ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ | ಮುಂದುವರಿದ ಪೊಲೀಸ್-ವಿದ್ಯಾರ್ಥಿಗಳ ಸೋಶಿಯಲ್ ಮೀಡಿಯಾ ವಾರ್: ಫೋಟೋ, ವಿಡಿಯೋಗಳ ಸಮರ!

PPeepal Media

Peepal Media ದೇಶ

• 1 ನಿಮಿಷದ ಓದು

ದೆಹಲಿ | ಮುಂದುವರಿದ ಪೊಲೀಸ್-ವಿದ್ಯಾರ್ಥಿಗಳ ಸೋಶಿಯಲ್ ಮೀಡಿಯಾ ವಾರ್: ಫೋಟೋ, ವಿಡಿಯೋಗಳ ಸಮರ!

ದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಸೋಮವಾರ ನಡೆದ ಹಿಂಸಾತ್ಮಕ ಘಟನೆಗಳ ನಂತರ, ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ದೆಹಲಿ ಪೊಲೀಸರ ನಡುವೆ ‘ಸಾಮಾಜಿಕ ಜಾಲತಾಣ ಸಮರ’ (Social Media War) ಆರಂಭವಾಗಿದೆ. ‘ಮೊದಲು ನೀವೇ ದಾಳಿ ಮಾಡಿದ್ದು’ ಎನ್ನುತ್ತಾ ಎರಡೂ ಕಡೆಯವರು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿದ್ದು, ತಮ್ಮ ವಾದಗಳಿಗೆ ಬೆಂಬಲವಾಗಿ ಫೋಟೋ ಹಾಗೂ ವಿಡಿಯೋ ಸಾಕ್ಷ್ಯಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರು ಸಂಸತ್ತಿನತ್ತ ಮುನ್ನುಗ್ಗಲು ಯತ್ನಿಸಿ, ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು, ಅಶ್ರುವಾಯು ಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿದ್ದರು.

ವಿದ್ಯಾರ್ಥಿಗಳ ಮೇಲಿನ ಪೊಲೀಸರ ದಬ್ಬಾಳಿಕೆಯನ್ನು ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಲಾಠಿಚಾರ್ಜ್ ಮತ್ತು ಹಲ್ಲೆಯ ಫೋಟೋ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ತಮ್ಮ ತಪ್ಪು ಮುಚ್ಚಿಕೊಳ್ಳಲು ದೆಹಲಿ ಪೊಲೀಸರು ಪ್ರತಿ-ದೂರು ಹಾಗೂ ವಿವರಣೆಗಳನ್ನು ನೀಡಲು ಆರಂಭಿಸಿದ್ದಾರೆ. ತಾವು ವಿದ್ಯಾರ್ಥಿಗಳ ಮೇಲೆ ಮೊದಲು ಲಾಠಿಚಾರ್ಜ್ ಮಾಡಿಲ್ಲ ಎಂದಿರುವ ಪೊಲೀಸರು, ಪ್ರತಿಭಟನಾಕಾರರೇ ಮೊದಲು ಕಲ್ಲು ತೂರಾಟ ನಡೆಸಿ, ಸಾರ್ವಜನಿಕ ವಾಹನಗಳನ್ನು ಧ್ವಂಸಗೊಳಿಸುವಂತಹ ಹಿಂಸಾಚಾರಕ್ಕೆ ಇಳಿದಿದ್ದರು ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೆ, ಇದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಕ್ರಮವನ್ನು ಸಮರ್ಥಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು