ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಜೆಪಿ ತಿರಂಗಾ ಮಾರ್ಚ್ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

P

Peepal Media • ದೇಶ

• 1 ನಿಮಿಷದ ಓದು

ಸಿಜೆಪಿ ತಿರಂಗಾ ಮಾರ್ಚ್ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಶುಕ್ರವಾರ ಕರೆ ನೀಡಿರುವ ‘ಲೆಹರಾ ದೋ ತಿರಂಗಾ’ ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಮತ್ತೆ ಕೋಟೆಯಾಗಿ ಮಾರ್ಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನವದೆಹಲಿ ಮತ್ತು ಸುತ್ತಮುತ್ತಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು 25,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಸಿಜೆಪಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದೆ. ಇದರ ಜತೆಗೆ ಪಕ್ಷದ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರ ಬಂಧನವನ್ನು ವಿರೋಧಿಸಿ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಸಮಾವೇಶಗೊಳ್ಳಲು ಸಿಜೆಪಿ ಕರೆ ನೀಡಿದೆ. ಈ ಪ್ರತಿಭಟನೆಗೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಹಾಗೂ ಆಮ್ ಆದ್ಮಿ ಪಕ್ಷ (AAP) ಕೂಡ ಬೆಂಬಲ ವ್ಯಕ್ತಪಡಿಸಿವೆ.

ಸೆಂಟ್ರಲ್ ಪಾರ್ಕ್ ಬಂದ್, ಹದ್ದಿನ ಕಣ್ಣಿಟ್ಟ ಪೊಲೀಸ್ ಇಲಾಖೆ:

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೆಂಟ್ರಲ್ ಪಾರ್ಕ್‌ನಲ್ಲಿ ಜಮಾಯಿಸದಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ. ಆಡಳಿತಾತ್ಮಕ ಕಾರಣಗಳನ್ನು ನೀಡಿ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ಶುಕ್ರವಾರ ಮತ್ತು ಶನಿವಾರದಂದು ಸೆಂಟ್ರಲ್ ಪಾರ್ಕ್ ಅನ್ನು ಸಾರ್ವಜನಿಕರಿಗೆ ಸಂಪೂರ್ಣವಾಗಿ ನಿರ್ಬಂಧಿಸಿದೆ. ಸೆಂಟ್ರಲ್ ಪಾರ್ಕ್ ಪ್ರವೇಶ ದ್ವಾರಗಳು ಮತ್ತು ರಾಜೀವ್ ಚೌಕ್ ಮೆಟ್ರೋ ನಿಲ್ದಾಣದ ಪ್ರಮುಖ ಗೇಟ್‌ಗಳಲ್ಲಿ ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕಣ್ಗಾವಲು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪಾಲಿಕಾ ಬಜಾರ್ ಹಾಗೂ ಸಂಸದ್ ಮಾರ್ಗ ಸುತ್ತಮುತ್ತ ಹಲವು ಬಸ್‌ಗಳನ್ನು ಸನ್ನದ್ಧವಾಗಿಡಲಾಗಿದೆ.

ವರ್ತಕರ ಕಳವಳ ಮತ್ತು ನಾಯಕರ ಆರೋಪ:

ಹಬ್ಬದ ಸೀಸನ್‌ನಲ್ಲೇ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ವ್ಯಾಪಾರ-ವಹಿವಾಟಿಗೆ ತೀವ್ರ ಹೊಡೆತ ಬಿದ್ದಿದೆ ಎಂದು ಪಾಲಿಕಾ ಬಜಾರ್ ಹಾಗೂ ಕನ್ನಾಟ್ ಪ್ಲೇಸ್‌ನ ಸ್ಥಳೀಯ ವ್ಯಾಪಾರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಾಟ್ ಪ್ಲೇಸ್ ಪ್ರತಿಭಟನಾ ಸ್ಥಳವಲ್ಲ ಎಂದು ಹೊಸದಿಲ್ಲಿ ಟ್ರೇಡರ್ಸ್ ಅಸೋಸಿಯೇಷನ್ ಅಸಮಾಧಾನ ವ್ಯಕ್ತಪಡಿಸಿದೆ. ಮತ್ತೊಂದೆಡೆ, ತಮ್ಮ ಚಲನವಲನಗಳ ಮೇಲೆ ಪೊಲೀಸರು ನಿರಂತರ ನಿಗಾ ಇರಿಸಿದ್ದು, ಬಿಳಿ ಸ್ಕಾರ್ಪಿಯೋ ವಾಹನವೊಂದು ತಮ್ಮನ್ನು ಬೆನ್ನಟ್ಟುತ್ತಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ‘ಎಕ್ಸ್’ (ಟ್ವಿಟರ್) ಮೂಲಕ ಗಂಭೀರ ಆರೋಪ ಮಾಡಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version