ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಜಾಪ್ರಭುತ್ವದ ಹಂತಕರ ಸತ್ಯ ಜಗತ್ತಿಗೆ ತಿಳಿಯಲಿ: ಮತಗಳ್ಳತನದ ವಿರುದ್ಧ ಲಂಡನ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದ ಧ್ರುವ್ ರಾಠಿ

P

Peepal Media • ದೇಶ

• 1 ನಿಮಿಷದ ಓದು

ಪ್ರಜಾಪ್ರಭುತ್ವದ ಹಂತಕರ ಸತ್ಯ ಜಗತ್ತಿಗೆ ತಿಳಿಯಲಿ: ಮತಗಳ್ಳತನದ ವಿರುದ್ಧ ಲಂಡನ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದ ಧ್ರುವ್ ರಾಠಿ

ದೆಹಲಿ / ಲಂಡನ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ, ಇದೀಗ ದೇಶ ತೊರೆದು ಲಂಡನ್ ತಲುಪಿದ್ದಾರೆ.

ಮತ ಕಳ್ಳತನ ಮತ್ತು ಚುನಾವಣಾ ಆಯೋಗದ ವಿವಾದವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಘೋಷಿಸಿರುವ ಅವರು, ಕೇಂದ್ರ ಸರ್ಕಾರ ಹಾಗೂ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಲಂಡನ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

ಅಕ್ಟೋಬರ್ 9ರಂದು ಜರ್ಮನಿಯಿಂದ ಭಾರತಕ್ಕೆ ಬಂದಿಳಿದಿದ್ದ ಧ್ರುವ್ ರಾಠಿ ಅವರನ್ನು ಮರುದಿನ ಮುಂಜಾನೆ ಗುರುಗ್ರಾಮ್‌ನಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದು, ಸುಮಾರು 20-23 ಗಂಟೆಗಳ ಕಾಲ ಠಾಣೆಯಲ್ಲಿ ಇರಿಸಿಕೊಂಡ ನಂತರ ಬಿಡುಗಡೆ ಮಾಡಿದ್ದರು.

ಇದೀಗ ಲಂಡನ್ ತಲುಪಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, “ನಾನು ಲಂಡನ್ ತಲುಪಿದ್ದೇನೆ. ಮತ ಕಳ್ಳರು ಮತ್ತು ಪ್ರಜಾಪ್ರಭುತ್ವದ ಹಂತಕರ ನೈಜ ಮುಖವನ್ನು ಇಡೀ ಜಗತ್ತು ನೋಡುವ ಸಮಯ ಬಂದಿದೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಬ್ರಿಟನ್ ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸಿ,” ಎಂದು ಕರೆ ನೀಡಿದ್ದಾರೆ.

ಇದೇ ವೇಳೆ ತಮ್ಮ ಪೌರತ್ವದ ಬಗ್ಗೆ ಎದ್ದಿದ್ದ ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಅವರು, ಪಾಸ್‌ಪೋರ್ಟ್ ಪ್ರದರ್ಶಿಸಿ ತಾವು ಭಾರತೀಯ ಪ್ರಜೆಯೆಂದೇ ಪ್ರತಿಪಾದಿಸಿದ್ದಾರೆ.

ಮತ್ತೊಂದೆಡೆ, ರಾಜಧಾನಿ ದೆಹಲಿಯಲ್ಲಿ ‘ಲಹರಾ ದೋ ತಿರಂಗಾ’ ಮೆರವಣಿಗೆಯ ವೇಳೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಪೊಲೀಸರು ಬಂಧಿಸಿದ್ದು, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.

ಇದಕ್ಕೂ ಮೊದಲು ಬಂಧಿತರಾಗಿದ್ದ ಸಿಜೆಪಿ ಮುಖಂಡರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ನ್ಯಾಯಾಲಯವು 5 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸದ್ಯ ಅವರು ತಿಹಾರ್ ಜೈಲಿನಲ್ಲಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version