವರನ್ನು ಆಳ್ವಾರ್‌ನ ಅವರ ನಿವಾಸದಿಂದಲೇ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಆಪಾದಿಸಲಾಗಿದೆ.

ಪಿಜಿ, ಹಾಸ್ಟೆಲ್‌ಗಳಲ್ಲಿ ಪೊಲೀಸರ ಹದ್ದಿನ ಕಣ್ಣು:

ಇನ್ನೊಂದೆಡೆ, ದೆಹಲಿಯಾದ್ಯಂತ ಇರುವ ವಿದ್ಯಾರ್ಥಿಗಳ ಪಿಜಿಗಳು ಮತ್ತು ಹಾಸ್ಟೆಲ್‌ಗಳಿಗೆ ಪೊಲೀಸರು ತೆರಳಿ ತಪಾಸಣೆ ನಡೆಸುತ್ತಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ದೆಹಲಿಗೆ ಬರದಂತೆ ತಡೆಯಲು ಪೊಲೀಸರು ಮನೆ ಮನೆಗೆ ತೆರಳಿ ಬೆದರಿಸುತ್ತಿದ್ದಾರೆ ಹಾಗೂ ರಾಜ್ಯಾದ್ಯಂತ ಗೃಹಬಂಧನಗಳನ್ನು ಹೇರುತ್ತಿದ್ದಾರೆ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ ಮತ್ತು ಐಸಾ (AISA) ಆರೋಪಿಸಿವೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version