ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ನಾನು ಸ್ಟ್ರೀಟ್ ಫೈಟರ್’: ಕಾಂಗ್ರೆಸ್ ನಾಯಕರಿಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

PPeepal Media

Peepal Media • ದೇಶ

• 1 ನಿಮಿಷದ ಓದು

‘ನಾನು ಸ್ಟ್ರೀಟ್ ಫೈಟರ್’: ಕಾಂಗ್ರೆಸ್ ನಾಯಕರಿಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ ಅಂದರೆ ಸೋಮವಾರದಂದು ಬಿಜೆಪಿ ಸಂಸದ ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿಗೆ ಆಗಮಿಸಿದಾಗ, ಬಿಜೆಪಿ ಸಂಸದರು ಹಾಗೂ ಎನ್‌ಡಿಎ (NDA) ಮಿತ್ರಪಕ್ಷಗಳ ನಾಯಕರು ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಸಂಸತ್ ಭವನದ ಆವರಣದಲ್ಲಿ ‘ಧರ್ಮೇಂದ್ರ ಪ್ರಧಾನ್ ಜಿಂದಾಬಾದ್’ ಎಂಬ ಘೋಷಣೆಗಳು ಮೊಳಗಿದವು ಮತ್ತು ಹಲವು ಸಂಸದರು ಅವರಿಗೆ ಶಾಲು ಹೊದಿಸಿ, ಸಾಂಪ್ರದಾಯಿಕ ಟೋಪಿ ತೊಡಿಸಿ ಗೌರವಿಸಿದರು.

ಇದೇ ವೇಳೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಪ್ರಧಾನ್ ಅವರ ಬಳಿ ಬಂದು, “It happens” (ಹೀಗೆಲ್ಲಾ ಆಗುತ್ತಿರುತ್ತದೆ) ಎಂದಾಗ, ತಕ್ಷಣವೇ ತಿರುಗೇಟು ನೀಡಿದ ಪ್ರಧಾನ್, “ಏನೂ ಆಗಿಲ್ಲ. ನಾನು ಎಸಿ ಕೊಠಡಿಯಲ್ಲಿ ಕುಳಿತು ಕೆಲಸ ಮಾಡುವ ಕಾರ್ಯಕರ್ತನಲ್ಲ, ಸ್ಟ್ರೀಟ್ ಫೈಟರ್ (ಹೋರಾಟಗಾರ)” ಎಂದು ಉತ್ತರಿಸಿದರು.

ಶನಿವಾರದಂದು ರಾಜೀನಾಮೆ

ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿದ್ದ ಸತತ ಹೋರಾಟದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಾವುದೇ ವೈಯಕ್ತಿಕ ಭ್ರಷ್ಟಾಚಾರದ ಆರೋಪಗಳಿಲ್ಲದಿದ್ದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಮೊದಲ ಸಚಿವ ಪ್ರಧಾನ್ ಎಂದು ಬಿಜೆಪಿ ಸಂಸದರು ಅವರ ಬೆಂಬಲಕ್ಕೆ ನಿಂತರು.

ರಾಜೀನಾಮೆ ನೀಡಿದ ನಂತರ ‘ಎಕ್ಸ್’ (X) ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಧಾನ್, “ಕಳೆದ 10 ದಿನಗಳ ಘಟನೆಗಳಿಂದ ನನಗೆ ತೀವ್ರ ಬೇಸರವಾಗಿದೆ. ಇದು ನನ್ನ ವೈಯಕ್ತಿಕ ಗೌರವದ ವಿಷಯವಲ್ಲ. ಭಾರತದ ಯುವಶಕ್ತಿಯೇ ಈ ದೇಶದ ದೊಡ್ಡ ಶಕ್ತಿ ಮತ್ತು ದೇಶದ ಯುವಜನರನ್ನು ಗೊಂದಲದ ಜಾಲಕ್ಕೆ ಸಿಲುಕಲು ಬಿಡುವುದಿಲ್ಲ ಎಂಬುದು ನನ್ನ ಸಂಕಲ್ಪ” ಎಂದು ಬರೆದುಕೊಂಡಿದ್ದರು.

ಮುಂದಿನ ಹಾದಿ ಏನು?

ಧರ್ಮೇಂದ್ರ ಪ್ರಧಾನ್ ಅವರಿಗೆ ಬಿಜೆಪಿ ಸಂಘಟನೆಯಲ್ಲಿ ದೊಡ್ಡ ಜವಾಬ್ದಾರಿ ನೀಡುವ ಸಾಧ್ಯತೆಯಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಅವರಿಗೆ ಪಕ್ಷದ ಚುನಾವಣಾ ತಂತ್ರಗಾರಿಕೆಯ ಉಸ್ತುವಾರಿ ಹಸ್ತಾಂತರಿಸಬಹುದು ಎನ್ನಲಾಗಿದೆ.

ಒಡಿಶಾ ಬಿಜೆಪಿಯ ಅತ್ಯಂತ ಪ್ರಭಾವಿ ನಾಯಕರೆಂದು ಗುರುತಿಸಿಕೊಂಡಿರುವ ಪ್ರಧಾನ್, ಈ ಹಿಂದೆ ಬಿಹಾರ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ರಾಜೀನಾಮೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಶಿಕ್ಷಣ ಕ್ಷೇತ್ರದಲ್ಲಿ ಪ್ರಧಾನ್ ತಂದ ಸುಧಾರಣೆಗಳನ್ನು ಶ್ಲಾಘಿಸಿದ್ದಾರೆ. ಅವರ ಈ ನಿರ್ಧಾರವು ‘ಹೊಣೆಗಾರಿಕೆ, ತ್ಯಾಗ ಮತ್ತು ದೇಶಹಿತ’ದ ಸಂಕೇತ ಎಂದು ಬಿಜೆಪಿ ಬಣ್ಣಿಸಿದ್ದು, ಒಡಿಶಾ ರಾಜಕಾರಣದಲ್ಲಿ ಅವರ ಪ್ರಭಾವಕ್ಕೆ ಯಾವುದೇ ಕುಂದು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು