ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುಎನ್‌ಐ ಕಚೇರಿ ಮೇಲೆ ದಾಳಿ: ಪತ್ರಕರ್ತರನ್ನು ಬಲವಂತವಾಗಿ ಹೊರಹಾಕಿದ ದೆಹಲಿ ಪೊಲೀಸ್

PPeepal Media

Peepal Media ದೇಶ

• 1 ನಿಮಿಷದ ಓದು

ಯುಎನ್‌ಐ ಕಚೇರಿ ಮೇಲೆ ದಾಳಿ: ಪತ್ರಕರ್ತರನ್ನು ಬಲವಂತವಾಗಿ ಹೊರಹಾಕಿದ ದೆಹಲಿ ಪೊಲೀಸ್

ಪ್ರಮುಖ ವಾರ್ತಾ ಸಂಸ್ಥೆ ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (UNI) ಕಚೇರಿಯ ಮೇಲೆ ದೆಹಲಿ ಪೊಲೀಸರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ. ಅರೆಸೇನಾ ಪಡೆಗಳೊಂದಿಗೆ ಯಾವುದೇ ಮುನ್ಸೂಚನೆ ನೀಡದೆ ಬಲವಂತವಾಗಿ ಕಚೇರಿಯನ್ನು ಖಾಲಿ ಮಾಡಿಸಿದ್ದಾರೆ. ಕರ್ತವ್ಯದಲ್ಲಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಬಲವಂತವಾಗಿ ಹೊರಕ್ಕೆ ತಳ್ಳಿದ್ದಾರೆ. ಮಹಿಳಾ ಪತ್ರಕರ್ತರೊಂದಿಗೂ ಅಸಭ್ಯವಾಗಿ ವರ್ತಿಸಲಾಗಿದೆ.

ರಾತ್ರಿ ತಡವಾದ ನಂತರ ಹಠಾತ್ತನೆ ಕೆಲವು ಸರ್ಕಾರಿ ಅಧಿಕಾರಿಗಳು, ದೆಹಲಿ ಪೊಲೀಸರು, ನೂರಾರು ಅರೆಸೇನಾ ಪಡೆಗಳ ಸಿಬ್ಬಂದಿ ಮತ್ತು ಅಧಿಕಾರಿಗಳು ಆವರಣದೊಳಗೆ ಪ್ರವೇಶಿಸಿದರು. ಉದ್ಯೋಗಿಗಳನ್ನು ತಕ್ಷಣವೇ ನ್ಯೂಸ್‌ರೂಮ್ ಖಾಲಿ ಮಾಡಿ ಆವರಣದಿಂದ ಹೊರಗೆ ಹೋಗುವಂತೆ ಒತ್ತಡ ಹೇರಿದರು. ಉದ್ಯೋಗಿಗಳು ಸ್ವಯಂಪ್ರೇರಿತರಾಗಿ ಹೊರಗೆ ಹೋಗದಿದ್ದರೆ ಬಲಪ್ರಯೋಗ ಮಾಡಬೇಕಾಗುತ್ತದೆ ಎಂದು ಅವರು ಬೆದರಿಕೆ ಹಾಕಿದರು. ಈ ಘಟನೆಯು ಭಾರಿ ಸಂಚಲನ ಮೂಡಿಸಿದೆ.

ಆಡಳಿತ ಮಂಡಳಿಗೆ ತಿಳಿಸಬೇಕೆಂದು, ಅವರು ಬರುವವರೆಗೆ ಕಾಯಬೇಕೆಂದು ಮತ್ತು ಆ ಮಟ್ಟಿಗೆ ಸ್ವಲ್ಪ ಸಮಯ ನೀಡಬೇಕೆಂದು ಆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪತ್ರಕರ್ತರು ಕೇಳಿಕೊಂಡರೂ ಕೇಳಿಸಿಕೊಳ್ಳದೆ ಪೊಲೀಸರು ವರ್ತಿಸಿದ ರೀತಿಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸುಮಾರು 40 ವರ್ಷಗಳ ಹಿಂದೆ ರಫಿ ಮಾರ್ಗದಲ್ಲಿ ಸ್ಥಳವನ್ನು ನಿಗದಿಪಡಿಸಿತ್ತು, ಅಂದಿನಿಂದ ನಿಯಮಗಳ ಪ್ರಕಾರ ಕಟ್ಟಡವನ್ನು ನಿರ್ಮಿಸಲು ಆ ಸಂಸ್ಥೆಯ ವಿಫಲವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಬಗ್ಗೆ ಭೂ ಅಭಿವೃದ್ಧಿ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯ ನೀಡಿದ ಆದೇಶದ ಮೇರೆಗೆ ಖಾಲಿ ಮಾಡಿಸುತ್ತಿದ್ದೇವೆ ಎಂದು ಹೇಳುತ್ತಾ ಅಧಿಕಾರಿಗಳು ಇಷ್ಟಬಂದಂತೆ ವರ್ತಿಸಿದರು.

ನೋಟಿಸ್ ತೋರಿಸುವಂತೆ ಕೇಳಿದರೂ ಪೊಲೀಸರು ಕಿವಿಗೊಡಲಿಲ್ಲ. ಉದ್ಯೋಗಿಗಳನ್ನು ಬಲವಂತವಾಗಿ ಹೊರದೂಡಿ, ಕಚೇರಿಯನ್ನು ಪೊಲೀಸರು ವಶಪಡಿಸಿಕೊಂಡರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು