ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತಿರುವಾಗಲೇ ಆಮ್‌ ಆದ್ಮಿ ಪಕ್ಷದ ಶಾಸಕನನ್ನು ಬಂಧಿಸಿದ ಇಡಿ

P

Peepal Media Desk • ದೇಶ

• 1 ನಿಮಿಷದ ಓದು

ಚಂಡೀಗಢ: ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಸೋಮವಾರ ಬೆಳಗ್ಗೆ ಮಲೇರ್‌ಕೋಟ್ಲಾ ಜಿಲ್ಲೆಯ ಅಮರಗಢದಲ್ಲಿ ಶಾಸಕರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅಲ್ಲಿಗೆ ಬಂದ ಇಡಿ ಅಧಿಕಾರಿಗಳು ಅವರನ್ನು ವಶಕ್ಕೆ ತೆಗೆದುಕೊಂಡರು.

ಕಳೆದ ವರ್ಷ ದಾಖಲಾದ ರೂ. 40 ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಇಡಿ ಈ ಕ್ರಮ ಕೈಗೊಂಡಿದೆ. ಈ ಪ್ರಕರಣದಲ್ಲಿ ಪಂಜಾಬ್ ಶಾಸಕರಿಗೆ ಇಡಿ ಇದುವರೆಗೆ ಮೂರು ನೋಟಿಸ್‌ಗಳನ್ನು ನೀಡಿದೆ. ಆದರೆ ಜಸ್ವಂತ್ ಸಿಂಗ್ ಇದರತ್ತ ಗಮನ ಹರಿಸದ ಕಾರಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇಂದು ಸಂಜೆ ಶಾಸಕರನ್ನು ಮೊಹಾಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಇಡಿ ಮೂಲಗಳು ಬಹಿರಂಗಪಡಿಸಿವೆ.

ಬ್ಯಾಂಕ್ ಆಫ್ ಇಂಡಿಯಾದ ಪಂಜಾಬ್ ಲುಧಿಯಾನ ಶಾಖೆಯು ಜಸ್ವಂತ್ ಸಿಂಗ್ ಮತ್ತು ಇತರರ ವಿರುದ್ಧ ತಾರಾ ಕಾರ್ಪೊರೇಷನ್ ಲಿಮಿಟೆಡ್‌ನೊಂದಿಗೆ ಕಳೆದ ವರ್ಷ ಸಿಬಿಐಗೆ ದೂರು ಸಲ್ಲಿಸಿತ್ತು. ಇವರೆಲ್ಲರೂ ತಮ್ಮ ಬ್ಯಾಂಕ್‌ಗೆ 41 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಜಸ್ವಂತ್ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಈ ತಪಾಸಣೆ ವೇಳೆ ಲೆಕ್ಕಕ್ಕೆ ಸಿಗದ ರೂ.16.57 ಲಕ್ಷ ನಗದು, ವಿದೇಶಿ ಕರೆನ್ಸಿ, ಬ್ಯಾಂಕ್ ಹಾಗೂ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹುಡುಕಾಟಗಳ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನೂ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಶಾಸಕರ ಬಂಧನವನ್ನು ಎಎಪಿ ತೀವ್ರವಾಗಿ ಖಂಡಿಸಿದೆ ಮತ್ತು ಬಿಜೆಪಿ ಅವರ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಟೀಕಿಸಿದೆ. ಎಎಪಿಗೆ ಸೇರುವ ಮುನ್ನ ಜಶ್ವಂದರ್ ಸಿಂಗ್ ಕಷ್ಟಗಳನ್ನು ಎದುರಿಸಿದ್ದರು ಮತ್ತು ಇದು ಅವರ ಮಾನಹಾನಿ ಮಾಡಲು ಬಿಜೆಪಿ ನಡೆಸಿದ ಸಂಚು ಎಂದು ಎಎಪಿ ವಕ್ತಾರ ಮಲ್ವಿಂದರ್ ಕಾಂಗ್ ಆರೋಪಿಸಿದ್ದಾರೆ. ಬಹಿರಂಗ ಸಭೆಯಿಂದ ಶಾಸಕರನ್ನು ಕರೆದೊಯ್ದ ರೀತಿ ಎಎಪಿಗೆ ಮುಖಭಂಗ ಮಾಡಲು ಬಿಜೆಪಿ ಪ್ರಬಲ ತಂತ್ರಗಳನ್ನು ಅನುಸರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಷಯಗಳು: #karnataka #news #peepal #peepalmedia #politics
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version