ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂಗಾರು ಅಧಿವೇಶನದಲ್ಲೇ ಕ್ಷೇತ್ರ ಪುನರ್ವಿಂಗಡಣೆ ಬಿಲ್?: ಉಭಯ ಸದನಗಳಲ್ಲಿ ಮ್ಯಾಜಿಕ್ ಫಿಗರ್ ತಲುಪಲು ಕೇಂದ್ರದ ಹೊಸ ವ್ಯೂಹ!

PPeepal Media

Peepal Media ದೇಶ

• 1 ನಿಮಿಷದ ಓದು

ಮುಂಗಾರು ಅಧಿವೇಶನದಲ್ಲೇ ಕ್ಷೇತ್ರ ಪುನರ್ವಿಂಗಡಣೆ ಬಿಲ್?: ಉಭಯ ಸದನಗಳಲ್ಲಿ ಮ್ಯಾಜಿಕ್ ಫಿಗರ್ ತಲುಪಲು ಕೇಂದ್ರದ ಹೊಸ ವ್ಯೂಹ!

ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮತ್ತು ‘ಒಂದು ದೇಶ, ಒಂದು ಚುನಾವಣೆ’ ಬಿಲ್ ಅನ್ನು ಮಂಡಿಸಿ, ಅಂಗೀಕಾರ ಪಡೆದುಕೊಳ್ಳಲು ಕೇಂದ್ರ ಸರ್ಕಾರ ಭರದ ಸಿದ್ಧತೆ ನಡೆಸುತ್ತಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ಕಳೆದ ಏಪ್ರಿಲ್‌ನಲ್ಲಿ ಲೋಕಸಭೆಯಲ್ಲಿ ಅಗತ್ಯ ಸಂಖ್ಯಾಬಲದ ಕೊರತೆಯಿಂದಾಗಿ ಬಿದ್ದುಹೋಗಿದ್ದ ಈ ಮಹತ್ವದ ಬಿಲ್ ಅನ್ನು 2029ರ ಲೋಕಸಭಾ ಚುನಾವಣೆಗೆ ಮುನ್ನವೇ ಕಾನೂನಾಗಿ ಜಾರಿಗೆ ತರಲು ಎನ್‌ಡಿಎ ಸರ್ಕಾರ ಗಂಭೀರ ಕಸರತ್ತು ನಡೆಸುತ್ತಿದೆ.

ಬದಲಾದ ರಾಜಕೀಯ ಪರಿಸ್ಥಿತಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದಿರುವ ರಾಜಕೀಯ ಬೆಳವಣಿಗೆಗಳು ಕೇಂದ್ರ ಸರ್ಕಾರದ ಈ ಆಲೋಚನೆಗೆ ಹೊಸ ಆಶಾವಾದ ಮೂಡಿಸಿವೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯ 15 ವರ್ಷಗಳ ಆಡಳಿತ ಕೊನೆಗೊಂಡು ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿದೆ. ಇದರ ಬೆನ್ನಲ್ಲೇ ಟಿಎಂಸಿಯ ಇಬ್ಬರು ರಾಜ್ಯಸಭಾ ಸಂಸದರು ರಾಜೀನಾಮೆ ನೀಡಿದ್ದು, 20ಕ್ಕೂ ಹೆಚ್ಚು ಲೋಕಸಭಾ ಸಂಸದರು ಬಂಡಾಯವೆದ್ದಿದ್ದಾರೆ. ಇತ್ತ ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರ ಕಳೆದುಕೊಂಡಿದ್ದು, ಕಾಂಗ್ರೆಸ್‌ನ ರಾಜಕಾರಣದಿಂದ ಬೇಸತ್ತು ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷವು ‘ಇಂಡಿಯಾ’ ಮೈತ್ರಿಕೂಟದಿಂದ ಹೊರಬಂದಿದೆ.

ಕಳೆದ ಏಪ್ರಿಲ್‌ನಲ್ಲಿ ಬಿಲ್ ಮಂಡನೆಯಾದಾಗ ಟಿಎಂಸಿಯ 29 ಮತ್ತು ಡಿಎಂಕೆಯ 22 ಸಂಸದರು ಇದರ ವಿರುದ್ಧ ಮತ ಚಲಾಯಿಸಿದ್ದರು. ಆದರೆ ಈಗ ಮೈತ್ರಿಕೂಟ ಮುರಿದುಬಿದ್ದಿರುವುದರಿಂದ ಡಿಎಂಕೆಯನ್ನು ಸಂಪರ್ಕಿಸಲು ಕೇಂದ್ರ ಸರ್ಕಾರ ಪ್ರಯತ್ನ ಆರಂಭಿಸಿದೆ. ಹಾಗೆಯೇ ಟಿಎಂಸಿಯ ಬಂಡಾಯ ಸಂಸದರ ನಡೆ ಕೂಡ ಬಿಲ್ ಪರವಾಗಿ ತಿರುಗುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮ್ಯಾಜಿಕ್ ಫಿಗರ್ ತಲುಪುವ ತಂತ್ರ: ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ಬರಬೇಕಾದರೆ ಸಂವಿಧಾನ ತಿದ್ದುಪಡಿ ಅಗತ್ಯವಿದ್ದು, ಇದಕ್ಕಾಗಿ ಉಭಯ ಸದನಗಳಲ್ಲಿ 2/3 ರಷ್ಟು ವಿಶೇಷ ಬಹುಮತದ ಅಗತ್ಯವಿದೆ.

  • ಲೋಕಸಭೆ: ಪ್ರಸ್ತುತ ಇರುವ 540 ಸದಸ್ಯರಲ್ಲಿ ಬಿಲ್ ಅಂಗೀಕಾರಕ್ಕೆ ಕನಿಷ್ಠ 360 ಸಂಸದರ ಬೆಂಬಲ ಬೇಕು. ಸದ್ಯ ಎನ್‌ಡಿಎ ಮೈತ್ರಿಕೂಟ 293 (54%) ಸದಸ್ಯರನ್ನು ಹೊಂದಿದೆ. ಕಳೆದ ಬಾರಿ ಬಿಲ್ ಪರ 298 ಮತ್ತು ವಿರುದ್ಧ 230 ಮತಗಳು ಬಿದ್ದಿದ್ದರಿಂದ ಬಿಲ್ ಬಿದ್ದುಹೋಗಿತ್ತು. ಈಗ ‘ಇಂಡಿಯಾ’ ಮೈತ್ರಿಕೂಟದಿಂದ ಹೊರಬಂದಿರುವ ಡಿಎಂಕೆ (22) ಮತ್ತು ಟಿಎಂಸಿ (29) ಸಂಸದರು ಮತದಾನದಿಂದ ದೂರ ಉಳಿದರೂ ಅಥವಾ ಬೆಂಬಲಿಸಿದರೂ ಲೋಕಸಭೆಯಲ್ಲಿ ಬಿಲ್ ಸುಲಭವಾಗಿ ಗೆಲ್ಲಬಹುದು. ಇದರೊಂದಿಗೆ ಆಪ್ (3) ಮತ್ತು ಸಮಾಜವಾದಿ ಪಕ್ಷ (37) ಬೆಂಬಲ ನೀಡಿದರೆ ಹಾದಿ ಮತ್ತಷ್ಟು ಸುಗಮವಾಗಲಿದೆ.
  • ರಾಜ್ಯಸಭೆ: ಒಟ್ಟು 244 ಸದಸ್ಯರಲ್ಲಿ ಬಿಲ್ ಪಾಸ್ ಆಗಲು 163 ಸದಸ್ಯರ ಬೆಂಬಲ ಬೇಕು. ಸದ್ಯ ಎನ್‌ಡಿಎಗೆ 141 (58%) ಸದಸ್ಯರ ಬಲವಿದೆ. ಟಿಎಂಸಿಯ 13 ಸಂಸದರಲ್ಲಿ ಇಬ್ಬರು ಈಗಾಗಲೇ ರಾಜೀನಾಮೆ ನೀಡಿದ್ದು, ಉಳಿದವರೂ ಅದೇ ಹಾದಿಯಲ್ಲಿದ್ದಾರೆ. ಇದರೊಂದಿಗೆ ಮೈತ್ರಿಕೂಟದಿಂದ ದೂರವಾಗಿರುವ ಡಿಎಂಕೆ (10) ಮತ್ತು ಆಪ್ (3) ಸಂಸದರು ಬೆಂಬಲಿಸಿದರೆ ರಾಜ್ಯಸಭೆಯಲ್ಲೂ ಎನ್‌ಡಿಎ ಮ್ಯಾಜಿಕ್ ಫಿಗರ್ ದಾಟುವ ಸಾಧ್ಯತೆಯಿದೆ.

ಈ ಎಲ್ಲಾ ಲೆಕ್ಕಾಚಾರಗಳನ್ನು ಪರಿಶೀಲಿಸಿದ ನಂತರವೇ ಕೇಂದ್ರ ಸರ್ಕಾರವು ಮುಂಗಾರು ಅಧಿವೇಶನದಲ್ಲಿ ಬಿಲ್ ಅನ್ನು ಮರುಮಂಡಿಸಲು ಮುಂದಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು